More

    ಅರೆಬೆತ್ತಲೆ ದೇಹದ ಮೇಲೆ ಮಕ್ಕಳು ಡ್ರಾಯಿಂಗ್ ಮಾಡಿದ್ದರಲ್ಲಿ ಅಶ್ಲೀಲತೆ ಏನಿದೆ? ಸರ್ಕಾರಕ್ಕೆ ರೆಹನಾ ತಿರುಗೇಟು!

    ಕೊಚ್ಚಿ: ಅರೆಬೆತ್ತಲೆ ದೇಹದ ಮೇಲೆ ಹೆತ್ತ ಮಕ್ಕಳಿಂದಲೇ ಡ್ರಾಯಿಂಗ್​ ಮಾಡಿಸಿಕೊಂಡು, ವಿವಾದಾತ್ಮಕ ವಿಡಿಯೋ ಹರಿಬಿಟ್ಟು ಪೊಕ್ಸೊ ಕಾಯ್ದೆಯಡಿ ಕಾನೂನು ಕ್ರಮ ಎದುರಿಸುತ್ತಿರುವ ಹೋರಾಟಗಾರ್ತಿ ರೆಹನಾ ಫಾತಿಮಾ, ಜಾಮೀನು ಅರ್ಜಿಗೆ ತಕರಾರು ಸಲ್ಲಿಸಿರುವ ಕೇರಳ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಕೋರ್ಟ್​ನಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ.

    ನಾನು ಹರಿಬಿಟ್ಟ ವಿಡಿಯೋದಲ್ಲಿ ಯಾವುದೇ ಅಸಭ್ಯತೆಯಾಗಲಿ ಅಥವಾ ಅಶ್ಲೀಲತೆಯಾಗಲಿ ಒಳಗೊಂಡಿಲ್ಲ. ಮಕ್ಕಳ ಅಸಭ್ಯ ಅಥವಾ ಅಶ್ಲೀಲತೆಗೂ ಪ್ರಾತಿನಿಧ್ಯ ನೀಡಿಲ್ಲ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಮನೆ ಖಾಲಿ ಮಾಡಮ್ಮ ರೆಹನಾ! ಮಕ್ಕಳ ಮುಂದೆ ಅರೆಬೆತ್ತಲೆಯಾದವಳಿಗೆ ಸಂಕಷ್ಟದ ಮೇಲೆ ಸಂಕಷ್ಟ!

    ರೆಹನಾ ಪರ ಮಾತನಾಡಿರುವ ವಕೀಲರು, ವಿಡಿಯೋದಲ್ಲಿ ಬೆತ್ತಲೆ ಎದಯನ್ನು ತೋರಿಸಿಲ್ಲ. ತಾಯಿಯ ದೇಹದ ಮೇಲೆಯೇ ಮಕ್ಕಳು ಚಿತ್ರಿಸಿರುವುದರಿಂದ ಇಲ್ಲಿ ಮಕ್ಕಳಿಗೆ ಯಾವುದೇ ಶೋಷಣೆ ನಡೆದಿಲ್ಲ. ರೆಹನಾ ಅವರ ಪೇಂಟ್​ ಮೂಲಕ ಮುಚ್ಚಲಾಗಿತ್ತು. ಇದರಲ್ಲಿ ವ್ಯಕ್ತಿಯ ಲೈಂಗಿಕ ಭಾವನೆ ಕೆರಳಿಸುವಂತಹ ಯಾವುದೇ ಅಂಶವು ಇರಲಿಲ್ಲ ಎಂದು ಕೋರ್ಟ್​ ಮುಂದೆ ವಾದ ಮಂಡಿಸಿದ್ದಾರೆ.

    ಇದೇ ವೇಲೆ ರೆಹನಾಗೆ ನಿರೀಕ್ಷಣಾ ಜಾಮೀನು ನೀಡುವಂತೆ ಕೇಳಿದ ವಕೀಲರು ಅವರು ಎಲ್ಲಿಗೂ ಪರಾರಿಯಾಗುವುದಿಲ್ಲ. ವಿಚಾರಣೆ ಅವಶ್ಯಕತೆ ಇದ್ದಾಗಲೆಲ್ಲಾ ಲಭ್ಯವಾಗುತ್ತಾರೆ ಎಂದು ಕೋರ್ಟ್​ ಬಳಿ ಮನವಿ ಮಾಡಿದರು.

    ಸರ್ಕಾರದ ನಿಲುವೇನು?
    ಜೂನ್​ ತಿಂಗಳಲ್ಲೇ ರೆಹನಾ ಜಾಮೀನು ಅರ್ಜಿಗೆ ವಿರೋಧಿಸಿ ಸರ್ಕಾರ ಅರ್ಜಿ ಸಲ್ಲಿಸಿತ್ತು. ರೆಹನಾ ತಮ್ಮ ಅರೆನಗ್ನ ದೇಹದ ಮೇಲೆ ಚಿತ್ರಿಸಲು ಮಕ್ಕಳನ್ನು ಬಳಸಿಕೊಂಡಿದ್ದಾರೆ. ಇದು ಪೊಕ್ಸೊ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಕೋರ್ಟ್​ನಲ್ಲಿ ಹೇಳಲಾಗಿತ್ತು.

    ಇದನ್ನೂ ಓದಿ: ತನ್ನ ಮಕ್ಕಳ ಮುಂದೆ ಅರೆಬೆತ್ತಲೆಯಾದ ರೆಹಾನಾಗೆ ಮತ್ತೊಂದು ಸಂಕಷ್ಟ!

    ಘಟನೆ ಹಿನ್ನೆಲೆ ಏನು?
    ರೆಹನಾ ಜೂನ್​ 19ರಂದು ತನ್ನ ಯೂಟ್ಯೂಬ್​ ಚಾನಲ್​ನಲ್ಲಿ ಬಾಡಿ ಆರ್ಟ್ಸ್​ ಪಾಲಿಟಿಕ್ಸ್​ (#BodyArtPolitics) ಎಂಬ ಅಡಿಬರಹದೊಂದಿಗೆ ವಿಡಿಯೋವೊಂದನ್ನು ಪೋಸ್ಟ್​ ಮಾಡಿದ್ದರು. ವಿಡಿಯೋದಲ್ಲಿ ರೆಹನಾ ತನ್ನ ಮಗ ಹಾಗೂ ಮಗಳ ಕೈಯಿಂದ ಅರೆಬೆತ್ತಲೆ ದೇಹದ ಮೇಲೆ ಚಿತ್ರ ಬಿಡಿಸಿಕೊಳ್ಳುತ್ತಿರುವ ದೃಶ್ಯವಿದೆ. ವಿಡಿಯೋ ಮಾಡಿದ್ದರ ಉದ್ದೇಶದ ಬಗ್ಗೆ ತಿಳಿಸಿದ್ದ ರೆಹನಾ, ಲೈಂಗಿಕತೆ ಮತ್ತು ನಗ್ನತೆ ನಿಷೇಧವಾಗಿರುವ ಸಮಾಜದಲ್ಲಿ ಮಹಿಳೆಯರು ಲೈಂಗಿಕತೆ ಮತ್ತು ಅವರ ದೇಹದ ಬಗ್ಗೆ ಮುಕ್ತವಾಗಿರಬೇಕು ಎಂದು ಪುನರುಚ್ಚರಿಸುವುದಕ್ಕಾಗಿ ಈ ವಿಡಿಯೋವನ್ನು ಮಾಡಿದ್ದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ದೂರು ದಾಖಲಾಗಿತ್ತು. ಅಲ್ಲದೆ, ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಆಯೋಗವು ಸಹ ಮಧ್ಯಪ್ರವೇಶಿಸಿತ್ತು.

    ಅಂದಹಾಗೆ ರೆಹನಾ ಅವರು ಬಿಎಸ್​ಎನ್​ಎಲ್​ ಮಾಜಿ ಉದ್ಯೋಗಿಯಾಗಿದ್ದಾರೆ. ಅಯ್ಯಪ್ಪ ಭಕ್ತರ ನಂಬಿಕೆಗೆ ನೋವುಂಟು ಮಾಡುವ ಫೇಸ್​ಬುಕ್​ ಪೋಸ್ಟ್​ ಹಾಕಿದ ಆರೋಪದಲ್ಲಿ ಈ ಹಿಂದೆ ಬಂಧಿತರಾಗಿ 18 ದಿನ ಜೈಲುವಾಸ ಅನುಭವಿಸಿದ್ದರು. ಅಲ್ಲದೆ, ಶಬರಿಮಲೆಗೆ ಮಹಿಳೆಯರು ಪ್ರವೇಶಿಸಬಹುದೆಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದ ಬಳಿಕ 2018ರ ಅಕ್ಟೋಬರ್​ನಲ್ಲಿ ರೆಹನಾ ಸಹ ಶಬರಿಮಲೆಗೆ ಭೇಟಿ ನೀಡುವ ಪ್ರಯತ್ನ ಮಾಡಿ, ಬಂಧಿತರಾಗಿ ಬಿಡುಗಡೆಯಾಗಿದ್ದರು. (ಏಜೆನ್ಸೀಸ್​)

    ಅರೆನಗ್ನ ದೇಹದ ಮೇಲೆ ತನ್ನ ಮಕ್ಕಳಿಂದಲೇ ಡ್ರಾಯಿಂಗ್​ ಮಾಡಿಸಿಕೊಂಡ ರೆಹನಾ ಫಾತಿಮಾಗೆ ಸಂಕಷ್ಟ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts