More

    ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ

    ತಿ.ನರಸೀಪುರ: ರಾಜ್ಯ ಸರ್ಕಾರಕ್ಕೆ ಹಣದ ಕೊರತೆ ಉಂಟಾಗಿರುವುದರಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ ಎಂದು ವರುಣ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಆರೋಪಿಸಿದರು.

    ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಣದ ಕೊರತೆ ಉಂಟಾಗಿ ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ನಯಾಪೈಸೆ ಅನುದಾನ ಬಿಡುಗಡೆಯಾಗದೆ ಅಭಿವೃದ್ಧಿ ಕುಂಠಿತವಾಗಿದೆ. ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನಕ್ಕೆ ಸರ್ಕಾರ ಕೊಕ್ ನೀಡಿದೆ. ಮೊದಲೇ ಮೇವಿನ ದರ ಏರಿಕೆಯಾಗಿದೆ. ಬೇಸಿಗೆಯಿಂದ ತತ್ತರಿಸಿರುವ ರೈತರ ಜೀವನೋಪಾಯ ಕಷ್ಟವಾಗಿರುವ ಸಂಧರ್ಭದಲ್ಲಿ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕಾದ್ದು ರಾಜ್ಯ ಸರ್ಕಾರದ ಕರ್ತವ್ಯವಾಗಿದ್ದು ಕೂಡಲೇ ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

    ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ನರೇಂದ್ರ ಮೋದಿ ಸರ್ಕಾರದಿಂದ ರೈತರಿಗೆ ಬರುತ್ತಿದ್ದ 10 ಸಾವಿರ ರೂ. ಪ್ರೋತ್ಸಾಹಧನ ಮುಂದುವರಿಸಬೇಕೆಂದು ಮಂಜುನಾಥ್ ಒತ್ತಾಯಿಸಿದರು.

    ರಾಜೀನಾಮೆ ಕೊಡುತ್ತಾರೆಯೇ?: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರದಲ್ಲಿದ್ದಾಗ ಬಿಜೆಪಿ ಸರ್ಕಾರವನ್ನು 40 ಪಸೆರ್ಂಟ್ ಕಮಿಷನ್ ಸರ್ಕಾರ ಎಂದು ಕಾಂಗ್ರೆಸ್ ಸರ್ಕಾರ ಆರೋಪಿಸಿ ಬೊಮ್ಮಾಯಿ ಅವರನ್ನು ಪೇ ಸಿಎಂ ಎಂದು ಅಪಪ್ರಚಾರ ಮಾಡಿದ್ದರು. ಆದರೆ ಈಗ ಅದೇ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ರಾಜ್ಯ ಸರ್ಕಾರದ ಮೇಲೆ ಲಂಚದ ಆರೋಪ ಮಾಡಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಏನು ಹೇಳುತ್ತಾರೆ? ಯಾರನ್ನು ಹೊಣೆ ಮಾಡುತ್ತಾರೆ? ಸಚಿವ ಸಂಪುಟ ಅಥವಾ ಸ್ವತಃ ಸಿಎಂ ಅವರೇ ರಾಜೀನಾಮೆ ನೀಡುತ್ತಾರೆಯೇ ಎಂದು ಪ್ರಶ್ನಿಸಿದರು.

    ಮತ್ತೊಮ್ಮೆ ಮೋದಿ!: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಸಾವಿರ ವರ್ಷಗಳ ದೂರದೃಷ್ಟಿಯೊಂದಿಗೆ ಕೆಲಸ ಮಾಡುತ್ತಿದ್ದು, ಮತ್ತೊಮ್ಮೆ ಅವರು ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದ ಅವರು, ರಾಷ್ಟ್ರಕ್ಕೆ ನರೇಂದ್ರ, ರಾಜ್ಯಕ್ಕೆ ವಿಜಯೇಂದ್ರ ಎಂಬಂತೆ ಇಬ್ಬರೂ ಧೀಮಂತ ನಾಯಕರನ್ನು ಈ ಬಾರಿ ಬೆಂಬಲಿಸುವ ಮೂಲಕ ಅವರ ಕೈ ಬಲಪಡಿಸಲು ಮುಂದಾಗಬೇಕು ಎಂದರು.

    ವರುಣ ಕ್ಷೇತ್ರದ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಕುಪ್ಪೇಗಾಲ ಶಿವಬಸಪ್ಪ, ಯುವ ಮೋರ್ಚಾ ಅಧ್ಯಕ್ಷ ಮೋಹನ್, ಕಾರ್ಯಕಾರಿಣಿ ಸಮಿತಿ ಸದಸ್ಯ ಹುಣಸೂರು ಮಹದೇವಸ್ವಾಮಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts