ಈ ದಿನಾಂಕದಂದು ಜನಿಸಿದವರ ಬೆಳವಣಿಗೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲವಂತೆ! Numerology

Numerology
Published on

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಸಂಖ್ಯೆಗಳು ನಮ್ಮ ಜೀವನದ ಎಲ್ಲ ವಿಷಯಗಳೊಂದಿಗೆ ಆಳವಾದ ಸಂಬಂಧವನ್ನು ಹೊಂದಿವೆ. ಅಲ್ಲದೆ, ಈ ಸಂಖ್ಯೆಗಳು ನೈಸರ್ಗಿಕವಾಗಿ ವಿಶ್ವದಲ್ಲಿ ವಿಶಿಷ್ಟ ಶಕ್ತಿಯನ್ನು ಹೊಂದಿದ್ದು, ಯಾರನ್ನಾದರೂ ಮೇಲಕ್ಕೇರಿಸಬಹುದು ಮತ್ತು ಕೆಳಗಿಳಿಸಬಹುದು.

ಅಂದಹಾಗೆ ಸಂಖ್ಯಾಶಾಸ್ತ್ರವು ವ್ಯಕ್ತಿಯ ಹೆಸರು, ಆತನ ಹುಟ್ಟಿದ ದಿನಾಂಕ, ತಿಂಗಳು, ವರ್ಷದ ಆಧಾರದ ಮೇಲೆ ಅವರ ಭವಿಷ್ಯದ ಜೀವನ ಹೇಗಿರುತ್ತದೆ ಎಂದು ಊಹಿಸುವ ವಿಜ್ಞಾನವಾಗಿದೆ. ಈ ಸಂಖ್ಯಾಶಾಸ್ತ್ರವನ್ನು ರಾಡಿಕ್ಸ್ ಸಂಖ್ಯೆಗಳ ಆಧಾರದ ಮೇಲೆ ಹೇಳಲಾಗುತ್ತದೆ. ಒಬ್ಬ ವ್ಯಕ್ತಿಯ ಜನ್ಮ ದಿನಾಂಕದ ಮೊತ್ತವನ್ನು ರಾಡಿಕ್ಸ್ ಸಂಖ್ಯೆ ಅಥವಾ ಮೂಲಾಂಕ ಎಂದು ಕರೆಯಲಾಗುತ್ತದೆ. ಉದಾಹರಣೆಗೆ ಒಬ್ಬ 24ನೇ ತಾರೀಖಿನಂದು ಜನಿಸಿದರೆ ಆತನ ರಾಡಿಕ್ಸ್​ ಸಂಖ್ಯೆ 2+4= 6 ಆಗಿರುತ್ತದೆ.

ರಾಶಿಗಳಂತೆ ರಾಡಿಕ್ಸ್​ ಸಂಖ್ಯೆಗಳು ಕೂಡ ಗ್ರಹಗಳೊಂದಿಗೆ ಸಂಬಂಧ ಹೊಂದಿವೆ. ಸಂಖ್ಯಾಶಾಸ್ತ್ರದಲ್ಲಿ 01 ರಿಂದ 09ರವರೆಗಿನ ಸಂಖ್ಯೆಗಳನ್ನು ರಾಡಿಕ್ಸ್ ಸಂಖ್ಯೆಗಳು ಎಂದು ಹೇಳಲಾಗುತ್ತದೆ. ಈ ಒಂಬತ್ತು ರಾಡಿಕ್ಸ್ ಸಂಖ್ಯೆಗಳು ಕೂಡ ನವಗ್ರಹಗಳಲ್ಲಿ ಒಂದೊಂದು ಗ್ರಹಗಳಿಗೆ ಸೀಮಿತವಾಗಿವೆ.

ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ದಿನಾಂಕಗಳಲ್ಲಿ ಜನಿಸಿದ ಜನರು ಒಂದು ನಿರ್ದಿಷ್ಟ ಹಂತದ ನಂತರ ಬೆಳೆಯಲು ಪ್ರಾರಂಭಿಸುತ್ತಾರೆ. ಅವರಿಗೆ ಯಾವುದೇ ಸವಾಲು ಎದುರಾಗಬಹುದು. ಆದರೆ, ಅದನ್ನು ಎದುರಿಸುವ ಧೈರ್ಯ ಅವರಲ್ಲಿರುತ್ತದೆ. ಅಂತಹ ಜನರ ಜನ್ಮ ದಿನಾಂಕಗಳು ಯಾವುವು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.

ದಿನಾಂಕ 3

ಸಂಖ್ಯಾಶಾಸ್ತ್ರದ ಪ್ರಕಾರ, ಯಾವುದೇ ತಿಂಗಳು 3ನೇ ತಾರೀಖಿನಂದು ಜನಿಸಿದ ಜನರು ಜೀವನದಲ್ಲಿ ಯಶಸ್ವಿಯಾಗುತ್ತಾರೆ. ಅವರು ಮಾತನಾಡುವುದರಲ್ಲಿ ತುಂಬಾ ನಿಪುಣರು ಮತ್ತು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ಅವರು ಅಪರಿಚಿತರೊಂದಿಗೆ ಯಾವುದೇ ಹಿಂಜರಿಕೆ ಅಥವಾ ಭಯವಿಲ್ಲದೆ ಮಾತನಾಡುತ್ತಾರೆ. ಅವರು ಕಠಿಣ ಪರಿಶ್ರಮಿಗಳು ಮತ್ತು ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತವೆ. ಯಾರಾದರೂ ಅವರಿಗೆ ಯಾವುದೋ ರೀತಿಯಲ್ಲಿ ಸಹಾಯ ಮಾಡುತ್ತಾರೆ. ಅವರ ಮಾತನಾಡುವ ರೀತಿ ಇತರರನ್ನು ಆಕರ್ಷಿಸುತ್ತದೆ.

ದಿನಾಂಕ 6

ಸಂಖ್ಯಾಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 6ನೇ ತಾರೀಖಿನಂದು ಜನಿಸಿದ ಜನರು ಉದಾರ ಸ್ವಭಾವದವರು. ಅವರು ಪ್ರಾಮಾಣಿಕರು ಮತ್ತು ಇತರರೊಂದಿಗೆ ಜಗಳವಾಡುವುದಿಲ್ಲ. ಈ ಗುಣವು ಅವರಿಗೆ ಯಶಸ್ಸನ್ನು ತರುತ್ತದೆ. ಅವರು ಇತರರೊಂದಿಗೆ ಬಹಳ ಸುಲಭವಾಗಿ ಹೊಂದಿಕೊಳ್ಳುತ್ತಾರೆ. ಆದ್ದರಿಂದ, ಹೊಸ ಅವಕಾಶಗಳ ಸಾಧ್ಯತೆಗಳಿವೆ.

ದಿನಾಂಕ 11

ಸಂಖ್ಯಾಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 11ನೇ ತಾರೀಖಿನಂದು ಜನಿಸಿದ ಜನರು ಅದೃಷ್ಟವಂತರು. ಜೀವನದಲ್ಲಿ ಯಶಸ್ವಿಯಾಗಲು ಬಯಸುವವರು ಅವರಿಂದ ಸುಲಭವಾಗಿ ಜ್ಞಾನವನ್ನು ಬೆಳೆಸಿಕೊಳ್ಳಬಹುದು. ಅವರು ತಮಗೆ ಬರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವರು.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್​ಸೈಟ್​ ಜವಾಬ್ದಾರರಾಗಿರುವುದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net