20.8 C
Bangalore
Sunday, December 8, 2019

ಮಕ್ಕಳ ಅತ್ಯಾಚಾರ ಆರೋಪಿಗಳಿಗೆ ಮುಂಜಾಮೀನಿಲ್ಲ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಬೆಂಗಳೂರು: ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ನಡೆಸುವ ಆರೋಪಿಗಳಿಗೆ ಕಾನೂನಿನ ಕುಣಿಕೆ ಇನ್ನಷ್ಟು ಬಿಗಿಯಾಗಲಿದೆ. ನಿರ್ಭಯ ಹಾಗೂ ಇತರೆ ಪ್ರಕರಣಗಳ ನಂತರ ಅತ್ಯಾಚಾರಿ ಆರೋಪಿ ಗಳಿಗೆ ಕಠಿಣ ಶಿಕ್ಷೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಹೊರತಂದಿರುವ ಸುಗ್ರೀವಾಜ್ಞೆಯ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಅತ್ಯಾಚಾರ ಪ್ರಕರಣಗಳಲ್ಲಿ ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳುವ ಅಪರಾಧಿಗಳೇ ಹೆಚ್ಚಾಗಿದ್ದಾರೆ. ಶಿಕ್ಷೆ ಪ್ರಮಾಣವೂ ತಡವಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆಯೇ ಆಗಿಲ್ಲ. ಆದ್ದರಿಂದಲೇ ಕೇಂದ್ರ ಸರ್ಕಾರ ಕಾನೂನು ಬಿಗಿಗೊಳಿಸಿ ಏಪ್ರಿಲ್​ನಲ್ಲಿ ಸುಗ್ರೀವಾಜ್ಞೆ

ಹೊರಡಿಸಿದೆ. ಇದರ ಜಾರಿಗೆ ಎಲ್ಲ ರಾಜ್ಯಗಳಿಗೂ ಸೂಚಿಸಿದೆ. ಸುಗ್ರೀವಾಜ್ಞೆಯಲ್ಲಿನ ಅಂಶಗಳ ಆಧಾರದಲ್ಲಿ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಕರಡು ಸುತ್ತೋಲೆ ಸಿದ್ಧಪಡಿಸಿದ್ದು, ಎಲ್ಲ ಪೊಲೀಸ್ ಠಾಣೆಗಳಿಗೂ ರವಾನಿಸಲಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ತರಬೇತಿ ನೀಡಿ ಜಾರಿಗೆ ತರಲಾಗುತ್ತದೆ.

ಬೇಲ್ ಸಿಗಲ್ಲ

12-16 ವರ್ಷದೊಳಗಿನ ಹೆಣ್ಣು ಮಕ್ಕಳ ಅತ್ಯಾಚಾರ ಅಥವಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಮುಂಜಾಮೀನು (ಆಂಟಿಸಿಪೆಟರಿ ಬೇಲ್) ಮಂಜೂರಾತಿ ನಿಷೇಧಿಸಲಾಗಿದೆ. ಜಾಮೀನಿಗೆ ಅರ್ಜಿ ಸಲ್ಲಿಸಿ ದಾಗ ಸರ್ಕಾರಿ ಅಭಿಯೋಜಕರಿಗೆ ಕೋರ್ಟ್​ಗೆ ಹಾಜರಾಗಲು 15 ದಿನ ಕಾಲಾವಕಾಶ ನೀಡುವುದನ್ನು ಕಡ್ಡಾಯ ಮಾಡಲಾಗಿದೆ.

ಹೆಚ್ಚುತ್ತಿರುವ ಅತ್ಯಾಚಾರಗಳನ್ನು ತಡೆಗಟ್ಟಲು ಕಾನೂನು ಬಿಗಿಗೊಳಿಸುತ್ತಿರುವ ಕೇಂದ್ರದ ಕ್ರಮ ಸ್ವಾಗತರ್ಹ. ಇಂತಹ ಪ್ರಕರಣಗಳ ವಿಚಾರಣೆ ಸ್ವಲ್ಪ ಚುರುಕಾಗಬಹುದು, ಸಂಪೂರ್ಣ ನಿಂತು ಹೋಗುತ್ತದೆ ಎಂದು ಹೇಳಲಾಗದು.

| ಕವಿತಾ ರತ್ನ ಸಿಡಬ್ಲ್ಯುಸಿ, ಬೆಂಗಳೂರು

ಶಿಕ್ಷೆ ಪ್ರಮಾಣ ಹೆಚ್ಚಳ

ಭಾರತ ದಂಡ ಸಂಹಿತೆ ಕಲಂ 376ರ ಪ್ರಕಾರ ಶಿಕ್ಷೆಯ ಅವಧಿ 7 ವರ್ಷ ಇದ್ದಿದ್ದನ್ನು 10 ವರ್ಷಗಳಿಗೆ ಹೆಚ್ಚಿಸಲಾಗುತ್ತದೆ. ಕಲಂ 376 ಎಬಿ ಪ್ರಕಾರ 12 ವರ್ಷದೊಳಗಿನವರ ಮೇಲಿನ ಅತ್ಯಾಚಾರ ಅಥವಾ ಸಾಮೂಹಿಕ ಅತ್ಯಾಚಾರಕ್ಕೆ 20 ವರ್ಷ ಇದ್ದ ಶಿಕ್ಷೆ ಪ್ರಮಾಣವನ್ನು ಜೀವ ಇರುವ ತನಕ ಅಥವಾ ಮರಣದಂಡನೆ ಎಂದು ಮಾಡಲಾಗಿದೆ. ಕಲಂ 376 ಡಿಎ ಪ್ರಕಾರ 16 ವರ್ಷದೊಳಗಿನವರ ಮೇಲಿನ ಅತ್ಯಾಚಾರಕ್ಕೆ ಜೀವಾವಧಿ ಸೆರೆವಾಸ ಮತ್ತು ದಂಡ ಎಂದು ನಿಗದಿ ಮಾಡಲಾಗಿದೆ. ಭಾರತೀಯ ಸಾಕ್ಷ್ಯ ಅಧಿನಿಯಮ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗೂ ಕೆಲವೊಂದು ಹೊಸ ಅಂಶಗಳನ್ನು ಸೇರಿಸಲಾಗಿದೆ. ಅದರಿಂದಾಗಿ ಶಿಕ್ಷೆ ಪ್ರಮಾಣ ಹೆಚ್ಚಾಗಲಿದೆ.

ರಾಜ್ಯದಲ್ಲಿ ಎಲ್ಲೆಲ್ಲಿ, ಎಷ್ಟು?

ರಾಜ್ಯ ಅಪರಾಧ ದಾಖಲಾತಿ ವಿಭಾಗದ ಮಾಹಿತಿ ಪ್ರಕಾರ, 2018ರ ಏಪ್ರಿಲ್​ವರೆಗೆ ಬೆಂಗಳೂರು ನಗರದಲ್ಲೇ ಅತಿ ಹೆಚ್ಚು ಅಂದರೆ, 174 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ನಂತರದ ಸ್ಥಾನದಲ್ಲಿ ಹಾವೇರಿ-50, ಕೊಡಗು- 39, ಬೆಳಗಾವಿ ಮತ್ತು ಮೈಸೂರು- 37 ಜಿಲ್ಲೆಗಳಿದ್ದರೆ, ಬಳ್ಳಾರಿ- 6 ಅತಿ ಕಡಿಮೆ ಪ್ರಕರಣ ಇರುವ ಜಿಲ್ಲೆಯಾಗಿದೆ. ಪೋಕ್ಸೊ ಅಡಿ ಬೆಂಗಳೂರು ನಗರ- 323, ಮೈಸೂರು- 105, ಶಿವಮೊಗ್ಗ-81, ಹಾಸನ- 74, ಮಂಡ್ಯ- 73, ತುಮಕೂರು- 68, ಬೆಳಗಾವಿ- 67 ಅತಿ ಹೆಚ್ಚು, ಹಾವೇರಿ ಮತ್ತು ಧಾರವಾಡ- 20 ಅತಿ ಕಡಿಮೆ ಪ್ರಕರಣಗಳು ದಾಖಲಾದ ಜಿಲ್ಲೆಗಳು.

ತನಿಖೆ ಅವಧಿ ಇಳಿಕೆ

ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ತನಿಖೆ ಅವಧಿಯನ್ನು 90 ದಿನಗಳಿಂದ 60 ದಿನಗಳಿಗೆ ಇಳಿಸಲಾಗಿದೆ. ನ್ಯಾಯಾಲಯದ ವಿಚಾರಣೆಯನ್ನು 2 ತಿಂಗಳಿನಲ್ಲಿ, ಮೆಲ್ಮನವಿಯನ್ನು 6 ತಿಂಗಳಿನಲ್ಲಿ ಪೂರ್ಣಗೊಳಿಸಬೇಕಾಗುತ್ತದೆ.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...