ಆಪರೇಷನ್ ಸಿಂಧೂರ ಸಮಯದಲ್ಲಿ ಮೋದಿ-ಟ್ರಂಪ್ ನಡುವೆ ಸಂಭಾಷಣೆ ನಡೆದಿಲ್ಲ: ಜೈಶಂಕರ್ ಸ್ಪಷ್ಟನೆ!Jaishankar

Jaishankar
Published on

Jaishankar: ಏಪ್ರಿಲ್​ 22ರಿಂದ ಜೂನ್​ 17ರ ವರೆಗೆ ಪ್ರಧಾನಿ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ನಡುವೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ​ ವಿದೇಶಾಂಗ ಸಚಿವ ಜೈಶಂಕರ್​ ಸ್ಪಷ್ಟಪಡಿಸಿದ್ದಾರೆ.

ಸಂಸತ್ತಿನಲ್ಲಿ ನಡೆದ ಅಪರೇಷನ್​ ಸಿಂಧೂರ ಚರ್ಚೆಯ ಸಮಯದಲ್ಲಿ ಮಾತನಾಡಿದ ಜೈಶಂಕರ್​, "ನಾನು ಎರಡು ವಿಷಯಗಳನ್ನು ಬಹಳ ಸ್ಪಷ್ಟಪಡಿಸಲು ಬಯಸುತ್ತೇನೆ. ಒಂದು, ಯಾವ ಹಂತದಲ್ಲೂ ಆಪರೇಷನ್​ ಸಿಂಧೂರ ಕಾರ್ಯಚರಣೆಯಲ್ಲಿ ವ್ಯಾಪಾರಕ್ಕೆ ಸಂಬಂಧಪಟ್ಟಂತೆ ಅಮೆರಿಕದ ಜತೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ.

ಎರಡನೆಯದಾಗಿ, ಏಪ್ರಿಲ್ 22 ರಂದು ಅಧ್ಯಕ್ಷ ಟ್ರಂಪ್ ತಮ್ಮ ಸಂತಾಪ ಸೂಚಿಸಲು ಕರೆ ಮಾಡಿದಾಗಿನಿಂದ ಮತ್ತು ಜೂನ್ 17 ರಂದು ಕೆನಡಾದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ಸಾಧ್ಯವಾಗದಿದ್ದಾಗ ಅದನ್ನು ವಿವರಿಸಲು ಟ್ರಂಪ್​ ಕರೆ ಮಾಡಿದ್ದರು ಎಂದು ಜೈಶಂಕರ್ ತಿಳಿಸಿದ್ದಾರೆ.

ವ್ಯಾಪಾರ ವಿಷಯವನ್ನು ಮುಂದಿಟ್ಟುಕೊಂಡು ಭಾರತ- ಪಾಕಿಸ್ತಾನ ನಡುವೆ ಕದನ ವಿರಾಮದ ಒಪ್ಪಂದ ಏರ್ಪಟ್ಟಿತ್ತು ಎಂದು ಟ್ರಂಪ್ ಪದೇ ಪದೇ ವಾದ ಮಂಡಿಸಿದ್ದರು.

ನಾವು ಪ್ರತಿಕಾರ ತೀರಿಸಿಕೊಂಡ ಬಳಿಕ ಪಾಕಿಸ್ತಾನ ಯುದ್ದ ನಿಲ್ಲಿಸಲು ಸಿದ್ದವಾಗಿದೆ ಎಂದು ಪೋನ್ ಕರೆಗಳು ಬಂದಿದ್ದವು. ಆದರೆ ಕರೆಗಳು ಡಿಜಿಎಂಓ ಮುಂಖಾಂತರವೇ ಬರಬೇಕೆಂದು ನಾವು ಅವರಿಗೆ ಸ್ಪಷ್ಟವಾಗಿ ಹೇಳಿದ್ದೆವು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net