More

    ಉಚಿತವಾಗಿ ರಾಷ್ಟ್ರ ಧ್ವಜ ಕೇಳಬೇಡಿ, ಸಾರ್ವಜನಿಕರಿಗೆ ಸಚಿವ ಸುನೀಲ್ ಮನವಿ

    ಮಂಗಳೂರು: ದೇಶದ ಸ್ವಾತಂತ್ರೃದ ಅಮೃತ ವರ್ಷಾಚರಣೆಯನ್ನು ಆ.13ರಿಂದ 15ರ ತನಕ ಜಿಲ್ಲೆಯ ಎಲ್ಲ ಮನೆ, ಕಟ್ಟಡಗಳಲ್ಲಿ ರಾಷ್ಟ್ರಧ್ವಜ ಹಾರಿಸಿ ಅರ್ಥಪೂರ್ಣವಾಗಿ ಹಬ್ಬದ ಸಂಭ್ರಮದಲ್ಲಿ ಆಚರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಕರೆ ನೀಡಿದರು.

    ಉರ್ವಸ್ಟೋರ್‌ನ ಅಂಬೇಡ್ಕರ್ ಭವನದಲ್ಲಿ ಶನಿವಾರ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲರ ಮನೆ ಹಾಗೂ ಕಟ್ಟಡಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಬೇಕು. ಮನೆಮಂದಿ ಎಲ್ಲರೂ ಸೇರಿ ಧ್ವಜಾರೋಹಣ ನಡೆಸಬೇಕು. ಧ್ವಜವಂದನೆ ಬಳಿಕ ಸಿಹಿ ತಿಂಡಿ ಹಂಚಿ ಸಂಭ್ರಮಿಸಬೇಕು. ಧ್ವಜಕ್ಕೆ ಅಲಂಕಾರ ಮಾಡುವಂತಿಲ್ಲ, ಧ್ವಜ ಸಂಹಿತೆಯಂತೆ ಆರೋಹಣ ನಡೆಸಬೇಕು. ಎಲ್ಲಿಯೂ ಧ್ವಜಾರೋಹಣ ಲೋಪವಾಗದಂತೆ, ಧ್ವಜಕ್ಕೆ ಅವಮಾನ ಆಗದಂತೆ ಎಚ್ಚರ ವಹಿಸಬೇಕು ಎಂದರು.

    ಸ್ವಾತಂತ್ರೃದ ಅಮೃತೋತ್ಸವದಲ್ಲಿ ಪಾಲ್ಗೊಳ್ಳಲು ಎಲ್ಲರೂ ಹಣ ತೆತ್ತು ಧ್ವಜ ಖರೀದಿಸಬೇಕು. ಯಾವುದೇ ಕಾರಣಕ್ಕೂ ಉಚಿತ ಧ್ವಜಕ್ಕೆ ಒತ್ತಾಯ ಮಾಡಬಾರದು. ಗ್ರಾಮೀಣ ಭಾಗದಲ್ಲಿ ಧ್ವಜ ಆರೋಹಣಕ್ಕೆ ಕಡ್ಡಿಗಳು ಸಿಗುತ್ತದೆ. ಆದರೆ ನಗರ ಪ್ರದೇಶಗಳಲ್ಲಿ ಧ್ವಜದ ಜತೆ ಕಡ್ಡಿಯನ್ನೂ ನೀಡಿದರೆ ಉತ್ತಮ. ಧ್ವಜವನ್ನು ಗ್ರಾಮ ಪಂಚಾಯಿತಿ ಕೇಂದ್ರ ಹಾಗೂ ನಗರಾಡಳಿತ ಕೇಂದ್ರಗಳಿಂದ ಪಡೆಯಬಹುದು. ಮನೆ, ಕಟ್ಟಡಗಳಲ್ಲಿ ಧ್ವಜ ಆರೋಹಣದ ಫೋಟೋವನ್ನು ಜಿಲ್ಲಾಡಳಿತ ನೀಡುವ ಪ್ರತ್ಯೇಕ ವಾಟ್ಸ್‌ಆ್ಯಪ್ ನಂಬರಿಗೆ ಕಳುಹಿಸಬೇಕು ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

    ಪ್ಲಾಸ್ಟಿಕ್ ಧ್ವಜ ಇಲ್ಲ, ವಾಹನಕ್ಕಿಲ್ಲ ಧ್ವಜ: ಎಲ್ಲಿಯೂ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೆ ಅವಕಾಶ ಇಲ್ಲ. ಅದೇ ರೀತಿ ಯಾವುದೇ ರೀತಿಯ ವಾಹನಗಳಲ್ಲೂ ಧ್ವಜ ಹಾರಾಟಕ್ಕೆ ಆಸ್ಪದ ಇಲ್ಲ ಎಂದು ಜಿಪಂ ಸಿಇಒ ಡಾ.ಕುಮಾರ್ ಹೇಳಿದರು. ಸರ್ಕಾರದ ನಿಯಮದಂತೆ ಅತಿ ಗಣ್ಯರ ವಾಹನಗಳಲ್ಲಿ ಮಾತ್ರ ಎದುರು ಭಾಗದಲ್ಲಿ ಧ್ವಜ ಹಾಕಬಹುದು.

    ಆದರೆ ವಾಹನದ ಒಳಭಾಗದಲ್ಲಿ ಸ್ಟೇರಿಂಗ್ ಎದುರು ಮಾತ್ರ ಪುಟ್ಟ ಧ್ವಜ ಹಾಕಲು ಅಡ್ಡಿ ಇಲ್ಲ. ಕೈಮಗ್ಗ, ಖಾದಿ, ರೇಷ್ಮೆ, ಉಣ್ಣೆ, ಪಾಲಿಸ್ಟರ್ ಧ್ವಜ ಹಾಕಲು ಅವಕಾಶ ಇದೆ. ಇಲ್ಲಿ ಪಾಲಿಸ್ಟರ್, ಖಾದಿ, ಕಾಟನ್ ಧ್ವಜ ನೀಡಲಾಗುತ್ತಿದೆ. ರಾಷ್ಟ್ರಧ್ವಜ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವುದರಿಂದ ಸ್ವಾತಂತ್ರೊೃೀತ್ಸವದ ಅಮೃತೋತ್ಸವ ಸಂದರ್ಭ ರಾತ್ರಿಯೂ ಇಳಿಸದೆ ಧ್ವಜ ಹಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಮಾರ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts