More

    ಯಾವುದೇ ಸಮುದಾಯಕ್ಕೆ ಅನ್ಯಾಯವಾಗದು

    ಕೋಲಾರ: ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮವಹಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕಾಂತರಾಜ ವರದಿ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

    ನಗರದ ಸಾಯಿಬಾಬಾ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ವಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ನ್ಯಾಯಸಮ್ಮತವಾಗಿ ಅವಕಾಶ ಸಿಗಬೇಕು.ಈ ವಿಚಾರದಲ್ಲಿ ಸರ್ಕಾರ ಇದುವರೆಗೆ ಯಾವುದೇ ತೀರ್ವಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
    ರಾಜ್ಯದಲ್ಲಿ ಪರಿಸ್ಥಿತಿ ಯಾವ ರೀತಿ ಇದೆ ಎಂಬುದನ್ನು ಚರ್ಚಿಸದೆ ತೀರ್ವಾನಕ್ಕೆ ಬರಲು ಆಗದು. ಕಾಂತರಾಜ ವರದಿಯು ಸಚಿವ ಸಂಪುಟದ ಮುಂದೆ ಬಂದಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಜಾರಿ ವಾಡಬೇಕಾಗುತ್ತದೆ ಎಂದರು.
    ವಿನಾಕಾರಣ ಗೊಂದಲ ಸೃಷ್ಟಿ:
    ಸಮಾಜದಲ್ಲಿ ಶೋಷಿತರು, ಹಿಂದುಳಿದ ವರ್ಗದವರು ಹೆಚ್ಚು ಜನರಿದ್ದಾರೆ. ಎಲ್ಲ ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲ ಸಮುದಾಯದವರು ಸಮನಾಗಿ ಬದುಕಬೇಕೆಂಬ ಉದ್ದೇಶದಿಂದ ರಾಹುಲ್ ಗಾಂಧಿ ಜಾತಿ ಜನಗಣತಿ ವಿಚಾರವಾಗಿ ವಾತನಾಡಿದ್ದಾರೆ. ಕೆಲವರು ವಿನಾಕಾರಣ ಗೊಂದಲಗಳನ್ನು ಸೃಷ್ಟಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಮುನಿಯಪ್ಪ ಕಿಡಿಕಾರಿದರು.
    ಹೈಕಮಾಂಡ್‌ನಿಂದ ಕೋಲಾರ ಅಭ್ಯರ್ಥಿ ತೀರ್ಮಾನ:
    ಲೋಕಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ಹೈಕವಾಂಡ್ ತೀರ್ವಾನ ವಾಡಲಿದೆೆ. ಅವರು ಹೇಳಿದ ಕಾರಣಕ್ಕೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ ಎಂದ ಅವರು, ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.
    ಸಾಯಿಬಾಬಾ ಮಂದಿರದಲ್ಲಿ ಪ್ರತಿವರ್ಷ ಶ್ರದ್ಧೆ ಭಕ್ತಿಯಿಂದ ನಡೆಸಿಕೊಂಡು ಪೂಜೆ ನಡೆಸಿಕೊಂಡು ಹೋಗುತ್ತಿದ್ದು, ಯಾತ್ರಸ್ಥಳವಾಗಿ ಹೊರಹೊಮ್ಮುತ್ತಿದೆ. ನಾನು ಈ ಶಿರಡಿ ಸಾಯಿಬಾಬಾನ ಭಕ್ತ. ಎಲ್ಲ ಧರ್ಮದವರು ಬಂದು ಪ್ರಾರ್ಥಿಸುತ್ತಾರೆ, ಯಾವುದೇ ಭೇದ ಭಾವ ಇಲ್ಲ ಎಂದರು.
    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಮುಖಂಡರಾದ ಜಯದೇವ ಮತಿತರರು ಹಾಜರಿದ್ದರು.
    ಪಡಿತರದಾರರಿಗೆ ಚೀಟಿ ಜತೆಗೆ ಶ್ರೀವೇ ಸ್ಮಾರ್ಟ್‌ಕಾರ್ಡ್‌ನ್ನು ಬಿಪಿಎಲ್ ಹಾಗೂ ಎಪಿಎಲ್ ಚೀಟಿದಾರರಿಗೆ ವಿತರಿಸಲಾಗುವುದು ಎಂದು ಕೆ.ಎಚ್.ಮುನಿಯಪ್ಪ ಹೇಳಿದರು. ಅನ್ನಭಾಗ್ಯ ಯೋಜನೆಯಡಿ 1.13 ಕೋಟಿ ಕಾರ್ಡ್‌ದಾರರಿಗೆ ಸುಮಾರು 4 ಕೋಟಿ ರೂ. ಹಣ ಸಂದಾಯ ವಾಡಿದ್ದೇವೆ. 90ಕ್ಕಿಂತ ಅಧಿಕ ಕಾರ್ಡ್‌ದಾರರಿಗೆ ಈಗಾಗಲೇ ಹಣ ತಲುಪಿದೆ. ಇನ್ನೂ ಏಳು ಲಕ್ಷ ಕಾರ್ಡ್‌ದಾರರು ಬ್ಯಾಂಕ್ ಖಾತೆ ತೆರೆಯದಿರುವುದು ಸೇರಿದಂತೆ ವಿವಿಧ ಸಮಸ್ಯೆ ಇದ್ದು, ಹಣ ಸಂದಾಯ ವಾಡಲು ಇಲಾಖೆ ಅಧಿಕಾರಿಗಳೇ ಖುದ್ದಾಗಿ ಕಾರ್ಡ್‌ಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts