

StartFragment
ಮೈಸೂರು: ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಲು ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಯಾವುದೇ ಕಾರಣಕ್ಕೂ ಕಾಯ್ದೆಗೆ ತಿದ್ದುಪಡಿ ತರಬಾರದೆಂದು ಒತ್ತಾಯಿಸಿ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಲು ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಿ, ಕರಡನ್ನು ರಾಜ್ಯ ಸರ್ಕಾರಗಳ ಅಭಿಪ್ರಾಯಕ್ಕೆ ಕಳುಹಿಸಿಕೊಟ್ಟಿದೆ. ಈಗಾಗಲೇ ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳು ತಿದ್ದುಪಡಿ ಕಾಯ್ದೆಗೆ ಸಮ್ಮತಿ ಸೂಚಿಸಿಲ್ಲ. ವಿದ್ಯುತ್ ಕ್ಷೇತ್ರದಲ್ಲಿ ಈಗಾಗಲೇ ಸಾವಿರಾರು ಕೋಟಿ ರೂ. ಹಣವನ್ನು ಸರ್ಕಾರ ಹೂಡಿಕೆ ಮಾಡಿದ್ದು, ಈಗ ಅದನ್ನು ಖಾಸಗಿಯವರಿಗೆ ಒಪ್ಪಿಸಲು ಕೇಂದ್ರ ಸರ್ಕಾರ ನಡೆಸುತ್ತಿರುವ ಪ್ರಯತ್ನ ಖಂಡನೀಯ. ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ತಿದ್ದುಪಡಿ ಕಾಯ್ದೆ ಜಾರಿಗೆ ತರಬಾರದೆಂದು ರೈತರು ಒತ್ತಾಯಿಸಿದರು.
ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜ್ ಇತರರು ಇದ್ದರು.
EndFragment