More

    ಹರಿಪ್ರಸಾದ್ ವಿರುದ್ಧ ಒಳಸಂಚೂ ಇಲ್ಲ, ಪಿತೂರಿಯೂ ಇಲ್ಲ: ಡಾ.ಪರಮೇಶ್ವರ

    ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ವಿರುದ್ಧ ಯಾವುದೇ ಒಳಸಂಚಾಗಲಿ, ಪಿತೂರಿಯಾಗಲಿ ನಡೆಸುತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.

    ಸದಾಶಿವ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹರಿಪ್ರಸಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚು ಪ್ರತಿಕ್ರಿಯಿಸಲು ಹೋಗುವುದಿಲ್ಲ. ಅವರ ಹೇಳಿಕೆಗೆ ಸಂಬಂಧಿಸಿದ ಸುದ್ದಿ ರಾಜ್ಯಪಾಲರ ಗಮನಕ್ಕೆ ಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದರು. ಅದರನ್ವಯ ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕು ಅದನ್ನು ಪೊಲೀಸರು ಮಾಡಿದ್ದಾರೆ. ಹರಿಪ್ರಸಾದ್ ಅವರ ವಿರುದ್ಧ ಯಾರು ಒಳ ಸಂಚಾಗಲಿ, ಪಿತೂರಿ ನಡೆಸುತ್ತಿಲ್ಲ. ಅವರಿಗೆ ತೊಂದರೆ ಮಾಡಬೇಕು ಎಂಬ ಉದ್ದೇಶ ಯಾರಿಗೂ ಇಲ್ಲ ಎಂದು ಹೇಳಿದರು.

    ದೋಷಾರೋಪ ಪಟ್ಟಿ ಸಲ್ಲಿಕೆ

    ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಪ್ರಕರಣದ ತನಿಖೆ ಮುಂದುವರಿದಿದೆ. ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.

    ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲ

    ಒಳಮೀಸಲಾತಿ ವಿಚಾರದ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒಳ ಮೀಸಲಾತಿಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ರಾಜ್ಯಸಭೆಯ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ 341 (3) ಸಂವಿಧಾನಿಕ ತಿದ್ದುಪಡಿ ತಂದು ಒಳ ಮೀಸಲಾತಿಗೆ ಅವಕಾಶ ಮಾಡಿಕೊಡುವಂತೆ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದರೆ ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts