370ನೇ ವಿಧಿ ರದ್ದತಿ; ಸುಪ್ರೀಂ ಕೋರ್ಟ್​ ತೀರ್ಪಿಗೆ ಕಾನೂನು ಮಾನ್ಯತೆ ಇಲ್ಲ ಎಂದ ಪಾಕಿಸ್ತಾನ

ನವದೆಹಲಿ:  ಆರ್ಥಿಕ ಸಂಕಷ್ಟದಿಂದಾಗಿ ತೀವ್ರವಾಗಿ ಕಂಗೆಟ್ಟಿರುವ ಪಾಕಿಸ್ತಾನ ಜಾಗತಿಕ ವೇದಿಕೆಗಳಲ್ಲಿ ತೀವ್ರ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದು, ಅಲ್ಲಿನ ರಾಜಕಾರಣಿಗಳು, ಮಾಜಿ ಕ್ರಿಕೆಟಿಗರು ಹಾಗೂ ಸೇನೆಯ ಅಧಿಕಾರಿಗಳು ಆಗಿಂದಾಗೆ ಕಾಶ್ಮೀರದ ಬಗ್ಗೆ ಹೇಳಿಕೆ ಕೊಟ್ಟು ತೀವ್ರ ಟೀಕೆಗೆ ಗುರಿಯಾಗುತ್ತಿರುತ್ತಾರೆ. ಇದೀಗ ಪಾಕಿಸ್ತಾನ ಸರ್ಕಾರ ಇದೇ ವಿಚಾರವಾಗಿ ಮತ್ತೊಮ್ಮೆ ಹೇಳಿಕೆ ನೀಡಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್​ ಎತ್ತಿ ಹಿಡಿದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ಪ್ರತಿಕ್ರಿಯಿಸಿದ್ದು, … Continue reading 370ನೇ ವಿಧಿ ರದ್ದತಿ; ಸುಪ್ರೀಂ ಕೋರ್ಟ್​ ತೀರ್ಪಿಗೆ ಕಾನೂನು ಮಾನ್ಯತೆ ಇಲ್ಲ ಎಂದ ಪಾಕಿಸ್ತಾನ