ಮೈಸೂರು: ಚೀನಾದಲ್ಲಿ ಆತಂಕ ಮೂಡಿಸಿರುವ ಕರೊನಾ ವೈರಸ್ ಪ್ರಕರಣ ಈ ವರೆಗೆ ರಾಜ್ಯದಲ್ಲಿ ಪತ್ತೆಯಾಗಿಲ್ಲ. ಯಾರಿಗೂ ಈ ಸೋಂಕು ತಗಲಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.
ನಗರದಲ್ಲಿ ಸೋಮವಾರ ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರೊನಾ ವೈರಸ್ ಈಗಾಗಲೇ ಚೀನಾದಲ್ಲಿ 120 ಜನರು, ನೆರೆಯ ಕೇರಳಾದಲ್ಲೂ ಮೂವರನ್ನು ಬಲಿ ಪಡೆದಿದೆ. ಈ ರೋಗ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಶಂಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 44 ಜನರ ರಕ್ತ ತಪಾಸಣೆ ಮಾಡಲಾಗಿದೆ. ಈ ಪೈಕಿ 29 ಜನರ ವರದಿ ನೆಗಟಿವ್ ಬಂದಿದೆ. ಉಳಿದವರ ವರದಿ ಬರಬೇಕಿದ್ದು, ಅವರಲ್ಲೂ ಈ ಸೋಂಕು ಕಾಣಿಸಿಕೊಂಡಿಲ್ಲ ಎಂಬ ಪ್ರಾಥಮಿಕ ಮಾಹಿತಿ ಸಿಕ್ಕಿದೆ ಎಂದು ತಿಳಿಸಿದರು.
ಭಾರತಕ್ಕೆ ಈಗಾಗಲೇ ಕಾಲಿಟ್ಟಿರುವ ಈ ಸೋಂಕು ರಾಜ್ಯದಲ್ಲಿ ಹರಡದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ. ಪ್ರತಿಯೊಂದು ಜಿಲ್ಲಾ ಆಸ್ಪತ್ರೆಯಲ್ಲೂ 10 ಹಾಸಿಗೆಗಳ ವಿಶೇಷ ವಾರ್ಡ್ ಸಿದ್ಧಪಡಿಸಲಾಗಿದೆ. ಜತೆಗೆ, ವಿಮಾನನಿಲ್ದಾಣ, ಬಂದರು ಪ್ರದೇಶಕ್ಕೆ ಬರುವ ಚೀನಾ, ಇತರ ದೇಶಗಳ ಪ್ರವಾಸಿಗರ ರಕ್ಷಪರೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಿದರು.
ಈ ವಿಷಯವಾಗಿ ಈಗಾಗಲೇ 2 ಬಾರಿ ಸಭೆ ನಡೆಸಿ ಚರ್ಚಿಸಲಾಗಿದೆ. ರಾಜ್ಯದಲ್ಲಿ ಸದ್ಯಕ್ಕೆ ಈ ರೋಗಕ್ಕೆ ಔಷಧವಿಲ್ಲ. ಅದನ್ನು ಬೇರೆ ಕಡೆಯಿಂದ ತರಿಸಿಕೊಳ್ಳಲಾಗುವುದು. ಜತೆಗೆ, ಆಯುರ್ವೇದ ಔಷಧ ಬಳಕೆ ಕುರಿತು ಸಂಬಂಧಪಟ್ಟವರ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದರು.
ಕೊರೊನಾ ವೈರಸ್ ಸೋಂಕು ಕರ್ನಾಟಕದಲ್ಲಿ ಪತ್ತೆಯಾಗಿಲ್ಲ: ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ, ಮುನ್ನೆಚ್ಚರಿಕೆ ಕ್ರಮದ ಆಶ್ವಾಸನೆ
You Might Also Like
ಮಂಗಳನ ಸಂಚಾರದಿಂದ ರೂಪುಗೊಳ್ಳಲಿದೆ ಮಂಗಳ-ಪುಷ್ಯ ಯೋಗ! ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs
Zodiac Signs : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ಹಾಗೂ ಗ್ರಹಗಳ ಸಂಚಾರವೂ ವ್ಯಕ್ತಿಯು ಜನಿಸಿದ…
ನಿಮ್ಮನೆ ಮುದ್ದಿನ ನಾಯಿ ನಿಮ್ಮ ಮುಖವನ್ನು ನೆಕ್ಕುತ್ತದೆಯೇ? ಇರಲಿ ಎಚ್ಚರ.. Dog Licking Human Face
Dog Licking Human Face: ಆಧುನಿಕ ಜೀವನದಲ್ಲಿ ಹೆಚ್ಚಿನ ಜನರು ತಮ್ಮ ಮನೆಯಲ್ಲಿ ನಾಯಿಮರಿಗಳನ್ನು ಮನೆ…
ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring
Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್ ಆಗಿದ್ದಾರೆ,…