ಪ್ರಮಾಣಪತ್ರಗಳ ಮೇಲೆ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಸಂಖ್ಯೆ ಮುದ್ರಿಸಬೇಡಿ: ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದ ಯುಜಿಸಿ

ನವದೆಹಲಿ: ಆಧಾರ್ ಕಾರ್ಡ್‌ಗೆ ಸಂಬಂಧಿಸಿದಂತೆ ಯುಜಿಸಿ ಮಹತ್ವದ ಮಾಹಿತಿಯನ್ನು ನೀಡಿದೆ. ವಿದ್ಯಾರ್ಥಿಗಳಿಗೆ ನೀಡುವ ಪದವಿ ಮತ್ತು ತಾತ್ಕಲಿಕ ಪ್ರಮಾಣಪತ್ರಗಳ ಮೇಲೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಮುದ್ರಿಸದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಎಲ್ಲಾ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳ ಖಾಸಗಿ ಡೇಟಾಬೇಸ್‌ಗಳನ್ನು ಸಾರ್ವಜನಿಕಗೊಳಿಸುವುದು ಸ್ವೀಕಾರಾರ್ಹವಲ್ಲ. ಎಲ್ಲಾ ವಿಶ್ವವಿದ್ಯಾಲಯಗಳು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನಿಯಮಗಳನ್ನು ಅನುಸರಿಸಬೇಕು ಎಂದು ಯುಜಿಸಿ ಹೇಳಿದೆ. ಈ ನಿಟ್ಟಿನಲ್ಲಿ ಯುಜಿಸಿ ಅಧಿಕೃತ ವೆಬ್‌ಸೈಟ್ https://www.ugc.gov.in/ ನಲ್ಲಿಯೂ ಸೂಚನೆ ನೀಡಿದೆ. ಹೆಚ್ಚಿನ ಮಾಹಿತಿಗಾಗಿ … Continue reading ಪ್ರಮಾಣಪತ್ರಗಳ ಮೇಲೆ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಸಂಖ್ಯೆ ಮುದ್ರಿಸಬೇಡಿ: ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದ ಯುಜಿಸಿ