18.1 C
Bangalore
Saturday, December 7, 2019

ಲೋಪ ಆಗದಂತೆ ಕಾರ್ಯನಿರ್ವಹಣೆ

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಉಡುಪಿ: ಮತದಾರರ ಪಟ್ಟಿ ಪರಿಶೀಲನೆಯಲ್ಲಿ ಲೋಪ, ದೋಷ ಕಾಣಿಸಿಕೊಳ್ಳದಂತೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾನುವಾರ ನಗರಸಭೆ ಕಚೇರಿ ಸತ್ಯಮೂರ್ತಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2020 ಅಂಗವಾಗಿ ಸೆ.1ರಿಂದ ಅ.15ರವರೆಗೆ ನಡೆಯಲಿರುವ ಮತದಾರರ ಪಟ್ಟಿಪರಿಶೀಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಬಾರಿ ಮತಗಟ್ಟೆ ಅಧಿಕಾರಿಗಳು ಮತ್ತು ಡಾಟ ಎಂಟ್ರಿ ಸಂಬಂಧಿಸಿದವರು ತಪ್ಪು ಮಾಡಬಾರದು. ಲೋಪ, ದೋಷ ಕಡಿಮೆ ಮಾಡುವುದೇ ನಮ್ಮ ಮುಖ್ಯ ಉದ್ದೇಶ. ಬಿಎಲ್‌ಒಗಳು ಸರಿಯಾದ ಮಾಹಿತಿ ಸಂಗ್ರಹಿಸಿದ್ದು, ಡಾಟ ಎಂಟ್ರಿ ವೇಳೆ ಎಚ್ಚರವಹಿಸಬೇಕು ಎಂದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಸಭೆ ಪೌರಾಯುಕ್ತ ಆನಂದ್ ಸಿ.ಕಲ್ಲೋಳಿಕರ್ ಉಪಸ್ಥಿತರಿದ್ದರು.

ಸ್ಥಳ ಗುರುತಿಗಾಗಿ ಫೋಟೋ: ಪರಿಶೀಲನೆ ವೇಳೆ ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಅವಕಾಶವಿದೆ. ಬಿಎಲ್‌ಒಗಳು ಮನೆಗೆ ಭೇಟಿ ನೀಡಿದಾಗ 18 ವರ್ಷ ವಯಸ್ಸು ಪೂರ್ಣಗೊಂಡಿರುವ ವ್ಯಕ್ತಿಗಳ ಮಾಹಿತಿ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಪುನರಾವರ್ತನೆಯಾಗಿದ್ದರೆ, ಇತರೆ ತಪ್ಪುಗಳಿದ್ದರೆ ಮಾಹಿತಿ ನೀಡಬೇಕು. ಮೃತ ಮತದಾರರ ಹೆಸರನ್ನು ತೆಗೆಸಲು, ಶಾಶ್ವತವಾಗಿ ವಲಸೆ, ಗುಳೆ ಹೋದ ಮತದಾರರ ಬಗ್ಗೆ, ಅಂಗವಿಕಲ ಮತದಾರರ ಬಗ್ಗೆ ಮಾಹಿತಿ ನೀಡಬೇಕು. ಈ ಬಾರಿ ಮತದಾರರ ಸ್ಥಳ ಗುರುತಿಗಾಗಿ ಬಿಎಲ್‌ಒಗಳು ವಾಸಸ್ಥಳ ಅಥವಾ ಕುಟುಂಬ ಸದಸ್ಯರು, ಮನೆ, ಕಟ್ಟಡ, ಜಾಗದ ಫೋಟೋವನ್ನು ತಮ್ಮ ಮೊಬೈಲ್‌ನಿಂದ ತೆಗೆದು ಚುನಾವಣಾ ಆಪ್‌ಗೆ ಅಪ್‌ಲೋಡ್ ಮಾಡುತ್ತಾರೆ ಎಂದು ಡಿಸಿ ತಿಳಿಸಿದರು.

 ಓಟರ್ಸ್ ಹೆಲ್ಪ್‌ಲೈನ್ ಆ್ಯಪ್‌ನಲ್ಲಿ ಮತದಾರರು ಲಾಗಿನ್ ಆಗಿ ಆಧಾರ್ ಸಂಖ್ಯೆ ಮತ್ತು ಒಟಿಪಿ ಪ್ರಕ್ರಿಯೆಯಿಂದ ತಪ್ಪುಗಳಿದ್ದಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು. ಗ್ರಾಪಂ ಬಾಪೂಜಿ ಸೇವಾ ಕೇಂದ್ರ, ಅಟಲ್ ಜನ ಸ್ನೇಹಿ ಕೇಂದ್ರ, ಕರ್ನಾಟಕ ಒನ್, ಮತಗಟ್ಟೆ ಅಧಿಕಾರಿಗಳ ಬಳಿ ತೆರಳಿ ಮತದಾರರ ಪಟ್ಟಿಗೆ ಅರ್ಜಿ ಸಲ್ಲಿಸಬಹುದು, ಪರಿಶೀಲನೆ ನಡೆಸಬಹುದು.
 ಜಗದೀಶ್ ಉಡುಪಿ ಡಿಸಿ

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...