Monday, 17th December 2018  

Vijayavani

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ-ಆರೋಗ್ಯ ಸಚಿವರ ಉಡಾಫೆ ಹೇಳಿಕೆ ಪ್ರಸ್ತಾಪ-ಪರಿಷತ್​ನಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ        ಶುರುವಾಯ್ತು ಪೆಥಾಯ್ ಪ್ರತಾಪ-ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ಅಲೆಗಳ ಅಬ್ಬರ-ಚೆನ್ನೈ ಸೇರಿ ಹಲವೆಡೆ ಭಾರಿ ಮಳೆ ಸಾಧ್ಯತೆ        ಒಂದೇ ರಸ್ತೆ, ಎರಡು ಇಲಾಖೆ ಬಿಲ್-ಭೂಸೇನೆ, ಪಿಡಬ್ಲ್ಯೂಡಿ ಇಲಾಖೆ ಬಿಲ್​​ಗಾಗಿ ಪೈಪೋಟಿ-ಮುಗಿದ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದ ಕೈ ಶಾಸಕ        ಇನ್ನೂ ನಿಂತಿಲ್ಲ ‘ವಿಷ’ಪ್ರಸಾದದ ಎಫೆಕ್ಟ್-ಚಿಕಿತ್ಸೆ ಪಡೀತಿರೋ 30 ಜನ್ರ ಸ್ಥಿತಿ ಗಂಭೀರ-ಆರೋಪಿತರ ಪರ ವಕಾಲತ್ತು ವಹಿಸದಿರಲು ವಕೀಲರ ನಿರ್ಧಾರ        ಇಂದು 3 ರಾಜ್ಯ ಸಿಎಂಗಳ ಪದಗ್ರಹಣ-ರಾಜ್ಯದಿಂದ ಸಿಎಂ ಎಚ್​ಡಿಕೆ, ಸಿದ್ದುಗೆ ವಿಶೇಷ ಆಹ್ವಾನ-ಕೈ ಸಮಾರಂಭದಲ್ಲಿ ತೃತೀಯ ಶಕ್ತಿ ಪ್ರದರ್ಶನ        37ನೇ ವಸಂತಕ್ಕೆ ‘ಉಗ್ರಂ’ ಸ್ಟಾರ್ ಮುರಳಿ-37ನೇ ಬರ್ತಡೇ.. 37 ಕೆಜಿ ಕೇಕ್ ಕಟ್-ಫ್ಯಾನ್ಸ್​​ಗೆ ಭರಾಟೆ ಟೀಸರ್, ಮದಗಜ ಫಸ್ಟ್ ಪೋಸ್ಟರ್ ಗಿಫ್ಟ್       
Breaking News

ಶಾಮನೂರು ಶಿವಶಂಕರಪ್ಪ ತಮ್ಮ ಬರ್ತ್​ ಸರ್ಟಿಫಿಕೇಟ್​ ಬಹಿರಂಗ ಪಡಿಸಲಿ: ಎಂ.ಬಿ ಪಾಟೀಲ್​

Monday, 08.01.2018, 1:30 PM       No Comments

ವಿಜಯಪುರ: ಶಾಮನೂರು ಶಿವಶಂಕ್ರಪ್ಪ, ಈಶ್ವರ ಖಂಡ್ರೆ ಮತ್ತು ತಿಪ್ಪಣ್ಣ ಮೊದಲು ತಮ್ಮ ಬರ್ತ್ ಸರ್ಟಿಫಿಕೇಟ್ ಬಹಿರಂಗ ಪಡಿಸಲಿ. ಅದರಲ್ಲಿ ವೀರಶೈವ ಎಂದಿದ್ದರೆ ನಾನು ತಲೆ ಬಾಗುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್​ ತಿಳಿಸಿದ್ದಾರೆ.

ಭಾನುವಾರ ನಗರದಲ್ಲಿ ನಡೆದ ವೀರಶೈವ ಮಹಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ಶಾಮನೂರು ಶಿವಶಂಕ್ರಪ್ಪ, ಈಶ್ವರ ಖಂಡ್ರೆ ಮತ್ತು ತಿಪ್ಪಣ್ಣ ಮೊದಲು ತಮ್ಮ ಬರ್ತ್ ಸರ್ಟಿಫಿಕೇಟ್ ಬಹಿರಂಗ ಪಡಿಸಲಿ. ಜೊತೆಗೆ ಅವರ ತಂದೆ, ತಾಯಿಗಳದ್ದೂ ಬರ್ತ್ ಸರ್ಟಿಫಿಕೇಟ್ ಬಹಿರಂಗ ಪಡಿಸಲಿ ಅದರಲ್ಲಿ ಲಿಂಗಾಯತ ಎಂದು ಇದೆ. ಒಂದು ವೇಳೆ ವೀರಶೈವ ಎಂದು ಇದ್ದರೆ ಹೇಳಿದ ಹಾಗೇ ಕೇಳುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ.

ಯಾರೇ ಬಂದು ತಲೆಕೆಳಗೆ ಕಾಲು ಮೇಲೆ ಮಾಡಿದರೂ ನನ್ನ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಸಾಧ್ಯವಿಲ್ಲ. ಬೇಕಾದರೆ ಶಾಮನೂರ ಶಿವಶಂಕರಪ್ಪ ಬಂದು ತಮ್ಮ ಶಕ್ತಿ ಪ್ರದರ್ಶಿಸಲಿ ಎಂದು ಸವಾಲು ಹಾಕಿದ್ದಾರೆ.

ಬಸವಣ್ಣ ಮತ್ತು ಮತಕ್ಷೇತ್ರದ ಜನರ ಆಶೀರ್ವಾದ ಇದ್ದಾಗ ನನ್ನನ್ನ ಸೋಲಿಸಲು ಯಾರಿಂದಲು ಸಾಧ್ಯವಿಲ್ಲ. 50 ಸಾವಿರ ಮತಗಳ ಅಂತರದಲ್ಲಿ ನಾನು ಗೆಲ್ಲೋದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

Back To Top