20.4 C
Bangalore
Monday, December 9, 2019

ಹೈಟೆನ್ಷನ್ ತಂತಿ ಕೆಳಗಿರುವಂತಿಲ್ಲ ಹೊಸ ಕಟ್ಟಡ: ನಿರ್ವಿುಸಿದರೆ ವಿದ್ಯುತ್ ಸಂಪರ್ಕ ಕೊಡದಿರಲು ಆದೇಶ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

| ಶಿವಾನಂದ ತಗಡೂರು ಬೆಂಗಳೂರು

ವಿದ್ಯುತ್ ಅವಘಡಗಳಿಂದ ಹೆಚ್ಚುತ್ತಿರುವ ಪ್ರಾಣಹಾನಿ ತಡೆಯಲು ತಡವಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜಾರಿಯಲ್ಲಿರುವ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ದಿಟ್ಟ ಹೆಜ್ಜೆ ಇಟ್ಟಿದೆ. ಹೈ-ಟೆನ್ಷನ್ ವಿದ್ಯುತ್ ತಂತಿ ಹಾದು ಹೋಗಿರುವಲ್ಲಿ ಯಾವುದೇ ಕಟ್ಟಡ ನಿರ್ವಣಕ್ಕೂ ಅವಕಾಶ ಕೊಡದಿರಲು ತೀರ್ವನಿಸಿದೆ. ಒಂದು ವೇಳೆ ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆದು ನಿರ್ವಿುಸಿದರೂ ಅಂಥ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸದಿರಲು ನಿರ್ಧರಿಸಿದೆ.

ಹೈ-ಟೆನ್ಷನ್ ಲೈನ್ ಹಾಯ್ದು ಹೋಗಿರುವಲ್ಲಿ ನಿಯಮಾವಳಿ ಉಲ್ಲಂಘಿಸಿ ಕಟ್ಟಡಗಳನ್ನು ನಿರ್ವಿುಸಿರುವುದನ್ನು ತೆರವು ಮಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸರ್ಕಾರ ಹೆಜ್ಜೆ ಇಟ್ಟಿದೆ. ಆದರೆ ಹೈ-ಟೆನ್ಷನ್ ಲೈನ್ ಕೆಳಗೆ ಮೊದಲ ಹಂತದ ಸರ್ವೆಯಲ್ಲಿ 8 ಸಾವಿರಕ್ಕೂ ಹೆಚ್ಚು ಮನೆಗಳಿರುವುದು ಪತ್ತೆಯಾಗಿದೆ. ಹೈ-ಟೆನ್ಷನ್ ಲೈನ್ ಕೆಳಗೆ ಹೊಸದಾಗಿ ಕಟ್ಟಡ ನಿರ್ವಿುಸಿದರೆ ವಿದ್ಯುತ್ ಸಂಪರ್ಕ ಕಲ್ಪಿಸಬಾರದು. ಈ ಬಗ್ಗೆ ಯಾವುದೇ ಒತ್ತಡಕ್ಕೆ ಮಣಿಯಬಾರದು ಎಂದು ಬೆಸ್ಕಾಂಗೆ ಸೂಚಿಸಿದೆ. ಈಗಾಗಲೇ ಮನೆ ಮತ್ತು ಕಟ್ಟಡಗಳಿದ್ದರೆ ಅದು ಅಪಾಯ ಮುಕ್ತವಾಗಿದೆಯೋ, ವಿದ್ಯುತ್ ಅವಘಡ ಸಂಭವಿಸಬಹುದಾದ ಸಾಧ್ಯತೆಗಳಿದೆಯೇ ಎನ್ನುವುದನ್ನು ಪರಿಶೀಲಿಸಿ ವರದಿ ನೀಡಬೇಕೆಂದು ಸೂಚಿಸಲಾಗಿದೆ. ಬೆಸ್ಕಾಂ, ಬಿಬಿಎಂಪಿ ಮತ್ತು ಕೆಪಿಟಿಸಿಎಲ್ ಹಿರಿಯ ಅಧಿಕಾರಿಗಳ ಸಮನ್ವಯ ಸಮಿತಿ ಈ ಬಗ್ಗೆ ಆಗಿಂದಾಗ್ಗೆ ಸಭೆ ನಡೆಸಬೇಕು. ನಗರದಲ್ಲಿ ಎಷ್ಟು ಕಟ್ಟಡಗಳು ನಿಯಮಾವಳಿ ಉಲ್ಲಂಘಿಸಿವೆ ಎನ್ನುವ ಬಗ್ಗೆ ಜಂಟಿ ಸರ್ವೆಯಲ್ಲಿ ಪತ್ತೆ ಆಗಲಿದ್ದು, ಆ ಕಟ್ಟಡಗಳ ವಿದ್ಯುತ್ ಸಂಪರ್ಕವನ್ನು ಮುಲಾಜಿಲ್ಲದೆ ಕಡಿತ ಮಾಡಬೇಕೆಂದು ತೀರ್ವನಿಸಲಾಗಿದೆ.

ಎಷ್ಟು ಎತ್ತರವಿರಬೇಕು?: ಭಾರತೀಯ ವಿದ್ಯುತ್ ನಿಯಮ ಪ್ರಕಾರ 66 ಕೆವಿ ವಿದ್ಯುತ್ ಮಾರ್ಗಗಳಲ್ಲಿ ನಿರ್ವಣವಾಗುವ ಕಟ್ಟಡಕ್ಕೂ ಲೈನ್​ಗೂ ಕನಿಷ್ಠ 4 ಮೀಟರ್ ಅಂತರವಿರಬೇಕು. ಹಾಗೆಯೇ 2.3 ಮೀಟರ್ ಸಮಾನಾಂತರ ಅಂತರವಿರಬೇಕು. 220 ಕೆವಿ ವಿದ್ಯುತ್ ಮಾರ್ಗದಲ್ಲಿ ಕಟ್ಟಡಕ್ಕೂ ಲೈನ್​ಗೂ 5.5 ಮೀಟರ್ ಅಂತರ, ಹಾಗೆಯೇ 3.8 ಮೀಟರ್ ಸಮಾನಾಂತರ ಅಂತರವಿರಬೇಕು.

ಬಿಬಿಎಂಪಿಯಲ್ಲಿ ಉಲ್ಲಂಘನೆ ಹೆಚ್ಚು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿ ಮನೆ-ಕಾಂಪ್ಲೆಕ್ಸ್ ಮತ್ತಿತರ ಕಟ್ಟಡ ನಿರ್ವಿುಸಿರುವ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಬಿಬಿಎಂಪಿ ಕಟ್ಟಡ ಪರವಾನಗಿ ನೀಡಿದೆ ಎಂದು ವಿದ್ಯುತ್ ಸಂಪರ್ಕ ಪಡೆದಿರುವ ಪ್ರಕರಣಗಳೇ ಹೆಚ್ಚಿದ್ದು, ಇದಕ್ಕೆ ಕಡಿವಾಣ ಹಾಕಬೇಕಾಗಿದೆ.

ಪರ್ಯಾಯ ಮಾರ್ಗಗಳೇನು?

ನಗರ ಮತ್ತು ಮಹಾನಗರ ವ್ಯಾಪ್ತಿಯಲ್ಲಿ ಹೈ-ಟೆನ್ಷನ್ ಲೈನ್ ಬದಲಿಗೆ ಅಂಡರ್ ಗ್ರೌಂಡ್ ವಿದ್ಯುತ್ ಸಂಪರ್ಕ ಕಲ್ಪಿಸುವ ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದು ನಿರ್ಣಯಿಸಲಾಗಿದೆ. ಮೊದಲ ಹಂತದಲ್ಲಿ ಬೆಸ್ಕಾಂನಲ್ಲಿ ಈ ಬಗ್ಗೆ ಕಾರ್ಯಾಚರಣೆ ಮಾಡಲಾಗುತ್ತಿದೆ. ಅದಕ್ಕಾಗಿಯೇ 5,300 ಕೋಟಿ ರೂ. ಬಜೆಟ್ ನೆರವು ನೀಡಲಾಗಿದೆ. 12 ಸಾವಿರ ಕಿ.ಮೀ. ಉದ್ದದ ಎಲ್​ಟಿ ಲೈನ್, 6 ಸಾವಿರ ಕಿ.ಮೀ. ಉದ್ದದ ಎಚ್​ಟಿ ಲೈನ್ ಅಂಡರ್ ಗ್ರೌಂಡ್ ಲೈನ್​ಗೆ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಜನಜಾಗೃತಿಗೆ ಕ್ರಮ

ವಿದ್ಯುತ್ ಲೈನ್, ಟ್ರಾನ್ಸ್​ಫಾರ್ಮರ್ ಸೇರಿ ಮನೆಯಲ್ಲಿನ ವಿದ್ಯುತ್ ಬಳಕೆ ಬಗ್ಗೆಯೂ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಜಾರಿಗೆ ತರಲಾಗಿದೆ. ಕರಪತ್ರ, ಜಾಹೀರಾತು, ಸೋಷಿಯಲ್ ಮೀಡಿಯಾ ಮೂಲಕವೂ ಗ್ರಾಹಕರಿಗೆ ಜಾಗೃತಿ ಮೂಡಿಸಲು ತೀರ್ವನಿಸಲಾಗಿದೆ.

ವಿದ್ಯುತ್ ಅವಘಡ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದ್ದು, ಅಂಡರ್ ಗ್ರೌಂಡ್ ವಿದ್ಯುತ್ ಸಂಪರ್ಕಕ್ಕೆ ಆದ್ಯತೆ ನೀಡಲಾಗಿದೆ. ಮೊದಲ ಹಂತದಲ್ಲಿ 1800 ಕೋಟಿ ರೂ. ಟೆಂಡರ್ ಕರೆಯಲಾಗಿದೆ. ಎಚ್​ಟಿ 6 ಸಾವಿರ, ಎಲ್​ಟಿ 12 ಸಾವಿರ ಕಿ.ಮೀ. ಸೇರಿ ಒಟ್ಟು 18 ಸಾವಿರ ಕಿ.ಮೀ ಅಂಡರ್ ಗ್ರೌಂಡ್ ಲೈನ್ ಎಳೆಯಲು ಯೋಜಿಸಲಾಗಿದೆ.

| ಸಿ.ಶಿಖಾ ವ್ಯವಸ್ಥಾಪಕ ನಿರ್ದೇಶಕರು, ಬೆಸ್ಕಾಂ

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...