ಎಚ್‌ಡಿಕೆ ವಿರುದ್ಧ ಬಲವಂತದ ಕ್ರಮ ಬೇಡ : ಪೊಲೀಸರಿಗೆ ಹೈಕೋರ್ಟ್ ಮಧ್ಯಂತರ ಸೂಚನೆ

highcourt
Published on

ಬೆಂಗಳೂರು: ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಬುಧವಾರ ಆದೇಶಿಸಿದೆ.

ಎಫ್ಐಆರ್ ರದ್ದು ಕೋರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸುರೇಶ್‌ ಬಾಬು ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತು.

ಕೆಲ ಕಾಲ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಕುಮಾರಸ್ವಾಮಿಗೆ ನೀಡಿದ್ದ ಮಧ್ಯಂತರ ರಿಲೀಫ್  ವಿಸ್ತರಿಸಿ ಜ.30ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net