More

    ಲಾಕ್​ಡೌನ್​ನಿಂದ ಕೈಗಾರಿಕೆಗಳಿಗೆ ವಿನಾಯ್ತಿ ನೀಡಿ; ಇಲ್ಲದಿದ್ದರೆ ಮತ್ತೆ ಸಂಕಷ್ಟ; ಸಿಎಂಗೆ ಮನವಿ

    ಬೆಂಗಳೂರು: ಮಂಗಳವಾರದಿಂದ ಒಂದು ವಾರ ವಿಧಿಸಲಾಗುತ್ತಿರುವ ಲಾಕ್​ಡೌನ್​ನಿಂದ ಕೈಗಾರಿಕೆಗಳಿಗೆ ವಿನಾಯ್ತಿ ನೀಡಬೇಕೆಂದು ಒತ್ತಾಯಿಸಲಾಗಿದೆ.

    ಜುಲೈ 14ರಿಂದ 22ರವರೆಗೆ ಲಾಕ್​​ಡೌನ್​ ಜಾರಿಯಲ್ಲಿರಲಿದೆ. ಇದರಿಂದ ಕೈಗಾರಿಕೆಗಳಿಗೆ ಮತ್ತೆ ಸಂಕಷ್ಟ ಎದುರಾಗಲಿದೆ. ಇದೀಗ ತಾನೇ ಹಿಂದೆ ಹೇರಿದ್ದ ಲಾಕ್​ಡೌನ್​ನಿಂದ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಕೈಗಾರಿಕೆಗಳನ್ನು ಸ್ಥಗಿತಗೊಳಿಸುತ್ತಿರುವುದನ್ನು ವಿರೋಧಿಸುವುದಾಗಿ ಕೈಗಾರಿಕೆ ಹಾಗೂ ವಾಣಿಜ್ಯ ಮಹಾಸಂಸ್ಥೆ (ಎಫ್​ಕೆಸಿಸಿಐ) ಹಾಗೂ ವಿವಿಧ ಕೈಗಾರಿಕಾ ಸಂಘಗಳು ಹೇಳಿವೆ.

    ಇದನ್ನೂ ಓದಿ; ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಎಸ್ಎಸ್ಎಲ್​ಸಿ ಮೌಲ್ಯಮಾಪನ ಮುಂದೂಡಿಕೆ

    ಕೋವಿಡ್ ಪ್ರಮಾಣ ಹೆಚ್ಚಾಗಿರುವುದಕ್ಕೆ ಕೈಗಾರಿಕೆಗಳು ಕಾರಣವಲ್ಲ. ಒಂದೆರಡು ಕೈಗಾರಿಕೆಗಳಲ್ಲಿ ಪಾಸಿಟಿವ್ ಪ್ರಕರಣಗಳು ಬಂದಿವೆ. ಇದಕ್ಕಾಗಿ ಕೈಗಾರಿಕೆಗಳನ್ನು ಮುಚ್ಚುವುದು ರಾಜ್ಯ, ಕೇಂದ್ರ ಸರ್ಕಾರಗಳ ಆರ್ಥಿಕ ದುಸ್ಥಿತಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಎಫ್​ಕೆಸಿಸಿಐ ಅಧ್ಯಕ್ಷ ಸಿ.ಆರ್. ಜನಾರ್ಧನ ಹೇಳಿದ್ದಾರೆ.

    ಕೇಂದ್ರ ಸರ್ಕಾರ ಘೋಷಿಸಿದ ಆತ್ಮ ನಿರ್ಭರ್ ಪ್ಯಾಕೇಜ್ ಕಾರ್ಯಗತ ವಾಗುತ್ತಿರುವ ಸಂದರ್ಭದಲ್ಲಿ ಲಾಕ್ಡೌನ್ ಮಾಡಿದಲ್ಲಿ ಮಂಜೂರು ಮಾಡಿದ ಹಣ ಮತ್ತೆ ನೀರಿನಲ್ಲಿ ತರ್ಪಣ ಬಿಟ್ಟಂತೆ ಆಗುತ್ತದೆ. ಕೈಗಾರಿಕೆಗಳು ಕೋವಿಡ್ ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು ಇವುಗಳನ್ನು ಲಾಕ್​ಡೌನ್​ನಿಂದ ಹೊರಗಿಡಲು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

    ಆಕ್ಸ್​ಫರ್ಡ್​ ವಿವಿ ತಜ್ಞರ ಕರೊನಾ ಲಸಿಕೆ ಅಭಿವೃದ್ಧಿಗೆ ಜೀವವನ್ನೇ ಪಣಕ್ಕಿಟ್ಟ ಭಾರತೀಯ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts