More

    ದ್ವಿತೀಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕರೊನಾ ಸೋಂಕಿಲ್ಲ; ಸಚಿವ ಸುರೇಶ್‍ಕುಮಾರ್ ಸ್ಪಷ್ಟನೆ

    ಬೆಂಗಳೂರು: ಗುರುವಾರ (ಜೂನ್​ 18) ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಬೆಂಗಳೂರಿನ ಜಯನಗರದ ಬಿಇಎಸ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರನ್ನು ಅಳಿಸಿಕೊಂಡು ಹಾಜರಾಗಿದ್ದಾಳೆಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ಹೇಳಿದ್ದಾರೆ.

    ಈ ವಿದ್ಯಾರ್ಥಿನಿಯ ಕರೊನಾ ಟೆಸ್ಟ್ ಮಾಡಿಸಲಾಗಿದ್ದು, ‘ನೆಗೆಟೀವ್’ ಎಂದು ಫಲಿತಾಂಶ ಬಂದಿದೆ ಹೀಗಾಗಿ ಆಕೆ ಪರೀಕ್ಷೆ ಬರೆದ ಕೊಠಡಿಯಲ್ಲಿ ಹಾಜರಿದ್ದ ಯಾವುದೇ ಪರೀಕ್ಷಾರ್ಥಿಗಳು ಭಯಪಡಬೇಕಾದ ಅಗತ್ಯವಿಲ್ಲ, ಯಾವುದೇ ವಿದ್ಯಾರ್ಥಿ ಕ್ವಾರಂಟೈನ್‍ಗೆ ಒಳಗಾಗಬೇಕಾದ ಅಗತ್ಯವೂ ಇಲ್ಲ ಎಂದು ಅವರು ತಿಳಿಸಿದ್ದಾರೆ.

    ಇದನ್ನೂ ಓದಿ; ಕರೊನಾಗೆ ಸಜ್ಜಾಯ್ತು ದೇಶೀಯ ಔಷಧ; ಮುಂಬೈ ಕಂಪನಿಗೆ ಡಿಸಿಜಿಐ ಸಮ್ಮತಿ 

    ಆ ವಿದ್ಯಾರ್ಥಿನಿಯೂ ಆರೋಗ್ಯದಿಂದ ಇದ್ದಾಳೆ. ಆಕೆಯ ತಂದೆ ಈಗಾಗಲೇ ಕ್ವಾರಂಟೈನ್‍ನಲ್ಲಿದ್ದು, ಆರೋಗ್ಯ ಇಲಾಖೆಯ ನಿಗಾದಲ್ಲಿ ಸೂಕ್ತ ಚಿಕಿತ್ಸೆಗೊಳಗಾಗಿದ್ದಾರೆ. ಅವರೂ ಸಹ ಯಾವುದೇ ವಿಶೇಷ ಆರೋಗ್ಯದ ತೊಂದರೆಗೆ ಒಳಗಾಗಿಲ್ಲ ಎಂದು ಸುರೇಶ್ ಕುಮಾರ್ ತಿಳಿಸಿದರು.

    ಆರು ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ಅತ್ಯಂತ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆದಿದ್ದಾರೆ. ಶಿಕ್ಷಣ ಇಲಾಖೆಯೊಂದಿಗೆ ಆರೋಗ್ಯ, ಸಾರಿಗೆ, ಗೃಹ ಇಲಾಖೆಗಳು ಸೇರಿದಂತೆ ರಾಜ್ಯದಲ್ಲಿ ಆಯಾ ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆದಿವೆ. ಎಲ್ಲಕ್ಕಿಂತ ಹೆಚ್ಚಾಗಿ ವಿದ್ಯಾರ್ಥಿಗಳ ಹಿತರಕ್ಷಣೆಯೇ ನಮ್ಮ ಮೊದಲ ಆದ್ಯತೆಯಾದ್ದರಿಂದ ಮಕ್ಕಳ ಸುರಕ್ಷತೆ ಹೆಚ್ಚು ಒತ್ತು ನೀಡಲಾಗಿದ್ದು, ಈ ಸಂಬಂಧಲ್ಲಿ ಮಕ್ಕಳನ್ನು ಮನೆಯಿಂದ ಪರೀಕ್ಷಾ ಕೇಂದ್ರ ಹಾಗೆಯೇ ಪರೀಕ್ಷಾ ಕೇಂದ್ರದಿಂದ ಮನೆಯವರೆಗೂ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಕರೆತರಲಾಗಿತ್ತು ಎಂದು ಸಚಿವರು ವಿವರಿಸಿದರು.

    ಈಗಿನ ಪರೀಕ್ಷೆಯಲ್ಲಿ ಕಂಡುಬಂದ ನ್ಯೂನತೆಗಳನ್ನು ಅವಕಾಶಗಳನ್ನಾಗಿ ಬಳಸಿಕೊಂಡು ಜೂನ್ 25ರಮದು ಆರಂಭವಾಗಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳಲ್ಲಿ ಈ ರೀತಿಯ ಯಾವುದೇ ಸಮಸ್ಯೆಗಳು ಎದುರಾಗದ ರೀತಿಯಲ್ಲಿ ಎಲ್ಲ ಕ್ರಮಗಳನ್ನೂ ಅನುಸರಿಸಲು ಈಗಾಗಲೇ ಇಲಾಖಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದೂ ಸುರೇಶ್‍ಕುಮಾರ್ ತಿಳಿಸಿದರು.

    ಇದನ್ನೂ ಓದಿ; ಸಂದೇಶವೇನು ಇಲ್ಲ, ನಾವು ಉತ್ತರ ಕೊಡೋಕೆ ಸಜ್ಜಾಗಿದ್ದೇವೆ; ಚೀನಾಗೆ ವಾಯುಸೇನೆ ಎಚ್ಚರಿಕೆ 

    ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿರುವ ಯಾವುದೇ ವಿದ್ಯಾರ್ಥಿಯ ಪೋಷಕರು, ಜೊತೆಯಲ್ಲಿ ವಾಸಿಸುವ ಹತ್ತಿರದ ಸಂಬಂಧಿಕರು ಕೊರೋನಾ ಹಿನ್ನೆಲೆಯಲ್ಲಿ ಕ್ವಾರಂಟೈನ್‍ಗೆ ಒಳಗಾಗಿದ್ದಲ್ಲಿ ಅಂತಹ ಪ್ರಕರಣಗಳನ್ನು ಪೂರ್ವಭಾವಿಯಾಗಿ ಪತ್ತೆ ಹಚ್ಚಿ ನಮ್ಮ ಇಲಾಖೆಯ ದಾಖಲೆ/ದತ್ತಾಂಶಗಳೊಂದಿಗೆ ತಾಳೆ ಮಾಡಲಾಗುತ್ತದೆ. ಅಂತಹ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ನಡೆಯುವ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ ದೊರಕಿಸುವಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.

    ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಪ್ರತಿ ವಿದ್ಯಾರ್ಥಿ ತಲಾ 2 ಮಾಸ್ಕ್​ಗಳನ್ನು ಪಡೆಯಲಿದ್ದಾರೆ. ಪ್ರತಿ ತಾಲೂಕಿನ ಕೇಂದ್ರ ಸ್ಥಾನ ಮತ್ತು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಕನಿಷ್ಠ 2 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.

    ಅಂತಿಮ ವರ್ಷ, ಸೆಮಿಸ್ಟರ್​ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲವೆಂದ ವಿಶ್ವವಿದ್ಯಾಲಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts