More

    ಲೋಕಸಭೆ ಅಭ್ಯರ್ಥಿಗಳ ಬಗ್ಗೆ ತೀರ್ಮಾನವಾಗಿಲ್ಲ: ಬಿ.ವೈ.ವಿಜಯೇಂದ್ರ

    ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನ ಯಾರಿಗೆ ಲಾಟರಿ, ಯಾರಿಗೆ ಬಂಪರ್ ಎಂಬುದನ್ನು ಜನ ತೀರ್ಮಾನಿಸುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಕೃಪಾಕಟಾಕ್ಷ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದಾರೆ ಎಂಬ ಶಿವಕುಮಾರ್ ಹೇಳಿಕೆಗೆ ಈ ಪ್ರತಿಕ್ರಿಯೆ ನೀಡಿದರು.

    ರಾಜ್ಯದಲ್ಲಿ ಕಾಂಗ್ರೆಸ್ ಆಕಸ್ಮಿಕವಾಗಿ ಅಧಿಕಾರಕ್ಕೆ ಬಂದಿದೆ. ಜನರ ಮೂಗಿಗೆ ಗ್ಯಾರಂಟಿ ಎಂಬ ತುಪ್ಪ ಸವರಿ ಗೆದ್ದು ಬಂದಿದ್ದೀರಿ. ಲೋಕಸಭೆ ಚುನಾವಣೆಯಲ್ಲಿ ಲಾಟರಿನೋ ಅಥವಾ ಬಂಪರೋ ಗೊತ್ತಾಗುತ್ತದೆ ಎಂದು ಲೇವಡಿ ಮಾಡಿದರು.

    ನಾಲ್ಕು ಗೋಡೆ ಮಧ್ಯೆ ಪರಿಹಾರ:

    ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರ ಹಾಸನ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿಯೇ ಉಳಿಸಿಕೊಳ್ಳಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಇದು ನಾಲ್ಕು ಗೋಡೆಗಳ ಮಧ್ಯೆ ಮಾತನಾಡಬೇಕಾದ ವಿಚಾರ. ನಾಲ್ಕು ಗೋಡೆ ಮಧ್ಯೆ ಕುಳಿತು ಬಗೆಹರಿಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

    ವರಿಷ್ಠರು ತೀರ್ಮಾನ ಮಾಡುತ್ತಾರೆ

    ಮಾಜಿ ಸಚಿವ ಸುಧಾಕರ್ ನಾನೇ ಚಿಕ್ಕಬಳ್ಳಾಪುರ ಅಭ್ಯರ್ಥಿ ಎಂಬ ಹೇಳಿಕೆಗೆ, ಯಾವುದೇ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೀರ್ಮಾನ ಆಗಿಲ್ಲ. ರಾಜ್ಯದ 28 ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಆಗಬೇಕು. ಅದನ್ನು ಬಿಜೆಪಿ ವರಿಷ್ಠರು ಕಾರ್ಯಕರ್ತರ ಅಭಿಪ್ರಾಯ ಪಡೆದು ತೀರ್ಮಾನ ಮಾಡುತ್ತಾರೆ ಎಂದು ವಿಜಯೇಂದ್ರ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts