20.4 C
Bengaluru
Sunday, January 19, 2020

ಬೈರಾಡಿ ಕೆರೆ ಅಭಿವೃದ್ಧಿಗೆ ಅನುದಾನ ಕೊರತೆ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಭರತ್ ಶೆಟ್ಟಿಗಾರ್ ಮಂಗಳೂರು 
ಮಂಗಳೂರು ನಗರ ವ್ಯಾಪ್ತಿಯಲ್ಲಿ ಸದ್ಯ ಒತ್ತುವರಿಯಾಗದೆ ಬಾಕಿ ಇರುವ ಕೆರೆಗಳಲ್ಲಿ ಒಂದಾಗಿರುವ ಬೈರಾಡಿ ಕೆರೆ ಅಭಿವೃದ್ಧಿ ಕೆಲಸ ಬಿರುಸಿನಿಂದ ನಡೆಯುತ್ತಿದೆ. ಆದರೆ ಮೊದಲ ಹಂತದಲ್ಲಿ ಮೀಸಲಿಟ್ಟ ಮೊತ್ತ ಕಡಿಮೆಯಾದ ಕಾರಣ ಕೆರೆಯ ಒಂದು ಪಾರ್ಶ್ವದ ಕೆಲಸ ಬಾಕಿ ಉಳಿದಿದೆ.

ಅಳಪೆ ಗ್ರಾಮದ ಪಡೀಲ್‌ನಲ್ಲಿರುವ 2.32 ಎಕರೆ ವಿಸ್ತೀರ್ಣ ಹೊಂದಿರುವ ಈ ಕೆರೆಯ ಅಭಿವೃದ್ಧಿಗೆಂದು 3.30 ಕೋಟಿ ರೂ. ಮೊತ್ತ ಮೀಸಲಿಡಲಾಗಿತ್ತು. ಈ ಪೈಕಿ ಸಣ್ಣ ನೀರಾವರಿ ಇಲಾಖೆ 80 ಲಕ್ಷ ರೂ. ಹಾಗೂ ಮುಡಾ ಕೆರೆ ಅಭಿವೃದ್ಧಿ ನಿಧಿಯಿಂದ 2.50 ಕೋಟಿ ರೂ. ಒದಗಿಸಿದೆ. ಆದರೆ ಈ ಅನುದಾನ ಸಾಕಾಗದ ಹಿನ್ನೆಲೆಯಲ್ಲಿ ಮತ್ತೆ ಮುಡಾ ಕೆರೆ ಅಭಿವೃದ್ಧಿ ನಿಧಿಯಿಂದ ಹಣ ಒದಗಿಸುವಂತೆ ಕೇಳಲು ನಿರ್ಧರಿಸಲಾಗಿದೆ. ಮುಂದಿನ ಮುಡಾ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗುವುದು. ಉಳಿಕೆ ಕಾಮಗಾರಿಗಳಿಗೆ ಅಂದಾಜು ವೆಚ್ಚದ ಪ್ರಸ್ತಾವನೆ ಸಿದ್ಧಪಡಿಸುವಂತೆ ಶಾಸಕರು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಡೆದ ಅಭಿವೃದ್ಧಿ ಕೆಲಸಗಳು: ಕೆರೆಯ ಸುತ್ತ ಆವರಣಗೋಡೆ ನಿರ್ಮಿಸಿ ಕಬ್ಬಿಣದ ಗ್ರಿಲ್ಸ್ ಅವಳವಡಿಸಲಾಗಿದೆ. ಕೆರೆಯ ಮೆಟ್ಟಿಲುಗಳನ್ನು ಸರಿಪಡಿಸಲಾಗಿದ್ದು, ನೀರಿಗೆ ಇಳಿಯಲು ಸಹಕಾರಿಯಾಗುವಂತೆ ಹೆಚ್ಚುವರಿಯಾಗಿ ಕಡಿಮೆ ಎತ್ತರದ ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ. ಕೆರೆಗೆ ಪ್ರವೇಶಿಸುವಲ್ಲಿ ಸ್ವಾಗತ ಕಮಾನು ನಿರ್ಮಿಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿಯಿಂದ ನೇರವಾಗಿ ಕೆರೆ ಪ್ರವೇಶಿಸಲು ಸಾಧ್ಯವಾಗುವಂತೆ ರಸ್ತೆ ನಿರ್ಮಿಸಲಾಗಿದೆ. ಇದಕ್ಕೆ ಡಾಂಬರು ಅಥವಾ ಕಾಂಕ್ರೀಟ್ ಹಾಕಲು ಬಾಕಿಯಿದೆ. ಕೆರೆಯ ರಕ್ಷಣೆಗೆ ಸೆಕ್ಯುರಿಟಿ ವ್ಯವಸ್ಥೆ ಮಾಡಲು ಉದ್ದೇಶಿದ್ದು, ಅದಕ್ಕಾಗಿ ಪ್ರವೇಶ ದ್ವಾರದಲ್ಲಿ ಸೆಕ್ಯುರಿಟಿ ಕೋಣೆಯನ್ನೂ ಸಿದ್ಧಮಾಡಲಾಗಿದೆ. ಸುತ್ತಲೂ ಇಂಟರ್‌ಲಾಕ್ ಅಳವಡಿಸಲಾಗಿದ್ದು, ವಾಕಿಂಗ್ ಮಾಡುವವರಿಗೆ ಅನುಕೂಲವಾಗಲಿದೆ. ಸ್ಥಳದಲ್ಲಿ ಗಾರ್ಡ್‌ನ್ ಮಾಡುವ ಉದ್ದೇಶವನ್ನೂ ಹೊಂದಲಾಗಿದೆ.
 
ಆಗಬೇಕಿದೆ ಇತರ ಕೆರೆಗಳ ಅಭಿವೃದ್ಧಿ: ನಗರದಲ್ಲಿ ಇನ್ನೂ ಹಲವು ಕೆರೆಗಳಿದ್ದು ಬೈರಾಡಿಕೆರೆ ಮಾದರಿಯಲ್ಲಿ ಅವುಗಳ ಅಭಿವೃದ್ಧಿಯೂ ಆಗಬೇಕಿದೆ. ಪ್ರಮುಖವಾಗಿ ಗುಜ್ಜರ ಕೆರೆ ಮತ್ತು ಕಾವೂರು ಕೆರೆಗಳ ಅಭಿವೃದ್ಧಿ ಕುರಿತು ಮಾತುಗಳು ಕೇಳಿಬರುತ್ತಿದೆಯಾದರೂ ಕಾಮಗಾರಿ ಪ್ರಗತಿ ಮಾತ್ರ ಕಾಣುತ್ತಿಲ್ಲ. ಈ ಎರಡೂ ಕೆರೆಗಳಲ್ಲೂ ಹೂಳು ತುಂಬಿದ್ದು, ಒಳಚರಂಡಿ ನೀರು ಕೆರೆ ಸೇರುತ್ತಿದೆ ಎನ್ನುವ ಆರೋಪವೂ ಇದೆ.

ಕೆರೆ ಉಳಿಸುವ ನಿಟ್ಟಿನಲ್ಲಿ ಬೈರಾಡಿ ಕೆರೆ ಸಂರಕ್ಷಣಾ ಸಮಿತಿ ನಡೆಸಿದ ಪ್ರಯತ್ನ ಯಶಸ್ವಿಯಾಗಿದ್ದು, ಕರೆ ಅಭಿವೃದ್ಧಿ ಕಾಣುತ್ತಿದೆ. ಬೇಸಿಗೆಯಲ್ಲೂ ನೀರಿನಿಂದ ತುಂಬಿರುವ ಈ ಕೆರೆಯಿಂದ, ನಗರದಲ್ಲಿ ನೀರಿಗೆ ಸಮಸ್ಯೆಯಾದರೆ ಎರಡು ದಿನ ನಗರಕ್ಕೆ ನೀರು ಪೂರೈಕೆ ಮಾಡಲು ಸಾಧ್ಯವಿದೆ. ಅಲ್ಲದೆ ಸ್ಥಳೀಯವಾಗಿ ಅಂತರ್ಜಲ ಮಟ್ಟವನ್ನೂ ಹೆಚ್ಚಿಸಿದೆ. ಕೆರೆಯೊಂದನ್ನು ಉಳಿಸಿದ ಹೆಮ್ಮೆ ನಮ್ಮದು.
ಡಾ.ಅಣ್ಣಯ್ಯ ಕುಲಾಲ್ ಬೈರಾಡಿ ಕೆರೆ ಸಂರಕ್ಷಣಾ ಸಮಿತಿ ಅಧ್ಯಕ್ಷ

ಕೆರೆ ಅಭಿವೃದ್ಧಿಗಾಗಿ ಈ ಹಿಂದೆ ತೆಗೆದಿಟ್ಟ ಮೊತ್ತ ಕಡಿಮೆಯಾದ ಹಿನ್ನೆಲೆಯಲ್ಲಿ ಒಂದು ಪಾರ್ಶ್ವದಲ್ಲಿ ಕೆಲಸ ಬಾಕಿಯಾಗಿದೆ. ಶೇ.90ರಷ್ಟು ಅಭಿವೃದ್ಧಿ ಕೆಲಸಗಳು ಈಗಾಗಲೇ ಪೂರ್ಣಗೊಂಡಿದೆ. ಎರಡು ಮೂರು ತಿಂಗಳಲ್ಲಿ ಕಾಮಗಾರಿ ಮುಗಿಸಿ, ಉದ್ಘಾಟಿಸಲಾಗುವುದು.
ವೇದವ್ಯಾಸ ಕಾಮತ್‌ಶಾಸಕ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...