25.5 C
Bangalore
Monday, December 16, 2019

ಪ್ರವಾಸೋದ್ಯಮ ಇಲಾಖೆ ಅನಾಥ

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

 ಅವಿನ್ ಶೆಟ್ಟಿ ಉಡುಪಿ
ಇತರ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆ ಪ್ರವಾಸೋದ್ಯಮ ವಿಚಾರದಲ್ಲಿ ಮುಂಚೂಣಿಯಲ್ಲಿದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿ ಜಿಲ್ಲೆಗೆ ಮಹತ್ವ ನೀಡಬೇಕಿದ್ದ ಸರ್ಕಾರ, 10 ವರ್ಷಗಳಿಂದ ಇಲಾಖೆಯ ಸಹಾಯಕ ನಿರ್ದೇಶಕರ ಕಾಯಂ ಹುದ್ದೆಯನ್ನು ಖಾಲಿಯಾಗಿಯೇ ಉಳಿಸಿಕೊಂಡಿದೆ. ಜಿಲ್ಲಾಡಳಿತವೂ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

- Advertisement -

ಮನಮೋಹಕ ಸಮುದ್ರ ತೀರ, ಪಶ್ಚಿಮಘಟ್ಟ ಅರಣ್ಯ ಸಂಪತ್ತು, ಪ್ರಮುಖ ದೇವಾಲಯಗಳೂ ಸೇರಿದಂತೆ ಶೈಕ್ಷಣಿಕ, ಧಾರ್ಮಿಕ, ಭೌಗೋಳಿಕ ಸಂಪತ್ತು ಹೊಂದಿರುವ ಜಿಲ್ಲೆಯ ಪ್ರವಾಸೋದ್ಯಮ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಹೊಂದುತ್ತಿಲ್ಲ. ಜಿಲ್ಲೆಯ ಪಡುಬಿದ್ರಿ ಬೀಚ್‌ಗೆ ಬ್ಲೂ ಫ್ಲಾೃಗ್ ಯೋಜನೆ ಬಂದರೂ ಇಲಾಖೆಗೆ ಕಾಯಂ ಅಧಿಕಾರಿಗಳು ಇಲ್ಲದಿರುವುದು ದೊಡ್ಡ ಹಿನ್ನಡೆ.

2009ರಿಂದ ಇಲ್ಲಿವರೆಗೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಹುದ್ದೆ ಖಾಲಿ ಇದೆ. ಆರು ತಿಂಗಳು, ವರ್ಷಕ್ಕೊಬ್ಬರಂತೆ ಇನ್ನೊಂದು ಇಲಾಖೆ ಅಧಿಕಾರಿ ಪ್ರಭಾರ ನೇಮಕಗೊಂಡು ವರ್ಗಾವಣೆಯಾಗುತ್ತಾರೆ. ಪರಿಣಾಮ ಪ್ರವಾಸೋದ್ಯಮ ಇಲಾಖೆ ಕೆಲಸಗಳಿಗೂ ಸಮಯ ನೀಡಲಾಗದೆ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ.

ಜಿಲ್ಲೆಯಲ್ಲಿ ಬೀಚ್ ಪ್ರವಾಸೋದ್ಯಮ ಇನ್ನಷ್ಟು ಮೂಲಸೌಕರ್ಯ, ಅಭಿವೃದ್ಧಿ ನಿರೀಕ್ಷಿಸುತ್ತಿದೆ. ಪರಿಸರ ಸ್ನೇಹಿ ಧಾರ್ಮಿಕ ಪ್ರವಾಸೋದ್ಯಮವನ್ನು ವ್ಯವಸ್ಥಿತವಾಗಿ ರೂಪಿಸಲು ಸಾಧ್ಯವಾಗುತ್ತಿಲ್ಲ. ಕಾಲಬದ್ಧ ಹೂಡಿಕೆ ವಾತಾವರಣ ಇಲ್ಲದೆ ಪ್ರವಾಸೋದ್ಯಮ ಅಭಿವೃದ್ಧಿ ಹೇಳಿಕೊಳ್ಳುವಷ್ಟು ಪ್ರಗತಿ ಕಾಣುತ್ತಿಲ್ಲ. ಇದು ಇತರ ಸೇವಾ ವಲಯಗಳ ಬೆಳವಣಿಗೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಸ್ಥಳೀಯರಿಗೆ ಉದ್ಯೋಗ ಅವಕಾಶವೂ ಕಡಿಮೆಯಾಗುತ್ತಿದೆ.

ವರ್ಗಾವಣೆ, ಪ್ರಭಾರ: ಉಡುಪಿ ಪ್ರವಾಸೋದ್ಯಮ ಇಲಾಖೆಯಲ್ಲಿ 2007ರಲ್ಲಿ ಸಹಾಯಕ ನಿರ್ದೇಶಕರಾಗಿದ್ದ ಎಂ.ಆರ್.ಪ್ರಕಾಶ್ ಮೂರೂವರೆ ವರ್ಷ ಸೇವೆ ಸಲ್ಲಿಸಿ ವರ್ಗಾವಣೆಯಾಗಿದ್ದರು. ಬಳಿಕ ಮಂಗಳೂರು ಪ್ರವಾಸೋದ್ಯಮ ನಿರ್ದೇಶಕರಾಗಿದ್ದ ಜಿತೇಂದ್ರನಾಥ್ ಅವರಿಗೆ 2011ರಲ್ಲಿ ಉಡುಪಿ ಜಿಲ್ಲೆಯ ಹುದ್ದೆಯನ್ನು ಪ್ರಭಾರ ನೀಡಲಾಗಿತ್ತು. ವರ್ಷದ ನಂತರ 2012ರಲ್ಲಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಅಂಕುಷ್ ಅವರಿಗೆ ಇಲಾಖೆ ಪ್ರಭಾರ ಜವಾಬ್ದಾರಿ ನೀಡಲಾಗಿತ್ತು. ಇವರು ಏಳು ತಿಂಗಳು ಪ್ರಭಾರ ಇದ್ದರು. ಇನ್ನಾರು ತಿಂಗಳು ಸಣ್ಣ ಉಳಿತಾಯ ಖಾತೆ ಇಲಾಖೆ ಅಧಿಕಾರಿಗೆ ಪ್ರಭಾರ ನೀಡಲಾಗಿತ್ತು.

ಬಳಿಕ 2013-14ರಲ್ಲಿ ಶಿಕ್ಷಣ ಇಲಾಖೆ ಅಧಿಕಾರಿ ನಾಗರಾಜ್ ಅವರಿಗೆ ಪ್ರವಾಸೋದ್ಯಮ ಇಲಾಖೆ ಪ್ರಭಾರ ನೀಡಲಾಗಿತ್ತು. 2 ವರ್ಷ 6 ತಿಂಗಳ ಬಳಿಕ ವರ್ಗಾವಣೆಯಾದಾಗ ನಗರಾಭಿವೃದ್ಧಿ ಕೋಶದ ಅಧಿಕಾರಿಗೆ ಪ್ರಭಾರ ನೀಡಲಾಗಿತ್ತು. 2017ರಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿ ಅನಿತಾ ಭಾಸ್ಕರ್‌ಗೆ ಇಲಾಖೆ ಪ್ರಭಾರ ಜವಾಬ್ದಾರಿ ವಹಿಸಲಾಗಿತ್ತು. ಮಧ್ಯದಲ್ಲಿ 2 ತಿಂಗಳು ರಜೆಯಲ್ಲಿ ಹೋದಾಗ ನೆಹರು ಯುವ ಕೇಂದ್ರದ ಅಧಿಕಾರಿಗೆ ಜವಾಬ್ದಾರಿ ಕೊಡಲಾಗಿತ್ತು. ಈಗ ಅನಿತಾ ಭಾಸ್ಕರ್ ಹಾವೇರಿಗೆ ವರ್ಗಾವಣೆಯಾಗಿದ್ದು, ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ನಾಯ್ಕ ಅವರಿಗೆ ಪ್ರವಾಸೋದ್ಯಮ ಇಲಾಖೆ ಪ್ರಭಾರ ಜವಾಬ್ದಾರಿ ನೀಡಲಾಗಿದೆ.
ದ.ಕ. ಪರಿಸ್ಥಿತಿಯೂ ಭಿನ್ನವಲ್ಲ: ಪ್ರವಾಸೋದ್ಯಮ ಇಲಾಖೆಯಲ್ಲಿ ದಕ್ಷಿಣ ಕನ್ನಡದಲ್ಲಿ ಪೂರ್ಣ ಪ್ರಮಾಣದ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದ ಸಂದರ್ಭ ತೀರಾ ಕಡಿಮೆ. ಪ್ರಸ್ತುತ ಜಿಲ್ಲೆಯಲ್ಲಿ ಸಹಾಯಕ ನಿರ್ದೇಶಕರಾಗಿ (ಪ್ರಭಾರ) ಕರ್ತವ್ಯ ನಿರ್ವಹಿಸುತ್ತಿರುವವರು ಉದಯ ಕುಮಾರ್ ಶೆಟ್ಟಿ. ಇವರ ಮೂಲ ಇಲಾಖೆ ಸಾಂಖ್ಯಿಕ. ಇವರಿಗೆ ಮೊದಲು ಪ್ರಭಾರ ಸಹಾಯಕ ನಿರ್ದೇಶಕರಾಗಿ ಕ್ಲಿಫರ್ಡ್ ಲೋಬೊ (ವಲಯ ಅರಣ್ಯ ಅಧಿಕಾರಿ), ತೇಜೋಮುಖಿ (ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್), ಪ್ರಭಾಕರ ಕರ್ತವ್ಯ ನಿರ್ವಹಿಸಿದ್ದಾರೆ. 2014 ಬಳಿಕ ಇಲ್ಲಿಗೆ ಪೂರ್ಣ ಪ್ರಮಾಣದ ಅಧಿಕಾರಿಯೇ ಇಲ್ಲ.

 ಸರ್ಕಾರದ ಮಟ್ಟದಲ್ಲಿ ಪ್ರವಾಸೋದ್ಯಮ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಹುದ್ದೆ ನೇಮಕಾತಿ ನಡೆದಿಲ್ಲ. ಬಹುತೇಕ ಜಿಲ್ಲೆಗಳಲ್ಲಿ ಈ ಹುದ್ದೆ ಖಾಲಿ ಇದೆ. ಪ್ರವಾಸೋದ್ಯಮ ಕಾರ್ಯಕ್ರಮ, ಕೆಲಸಗಳಿಗೆ ಸಮಸ್ಯೆಯಾಗದಂತೆ ಜಿಲ್ಲಾಡಳಿತ ಇತರೆ ಇಲಾಖೆ ಅಧಿಕಾರಿಗಳನ್ನು ಪ್ರಭಾರ ನೇಮಿಸುತ್ತಿದೆ. ಇಲಾಖೆಯ ಕಾಯಂ ಅಧಿಕಾರಿ ನೇಮಕ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು.
– ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ, ಉಡುಪಿ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...