

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಿಗೆ ಶೀಘ್ರ ಬೀಗ ಬೀಳಲಿದೆ ಎಂಬ ವಿಷಯವನ್ನು ಉಲ್ಲೇಖಿಸಿರುವ ವಿಪಕ್ಷ ನಾಯಕ ಆರ್. ಅಶೋಕ. ಅಧಿಕಾರಕ್ಕೇರಲು ಅಸ್ತಾವಿಕ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದ ಕಾಂಗ್ರೆಸ್, ಈಗ ಅದನ್ನೆಲ್ಲ ಬಂದ್ ಮಾಡಲು ಹೊರಟಿದೆ ಎಂದಿದ್ದಾರೆ.
"ಅಧಿಕಾರಕ್ಕೇರಲು ಅವಾಸ್ತವಿಕ ಗ್ಯಾರಂಟಿಗಳನ್ನು ಘೋಷಿಸಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಬಳಿಕ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದೆ ಈಗ ಗ್ಯಾರಂಟಿಗಳನ್ನು ಬಂದ್ ಮಾಡಲು ಹೊರಟಿದೆ. ಕೈ ಸರ್ಕಾರದ ಅವಾಸ್ತವಿಕ ಗ್ಯಾರಂಟಿಗಳು ಇನ್ನು ಮುಂದೆ ಮಹಾದೇಪ್ಪರಿಗೂ ಇಲ್ಲ, ಕಾಕಾ ಪಾಟೀಲರಿಗೂ ಇಲ್ಲ" ಎಂದು ಟ್ವೀಟ್ ಮೂಲಕ ಟೀಕಿಸಿದ್ದಾರೆ.
ಇನ್ನು ಮುಡಾ ವಿಚಾರದ ಬಗ್ಗೆಯೂ ವ್ಯಂಗ್ಯವಾಡಿದ ಅವರು, "ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಮೂಡಾದಿಂದ ಅಕ್ರಮವಾಗಿ ನಿವೇಶನ ಹಂಚಿಕೆ ಆಗಿರುವ ಪ್ರಕರಣದಲ್ಲಿ ಅಂದಿನ ಮೈಸೂರು ಜಿಲ್ಲಾಧಿಕಾರಿ ಮತ್ತು ಹಾಲಿ ಕಾಂಗ್ರೆಸ್ ಸಂಸದ ಕುಮಾರ್ ನಾಯಕ ಅವರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಲೋಕಾಯುಕ್ತ ವರದಿಯಲ್ಲಿ ಸಾಬೀತಾಗಿದ್ದು, ಕುಮಾರ್ ರಾಜೀನಾಮೆ ಪಡೆಯಬೇಕೆಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ರನ್ನು ಆಗ್ರಹಿಸುತ್ತೇನೆ" ಎಂದು ಹೇಳಿದ್ದಾರೆ.
"ಇಷ್ಟೇ ಅಲ್ಲದೆ ಲೋಕಾಯುಕ್ತ ವರದಿಯಲ್ಲಿ ಶಿಫಾರಸು ಮಾಡಿರುವಂತೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸರಕಾರವನ್ನು ಒತ್ತಾಯಿಸುತ್ತೇನೆ" ಎಂದು ತಿಳಿಸಿದ್ದಾರೆ.