More

    ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಪ್ರಾಣಬಿಟ್ಟ ಬಿಜೆಪಿಯ ಮಾಜಿ ಸಂಸದನ ಪುತ್ರ

    ಲಖನೌ: ತುರ್ತು ವಾರ್ಡ್​ ಹಾಗೂ ವೈದ್ಯರ ನಿರ್ಲಕ್ಷ್ಯದಿಂದಾಗಿ ಬಿಜೆಪಿಯ ಮಾಜಿ ಸಂಸದರೊಬ್ಬರು ತಮ್ಮ ಮಗನನ್ನು ಕಳೆದುಕೊಂಡಿರುವ ಘಟನೆ ಲಖನೌನ SGPGI ಆಸ್ಪತ್ರೆಯಲ್ಲಿ ನಡೆದಿದೆ. ಸರ್ಕಾರ ವೈದ್ಯರನ್ನು ಅಮಾನತುಗೊಳಿಸುವವರೆಗೆ ಮತ್ತು ಮುಂದಿನ ಕ್ರಮದ ಭರವಸೆ ನೀಡುವವರೆಗೆ ಸ್ಥಳದಿಂದ ತೆರಳುವುದಿಲ್ಲ ಎಂದು ತಂದೆ ಮಗನ ಮೃತದೇಹದೊಂದಿಗೆ ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

    ಬಿಜೆಪಿಯ ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ ಅವರ ಪುತ್ರ, ಪ್ರಕಾಶ್ ಮಿಶ್ರಾ (41) ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿದ್ದರು. ಅವರನ್ನು ನಿನ್ನೆ ರಾತ್ರಿ 11 ಗಂಟೆಗೆ SGPGI ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಯಾವುದೇ ಹಾಸಿಗೆ ಲಭ್ಯವಿಲ್ಲ ಮತ್ತು ತುರ್ತು ವೈದ್ಯಕೀಯ ಅಧಿಕಾರಿ ಸಹಾಯಕ್ಕೆ ಮುಂದಾಗಲಿಲ್ಲ ಮಗ ಸ್ವಲ್ಪ ಸಮಯದ ನಂತರ ನಿಧನರಾದರು.

    ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ನನ್ನ ನಂತರ ಬಂದ ಸುಮಾರು 20-25 ಜನರು ಚಿಕಿತ್ಸೆ ಪಡೆದರು. ಆದನೆ ನನಗೆ ಸಾಲಿನಲ್ಲಿ ನಿಲ್ಲಲು ಹೇಳಿದರು. ನಾನು ಪ್ರತಿಭಟನೆಗೆ ಕುಳಿತಾಗ ಎಲ್ಲರೂ ಅವನ ಬಗ್ಗೆ ದೂರು ನೀಡುತ್ತಿದ್ದರು. ಅವನಿಗೆ ಶಿಕ್ಷೆಯಾಗಬೇಕು ಎಂದು ಮಾಜಿ ಸಂಸದ ಪ್ರಸಾದ್ ಮಿಶ್ರಾ ಆಗ್ರಹಿಸಿದ್ದಾರೆ.

    BJP Ex MP

    ಇದನ್ನೂ ಓದಿ: ವಾರಕ್ಕೆ 70 ಘಂಟೆಗಳ ಕೆಲಸ; ನನ್ನ ಪತಿ ವಾರಕ್ಕೆ 80-90 ಘಂಟೆ ಕೆಲಸ ಮಾಡುತ್ತಾರೆಂದ ಸುಧಾ ಮೂರ್ತಿ

    ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆ ಮುಖ್ಯಸ್ಥ ಡಾ.ಆರ್.ಕೆ.ಧಿಮಾನ್, ಅವರನ್ನು ಐಸಿಯುಗೆ ರೆದೊಯ್ಯಲು ವೈದ್ಯರು ಹೇಳಿದರು. ಆದರೆ ಹಾಸಿಗೆಗಳು ಲಭ್ಯವಿಲ್ಲ. ನಾವು ಈ ಬಗ್ಗೆ ಪರಶೀಲನೆಗೆ ಸಮಿತಿಯನ್ನು ರಚಿಸಿದ್ದೇವೆ. ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ … ಸದ್ಯ ವೈದ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

    ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಉತ್ತರಪ್ರದೇಶ ವಿಧಾನಸಭೆ ವಿಪಕ್ಷ ನಾಯಕ ಅಖಿಲೇಶ್ ಯಾದವ್, ಇದು ಆಸ್ಪತ್ರೆಯ ತಪ್ಪಲ್ಲ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರದ್ದು, ಆರೋಗ್ಯ ಇಲಾಖೆ ಹಾಗೂ ಆಸ್ಪತ್ರೆಗಳಿಗೆ ಬಜೆಟ್​ ಕೊಟ್ಟಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts