ಚಂದನ್ ಶೆಟ್ಟಿ ಮತ್ತು ನಾನು... ವಿಚ್ಛೇದನದ ಬಗ್ಗೆ ಕಡೆಗೂ ಮೌನ ಮುರಿದ ನಿವೇದಿತಾ ಗೌಡ

Untitled design (52)
Published on

ಬೆಂಗಳೂರು: ಪ್ರಸಿದ್ಧ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರೀತಿ ನಿವೇದನೆ ಮಾಡಿಕೊಳ್ಳುವ ಮೂಲಕ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಕನ್ನಡದ ರ್‍ಯಾಪರ್​ ಚಂದನ್​ ಶೆಟ್ಟಿ, ಇದೀಗ ತಮ್ಮ ಪತ್ನಿ ನಿವೇದಿತಾ ಗೌಡ ಅವರೊಂದಿಗೆ ಪರಸ್ಪರ ಒಪ್ಪಿಗೆಯ ಮೇರೆಗೆ ಇಂದು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಪಡೆದಿದ್ದಾರೆ.

ಇಬ್ಬರು ಮುಂಚಿತವಾಗಿಯೇ ಮಾತನಾಡಿಕೊಂಡು, ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಕೋರಿಕೆಯನ್ನು ಇಂದು ನ್ಯಾಯಾಲಯ ಪುರಸ್ಕರಿಸಿದೆ. ಪ್ರೀತಿಸಿ ಮದುವೆಯಾದ ದಂಪತಿ ಡಿವೋರ್ಸ್​ ಪಡೆಯುವಂತ ಕಠಿಣ ನಿರ್ಧಾರಕ್ಕೆ ಬರಲು ಸಾಮಾಜಿಕ ಜಾಲತಾಣವೇ ಮುಖ್ಯ ಕಾರಣ ಎಂದು ಕೆಲವರು ಅಭಿಪ್ರಾಯಿಸಿದರೆ, ಇನ್ನೂ ಕೆಲವರು ಇವರಿಬ್ಬರ ಫೋಟೋಗಳಿಗೆ ನೆಗೆಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ.

ಇನ್ನು ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಚಂದನ್ ಶೆಟ್ಟಿ ಜತೆಗಿನ ವಿಚ್ಛೇದನದ ಬಗ್ಗೆ ಸ್ಪಷ್ಟನೆ ನೀಡಿರುವ ನಿವೇದಿತಾ ಗೌಡ, "ಈ ದಿನ, ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನ ಗೌರವಿಸಲು ಕೋರುತ್ತೇವೆ" ಎಂದಿದ್ದಾರೆ.

"ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ, ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೇವೆ. ಸೂಕ್ಷ್ಮಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದಗಳು. ಇಂತಿ ನಿಮ್ಮ ನಿವೇದಿತಾ ಗೌಡ" ಎಂದು ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net