ಕರೊನಾ ಸಂಕಟ ಇದ್ದರೂ ಕೇಂದ್ರ ಸರ್ಕಾರಿ ನೌಕರರಿಗೆ ಪೂರ್ಣ ಸಂಬಳ

nirmala seetharaman
Published on

ನವದೆಹಲಿ: ಕರೊನಾ ಸಂಕಟದ ಹಿನ್ನೆಲೆಯಲ್ಲಿ ಬಹುತೇಕ ಸರ್ಕಾರಗಳು ಮತ್ತು ಖಾಸಗಿ ಸಂಸ್ಥೆಗಳು ತಮ್ಮ ಸಿಬ್ಬಂದಿಯ ವೇತನವನ್ನು ಕಡಿತಗೊಳಿಸಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮಾತ್ರ ತನ್ನ ಸಿಬ್ಬಂದಿಗೆ ಪೂರ್ಣ ಪ್ರಮಾಣದ ವೇತನ ಪಾವತಿಸಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿ, ಟ್ವೀಟ್​ ಮಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಕೇಂದ್ರ ಸರ್ಕಾರದ ಯಾವುದೇ ವರ್ಗದ ಸಿಬ್ಬಂದಿಯ ವೇತನವನ್ನು ಕಡಿತಗೊಳಿಸಲಾಗಿಲ್ಲ. ಅವರಿಗೆ ಪೂರ್ಣ ಪ್ರಮಾಣದ ವೇತನ ಪಾವತಿಸಲಾಗಿದೆ ಎಂದು ಹೇಳಿದ್ದಾರೆ. ತನ್ಮೂಲಕ ಅವರು ಈ ಬಗ್ಗೆ ಹಬ್ಬಿರುವ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಸದ್ಯಕ್ಕೆ ಕೇಂದ್ರ ಸರ್ಕಾರಿ ನೌಕರರು ಮತ್ತು ಸಿಬ್ಬಂದಿಯ ವೇತನ ಕಡಿತಗೊಳಿಸುವ ಯಾವುದೇ ಪ್ರಸ್ತಾಪ ಕೇಂದ್ರ ಸರ್ಕಾರಕ್ಕಿಲ್ಲ. ಈ ಕುರಿತು ಕೆಲ ಮಾಧ್ಯಮಗಳಲ್ಲಿ ಶೇ.20 ವೇತನ ಕಡಿಗೊಳಿಸಿರುವುದಾಗಿ ಪ್ರಸಾರವಾಗಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ಈ ಮಾತು ಪಿಂಚಣಿಗೂ ಅನ್ವಯವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net