More

    ಸುದೀಪ್ ಸಿನಿಮಾ, ಜಾಹೀರಾತು, ರಿಯಾಲಿಟಿ ಶೋ ಪ್ರದರ್ಶನಕ್ಕೆ ನಿರ್ಬಂಧವಿಲ್ಲ; ಚುನಾವಣಾ ಆಯೋಗದಿಂದ ಸ್ಪಷ್ಟನೆ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಮುಂದಾಗಿರುವ ನಟ ಕಿಚ್ಚ ಸುದೀಪ್ ಅವರು ನಟಿಸಿರುವ ಜಾಹೀರಾತುಗಳ ಪ್ರದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ಚುನಾವಣೆಗೆ ಸ್ಪರ್ಧಿಸುವ ಅಥವಾ ದೂರದರ್ಶನದಲ್ಲಿ ಪ್ರಚಾರ ಮಾಡುವ ನಟರನ್ನು ಮಾತ್ರ ವಾಣಿಜ್ಯ ಪ್ರದರ್ಶನದಿಂದ ನಿರ್ಬಂಧಿಸಬಹುದು ಎಂದು ಸ್ಪಷ್ಟಪಡಿಸಿದೆ.

    ಇದನ್ನೂ ಓದಿ: ಬಿಜೆಪಿ ಮನುಸ್ಮೃತಿ ಆಧಾರದ ಸಂವಿಧಾನ ರಚನೆ ಆಗಬೇಕೆಂದು ಬಯಸಿದೆ; ಸಿದ್ದರಾಮಯ್ಯ

    ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು

    ಈ ಬಾರಿಯ ಚುನಾವಣೆಯಲ್ಲಿ ಸಿಎಂ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದರು. ಈ ವೇಳೆ ಸುದೀಪ್ ಅವರ ಸಿನಿಮಾ, ಜಾಹೀರಾತುಗಳ ಪ್ರದರ್ಶನಕ್ಕೆ ನಿರ್ಬಂಧ ಹೇರುವಂತೆ ಚುನಾವಣೆ ಆಯೋಗಕ್ಕೆ ಜೆಡಿಎಸ್ ಪತ್ರ ಬರೆದು ದೂರು ನೀಡಿತ್ತು.

    ಸುದೀಪ್ ಬಿಜೆಪಿಯ ಪ್ರಚಾರಕರಾಗಿ ಗುರುತಿಸಿಕೊಂಡಿದ್ದಾರೆ. ಈ ಸಮಯದಲ್ಲಿ ಅವರ ಸಿನಿಮಾ, ಜಾಹೀರಾತು, ಪೋಸ್ಟರ್ ಮುಂತಾದವುಗಳು ಮತದಾರರ ಮೇಲೆ ಪ್ರಭಾವ ಬೀರಬಹುದು. ಈ ಹಿನ್ನೆಲೆಯಲ್ಲಿ ಚುನಾವಣೆ ಮುಗಿಯುವವರೆಗೆ ಅವರ ಸಿನಿಮಾಗಳನ್ನು ತಡೆ ಹಿಡಿಯುವಂತೆ ಜೆಡಿಎಸ್​ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು.

    ಇದನ್ನೂ ಓದಿ: ಪ್ರಭಾವಿ ರಾಜಕಾರಣಿಯೊಬ್ಬರಿಂದ ಚುನಾವಣಾ ಪ್ರಚಾರಕ್ಕೆ ಬರುವಂತೆ ಯಶ್​​ಗೆ ಆಹ್ವಾನ?

    ಬೊಮ್ಮಾಯಿ ಪರ ಸುದೀಪ್​ ಪ್ರಚಾರ

    ರಾಜ್ಯದಲ್ಲಿ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಮೂರು ಪಕ್ಷಗಳು ಕೂಡ ಬಿರುಸಿನ ಪ್ರಚಾರಕ್ಕೆ ಯೋಜನೆ ಹಾಕಿಕೊಂಡಿವೆ. ಈ ನಡುವೆ ನಟ ಸುದೀಪ್ ಸಿಎಂ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ನಡೆಸುತ್ತೇನೆ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಇತರೆ ಪಕ್ಷಗಳು ಯೋಚಿಸುವಂತೆ ಮಾಡಿವೆ ಎಂದರೆ ತಪ್ಪಲ್ಲ. ಸಿಎಂ ಬೊಮ್ಮಾಯಿ ಹೇಳಿದ ಕಡೆ ಪ್ರಚಾರ ಮಾಡುವುದಾಗಿ ಸುದೀಪ್ ಈಗಾಗಲೇ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts