ಪಾಕ್​ ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳಿಗೆ ಇಲ್ಲ ಬಿಡುಗಡೆ; ಜಾಮೀನು ಅರ್ಜಿ ವಜಾ

ಹುಬ್ಬಳ್ಳಿ: ಇಲ್ಲಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ ನ್ಯಾಯಾಲಯ ವಜಾಗೊಳಿಸಿದೆ. ಕಾಶ್ಮೀರದ ಅಮಿರ್​, ಬಾಸಿಬ್​ ಮತ್ತು ತಾಲಿಬ್​ ತಮ್ಮ ಹಾಸ್ಟೆಲ್​ ರೂಮಿನಲ್ಲಿ ಕುಳಿತುಕೊಂಡು ಪಾಕಿಸ್ತಾನ ಪರವಾಗಿ ಘೋಷಣೆ ಕೂಗುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಇದೊಂದು ದೇಶದ್ರೋಹ ನಡೆಯೆಂದು ಪರಿಗಣಿಸಿ ಅವರನ್ನು ಪೊಲೀಸರು ಬಂಧಿಸಿದ್ದರು. ಒಮ್ಮೆ ಅವರನ್ನು ಬಿಡುಗಡೆಯನ್ನೂ ಮಾಡಲಾಗಿತ್ತು. ಆದರೆ ಜನಾಕ್ರೋಶ, ಪ್ರತಿಭಟನೆಗಳು ಹೆಚ್ಚಾದ ಬೆನ್ನಲ್ಲೇ ಮತ್ತೆ ಮೂವರನ್ನೂ ಬಂಧಿಸಿ, … Continue reading ಪಾಕ್​ ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳಿಗೆ ಇಲ್ಲ ಬಿಡುಗಡೆ; ಜಾಮೀನು ಅರ್ಜಿ ವಜಾ