ಪಾಕ್​ ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳಿಗೆ ಇಲ್ಲ ಬಿಡುಗಡೆ; ಜಾಮೀನು ಅರ್ಜಿ ವಜಾ

Pakkk9 March 20
Published on

ಹುಬ್ಬಳ್ಳಿ: ಇಲ್ಲಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ ನ್ಯಾಯಾಲಯ ವಜಾಗೊಳಿಸಿದೆ.

ಕಾಶ್ಮೀರದ ಅಮಿರ್​, ಬಾಸಿಬ್​ ಮತ್ತು ತಾಲಿಬ್​ ತಮ್ಮ ಹಾಸ್ಟೆಲ್​ ರೂಮಿನಲ್ಲಿ ಕುಳಿತುಕೊಂಡು ಪಾಕಿಸ್ತಾನ ಪರವಾಗಿ ಘೋಷಣೆ ಕೂಗುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಇದೊಂದು ದೇಶದ್ರೋಹ ನಡೆಯೆಂದು ಪರಿಗಣಿಸಿ ಅವರನ್ನು ಪೊಲೀಸರು ಬಂಧಿಸಿದ್ದರು. ಒಮ್ಮೆ ಅವರನ್ನು ಬಿಡುಗಡೆಯನ್ನೂ ಮಾಡಲಾಗಿತ್ತು. ಆದರೆ ಜನಾಕ್ರೋಶ, ಪ್ರತಿಭಟನೆಗಳು ಹೆಚ್ಚಾದ ಬೆನ್ನಲ್ಲೇ ಮತ್ತೆ ಮೂವರನ್ನೂ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು.

ಆರೋಪಿಗಳ ಪರ ವಕೀಲರು ಹುಬ್ಬಳ್ಳಿ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾ ಗೊಳಿಸಿದೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net