20.3 C
Bangalore
Sunday, December 15, 2019

ಡಿಸಿ, ಎಸ್ಪಿ ಕಚೇರಿ ವಾಹನಗಳಿಗೆ ವಿಮೆಯಿಲ್ಲ!

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

| ಕೆ.ರಮೇಶ ಭಟ್ಟ ಶಹಾಬಾದ್
ಖಾಸಗಿ ವಾಹನಗಳಿಗೆ ವಿಮೆ ಇಲ್ಲದಿದ್ದರೆ ದಂಡ ವಸೂಲಿ ಮಾಡುವ ಸರ್ಕಾರ, ಜಿಲ್ಲೆಯಲ್ಲಿರುವ ಇಲಾಖೆ ವಾಹನಗಳಿಗೆ ಅನೇಕ ವರ್ಷಗಳಿಂದ ವಿಮೆ ಮಾಡಿಸಿಲ್ಲ!

ಆನ್​ಲೈನ್ ಮೂಲಕ ಮಾಹಿತಿ ಹಕ್ಕು ಕಾರ್ಯಕರ್ತ ಮಹಾಂತೇಶ ಕರದಳ್ಳಿ ಪಡೆದ ಮಾಹಿತಿಯಲ್ಲಿ ಸರ್ಕಾರದ ಅಧೀನದ ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಈಶಾನ್ಯ ಸಾರಿಗೆ, ಆರೋಗ್ಯ ಇಲಾಖೆಯ ಎಷ್ಟೋ ವಾಹನಗಳಿಗೆ ಹಲವಾರು ವರ್ಷ, ತಿಂಗಳಿಂದ ವಿಮೆ ಹಣ ಪಾವತಿಸದೆ ನಿರ್ಲಕ್ಷಿಸಿರುವುದು ಬೆಳಕಿಗೆ ಬಂದಿದ್ದು, ಅವುಗಳಲ್ಲಿ ಸಂಚರಿಸುವ ಚಾಲಕ, ಅಧಿಕಾರಿ ಮತ್ತು ಸಿಬ್ಬಂದಿಗೆ ಅಸುರಕ್ಷೆ ಆತಂಕ ಕಾಡುವಂತೆ ಮಾಡಿದೆ.

ಜಿಲ್ಲಾಧಿಕಾರಿ ಅಧೀನದ ಇನೋವಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಅರಣ್ಯ ಇಲಾಖೆಯ ದ್ವಿಚಕ್ರ ವಾಹನ, ಜಿಲ್ಲಾ ಆರೋಗ್ಯ ಇಲಾಖೆ ಆಂಬುಲೆನ್ಸ್, ಜಿಪಂ ಅಧೀಕ್ಷಕ ಹೆಸರಿನಲ್ಲಿರುವ ಕಾರು, ಈಶಾನ್ಯ ರಸ್ತೆ ಸಾರಿಗೆಯ ಕೆಲ ಬಸ್​ಗಳ ವಿಮೆ ಮಾಹಿತಿಯೇ ಇಲ್ಲ. ತಾಲೂಕು ಆರೋಗ್ಯ ಅಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಾರು ಗಳ ವಿಮೆ ಅವಧಿ ಮುಗಿದಿದೆ.

ಚಾಲನೆ ಪರವಾನಗಿ, ವಾಹನ ನೋಂದಣಿ, ವಿಮೆ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಜುಲ್ಮಾನೆ ಹಾಕುವ ವಿಭಾಗೀಯ ರಸ್ತೆ ಸಾರಿಗೆ ಅಧಿಕಾರಿ (ಆರ್​ಟಿಒ)ಗೆ ಸೇರಿದ ಕಾರಿನ ವಿಮೆ ಕುರಿತು ಯಾವುದೇ ಮಾಹಿತಿ ಇಲ್ಲದಿರುವುದು ಅಚ್ಚರಿ. ಕೆಲ ವಾಹನಗಳಿಗೆ ವಾಯು ಮಾಲಿನ್ಯ ಪ್ರಮಾಣಪತ್ರ ಇಲ್ಲ ಎಂಬ ಮಾಹಿತಿ ಸಿಕ್ಕಿದೆ.
ಇಂತಹ ಸರ್ಕಾರಿ ವಾಹನಗಳನ್ನು ಚಲಾಯಿಸುವ ಚಾಲಕರು, ಅದರಲ್ಲಿ ಓಡಾಡುವ ಅಧಿಕಾರಿಗಳು, ಸಿಬ್ಬಂದಿ ಜೀವಕ್ಕೆ ಅಪಾಯವಾದರೆ ಹೊಣೆ ಯಾರು? ಇನ್ನು ಈ ವಾಹನಗಳು ಯಾರದೋ ಮೇಲೆ ಹರಿದು ಜೀವ ಹಾನಿಯಾದರೆ ಯಾರು ಹೊಣೆ? ಈಶಾನ್ಯ ಸಾರಿಗೆ ಬಸ್​ಗಳು ಆಗಾಗ್ಗೆ ಅಪಘಾತಕ್ಕೀಡಾಗುತ್ತವೆ. ಆದರೆ ವಿಮೆ ಕಟ್ಟದಿದ್ದಲ್ಲಿ ಇಲಾಖೆಯೇ ಸಂತ್ರಸ್ತರಿಗೆ ಪರಿಹಾರ ನೀಡಬೇಕಾಗುತ್ತದೆ.

ರಾಜ್ಯ ಸರ್ಕಾರ ಎಲ್ಲ ಇಲಾಖೆ ವಾಹನಗಳಿಗೆ ಸಕಾಲಕ್ಕೆ ವಿಮಾ ಕಂತಿನ ಮೊತ್ತ ಬಿಡುಗಡೆ ಮಾಡುತ್ತಿದೆಯೇ ಅಥವಾ ಮಾಡಿದ್ದರೂ ಇಲಾಖೆಗಳು ನಿರ್ಲಕ್ಷ್ಯ ವಹಿಸಿವೆಯೇ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ. ಸಾರ್ವಜನಿಕರ ವಾಹನಗಳ ವಿಮೆ ಪರಿಶೀಲನೆಯಂತೆ ಸರ್ಕಾರದ ವಾಹನಗಳ ವಿಮಾ ಪರಿಶೀಲನೆ ಯಾರೂ ಮಾಡಬೇಕು?

ಸರ್ಕಾರದ ವಿವಿಧ ಇಲಾಖೆ ವಾಹನ, ಆಂಬುಲೆನ್ಸ್, ಬಸ್​ಗಳ ಬಗ್ಗೆ ಆನ್​ಲೈನ್ ಮೂಲಕ ಪಡೆದ ಮಾಹಿತಿಯಲ್ಲಿ ಅನೇಕ ವಾಹನಗಳಿಗೆ ವಿಮೆ ಹಣ ಕಟ್ಟಿಯೇ ಇಲ್ಲ, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಸರ್ಕಾರವೇ ತನ್ನ ವಾಹನಗಳಿಗೆ ವಿಮೆ ಹಣ, ಎಮಿಷನ್ ಟೆಸ್ಟ್ ಮಾಡದಿದ್ದರೆ ಗತಿ ಏನು?


| ಮಹಾಂತೇಶ ಕರದಳ್ಳಿ ಶಹಾಬಾದ್
ಮಾಹಿತಿ ಹಕ್ಕು ಕಾರ್ಯಕರ್ತ

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...