ಪಾಲಿಕೆ ಶಾಲೆಗಳಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ದುಡ್ಡಿಲ್ಲ

ಬೆಂಗಳೂರು: ಬಿಬಿಎಂಪಿ ಬಜೆಟ್​ಗೆ ರಾಜ್ಯ ಸರ್ಕಾರ ತಡೆ ನೀಡಿದ ಹಿನ್ನೆಲೆ ಯಲ್ಲಿ ಪಾಲಿಕೆ ಶಾಲೆ ಮತ್ತು ಕಾಲೇಜುಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಗಾಗಿ ಹಣವಿಲ್ಲದಂತಾಗಿದೆ. ಈ ಕುರಿತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರೇ ಹೇಳಿಕೆ ನೀಡಿದ್ದು, ಬಜೆಟ್ ತಡೆಯಿಂದ ಸಮಸ್ಯೆಯುಂಟಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿವರ್ಷ ಬಿಬಿಎಂಪಿ ಶಾಲೆ- ಕಾಲೇಜುಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಶಿಕ್ಷಣ ವಿಭಾಗದಿಂದ ಅನುದಾನ ನೀಡಲಾಗುತ್ತಿತ್ತು. ಆದರೆ, ಈ ಬಾರಿಯ ಬಜೆಟ್​ಗೆ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿಲ್ಲ ಎಂಬ ಕಾರಣ ನೀಡಿ ಸ್ವಾತಂತ್ರೊ್ಯೕತ್ಸವ ಕ್ಕಾಗಿ ಅನುದಾನ ನೀಡಿಲ್ಲ. ಹೀಗಾಗಿ ಶಾಲಾ- ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರು ತಮ್ಮ ಹಣ ಖರ್ಚು ಮಾಡಿ ಸ್ವಾತಂತ್ರೊ್ಯೕತ್ಸವ ಆಚರಿಸುವಂತೆ ಶಿಕ್ಷಣ ಸ್ಥಾಯಿ ಸಮಿತಿ ಸೂಚನೆ ನೀಡಿದೆ.

ಸಿಎಂಗೆ ಪತ್ರ: ಬಿಬಿಎಂಪಿ ಶಿಕ್ಷಣ ಯೋಜನೆಗಳಿಗೆ ಆರ್ಥಿಕ ಮುಗ್ಗಟ್ಟು ಉಂಟಾಗಿರುವ ಕುರಿತಂತೆ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಇಮ್ರಾನ್ ಪಾಷಾ ಮೇಯರ್ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಬಿಬಿಎಂಪಿಯ ನರ್ಸರಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಲ್ಲಿ 17,570 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆಲ್ಲ ಪುಸ್ತಕ, ಬ್ಯಾಗ್, ಸಾಕ್ಸ್ ಇತ್ಯಾದಿ ಒದಗಿಸಬೇಕು. ಜತೆಗೆ ಶಾಲೆ- ಕಾಲೇಜುಗಳಲ್ಲಿ ಕುಡಿಯುವ ನೀರಿನ ಘಟಕ, ಶೌಚಗೃಹ ನಿರ್ಮಾಣ ಮಾಡಬೇಕಿದೆ. ಬಜೆಟ್​ಗೆ ತಡೆ ನೀಡಿದ್ದರಿಂದ ಮೂಲಸೌಕರ್ಯ ಕಲ್ಪಿಸಲು ಅನುದಾನವಿಲ್ಲದಂತಾಗಿದೆ. ಆದ್ದರಿಂದ ಕೂಡಲೇ ಬಜೆಟ್​ಗೆ ಅನುಮೋದನೆ ನೀಡುವಂತೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *