More

    ಪ್ರಾರ್ಥನಾ ಮಂದಿರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಹಲವರಿಗೆ ಕರೊನಾ ಸೋಂಕು ಶಂಕೆ

    ನವದೆಹಲಿ: ಇಲ್ಲಿನ ನಿಜಾಮುದ್ದೀನ್‌ನಲ್ಲಿನ ಪ್ರಾರ್ಥನಾ ಮಂದಿರದಲ್ಲಿ ಸಾಮೂಹಿಕ ಪ್ರಾರ್ಥನೆಗಾಗಿ ಸೇರಿದ್ದ ನೂರಾರು ಜನರ ಪೈಕಿ ಹಲವರಲ್ಲಿ ಕರೊನಾ ವೈರಸ್ ಸೋಂಕಿನ ಲಕ್ಷಣಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಪ್ರಾರ್ಥನಾ ಮಂದಿರ ಸೇರಿ ನಿಜಾಮುದ್ದೀನ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಅಧಿಕಾರಿಗಳು ಘೋಷಿಸಿದ್ದಾರೆ.

    ಪ್ರಾರ್ಥನಾ ಮಂದಿರದಲ್ಲಿ ಹಲವು ದಿನಗ ಹಿಂದೆ ಸಾಮೂಹಿಕ ಪ್ರಾರ್ಥನೆ ಆಯೋಜಿಸಲಾಗಿತ್ತು. ನಿಷೇಧಾಜ್ಞೆಯ ಹೊರತಾಗಿ 200ಕ್ಕೂ ಹೆಚ್ಚು ಜನರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರದಲ್ಲಿ ಹಲವರಲ್ಲಿ ಕರೊನಾ ವೈರಸ್ ಸೋಂಕಿನ ಲಕ್ಷಣಗಳು ಕಂಡಬರಲಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜಿಸಿದ್ದವರಿಗೆ ನಿಷೇಧಾಜ್ಞೆ ಉಲ್ಲಂಘನೆ ನಿಮಿತ್ತ ನೋಟಿಸ್ ನೀಡಲಾಗಿದೆ. ಅಲ್ಲದೆ, ಈ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ, ಸೋಂಕು ಹರಡದಂತೆ ತಡೆಯಲು ಅಗತ್ಯ ಕ್ರಮ ಕೈಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. (ಏಜೆನ್ಸೀಸ್)

    ಚೀನಾದ ಮೊದಲ ಕರೊನಾ ಸೋಂಕಿತೆಯಿಂದ ಸ್ಫೋಟಕ ಮಾಹಿತಿ: ಜೀವಂತ ಪ್ರಾಣಿ ಮಾರುಕಟ್ಟೆ ವೈರಸ್​ ಹುಟ್ಟಿನ ಕೇಂದ್ರವಾಯಿತೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts