More

    ಯಾವುದೇ ಸ್ವಾಮೀಜಿ ವಿರುದ್ಧ ಹಗುರವಾದ ಮಾತು ಬೇಡ: ಯತ್ನಾಳ್ ಟೀಕೆಗೆ ಸಚಿವ ನಿರಾಣಿ ವಾಗ್ದಾಳಿ

    ಬೆಳಗಾವಿ: ಸಮಾಜ ಸುಧಾರಣೆಗಾಗಿ ಶ್ರಮಿಸುತ್ತಿರುವ ಯಾವುದೇ ಸ್ವಾಮೀಜಿ ಅಥವಾ ಯಾವುದೇ ಧರ್ಮದ ಮುಖಂಡರ ಬಗ್ಗೆಯೂ ಯಾರೂ ಹಗುರವಾಗಿ ಮಾತನಾಡಬಾರದು ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯ ಪಟ್ಟಿದ್ದಾರೆ. ಮಾತ್ರವಲ್ಲ, ಅವರು ಈ ಮೂಲಕ ಯತ್ನಾಳ್ ಅವರ ಟೀಕೆಗೂ ಟಾಂಗ್ ನೀಡಿದ್ದಾರೆ.

    ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯೊಂದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು ಈ ವಿಷಯ ತಿಳಿಸಿದ್ದಾರೆ. ವಚನಾನಂದ ಶ್ರೀಗಳಂತಲ್ಲ, ಸಮಾಜ ಸುಧಾರಣೆಗಾಗಿ ಶ್ರಮಿಸುವ ಯಾವುದೇ ಧಾರ್ಮಿಕ ಮುಖಂಡರ ಬಗ್ಗೆಯೂ ಯಾರು ಕೂಡ ಹಗುರವಾಗಿ ಮಾತನಾಡಬಾರದು. ಹಾಗೆ ಮಾತನಾಡಿದರೆ ಅದು ಅಂಥವರ ವ್ಯಕ್ತಿತ್ವವನ್ನು ತೋರುತ್ತದೆ ಎಂದು ನಿರಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನಾವು ಯಾರ ಬಗ್ಗೆಯಾದರೂ ಮಾತನಾಡಿದರೆ ಅದಕ್ಕೊಂದು ತೂಕವಿರಬೇಕು. ನಾಲಿಗೆ ಇದೆ ಎಂದು ಬಾಯಿಗೆ ಬಂದಂತೆ ಮಾತನಾಡಿದರೆ ಅದು ನಮ್ಮ ಕೀಳು ಅಭಿರುಚಿಯನ್ನು ತೋರಿಸುತ್ತದೆ ಎಂದು ಪರೋಕ್ಷವಾಗಿ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ್ ಬಹಳ ದೊಡ್ಡ ನಾಯಕರು, ನಾನು ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿಯಲ್ಲ ಎಂದರು.

    ಯತ್ನಾಳ್ ದೊಡ್ಡವರ ಬಗ್ಗೆ ಮಾತನಾಡಿದರೆ ನಾನು ದೊಡ್ಡ ವ್ಯಕ್ತಿಯಾಗುತ್ತೇನೆ ಎಂದು ಭಾವಿಸಿದ್ದಾರೆ. ಶ್ರೀಗಳು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಎಲ್ಲರ ಬಗ್ಗೆಯೂ ಅವರು ಮಾತನಾಡುತ್ತಿದ್ದಾರೆ. ಅವರ ಮಾತಿಗೆ ಹೆಚ್ಚಿನ ಮಹತ್ವ ಕೊಡಬಾರದು. ಯಾವುದೇ ಸ್ವಾಮೀಜಿ ಬಗ್ಗೆ ಯಾರೂ ಹಗುರವಾಗಿ ಮಾತನಾಡಬಾರದು. ಹಿಂದೂ ಸಮಾಜದಲ್ಲಿ ಕಾವಿ ಧರಿಸಿದವರಿಗೆ ಸಾಕಷ್ಟು ಗೌರವ ಕೊಡುತ್ತಾರೆ. ಪಂಚಮಸಾಲಿ ಸೇರಿದಂತೆ ಮತ್ತೊಂದು ಸಮಾಜದ ಧಾರ್ಮಿಕ ಮುಖಂಡರ ಬಗ್ಗೆ ಗೌರವ ಇಟ್ಟುಕೊಳ್ಳಬೇಕು ಎಂದು ನಿರಾಣಿ ಹೇಳಿದರು.

    ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಿ ಅಧಿಕಾರಕ್ಕೆ ತರುವಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಪಾತ್ರ ದೊಡ್ಡದಿದೆ. ಆದರೆ ಯತ್ನಾಳ್ ತಾನು ಯಾರ ಬಗ್ಗೆ ಕೂಡ ಮಾತನಾಡಿ ದಕ್ಕಿಸಿಕೊಳ್ಳಬಲ್ಲೆ ಎಂದುಕೊಂಡಿದ್ದಾರೆ. ಅವರ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ನಿರಾಣಿ ಹೇಳಿದರು.

    ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಲು ಬಿಎಸ್​​ವೈ ಎಂದೂ ವಿರೋಧಿಸಿಲ್ಲ. ಕೆಲವರು ತಮ್ಮ ಸ್ವಾರ್ಥಕ್ಕಾಗಿ ಈ ರೀತಿ ಮಾತನಾಡುತ್ತಾರೆ. ಅದನ್ನು ಯಾರೂ ಕೂಡ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಅಷ್ಟಕ್ಕೂ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 3ಬಿಗೆ ಸೇರಿಸಲು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೇ ಬಿಎಸ್​ವೈ. ಅವರು ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸಂಪುಟ ಉಪಸಮಿತಿ ರಚಿಸಿದ್ದು, ಸಮುದಾಯಕ್ಕೆ ಅವರ ಕೊಡುಗೆ ಸಾಕಷ್ಟಿದೆ ಎಂದು ನಿರಾಣಿ ಸ್ಮರಿಸಿಕೊಂಡರು.

    ನಮ್ಮ ಸಮುದಾಯಕ್ಕೆ ಮೀಸಲಾತಿ ನೀಡುವ ವಿಷಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿವರು ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದೊಂದು ಕಾನೂನಾತ್ಮಕ ವಿಷಯ. ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಶಿಫಾರಸ್ಸು ಮಾಡುವವರೆಗೂ ಯಾವುದೇ ಕ್ರಮಕೈಗೊಳ್ಳುವುದು ಅಸಾಧ್ಯ. ಆತುರದಲ್ಲಿ ನಿರ್ಧರಿಸಿದರೆ ನ್ಯಾಯಾಲಯದಲ್ಲಿ ಪ್ರಶ್ನಿಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಸರ್ಕಾರ ಜಾಣ್ಮೆಯ ನಿಲುವು ತಳೆಯಬೇಕಾಗುತ್ತದೆ ಎಂದು ನಿರಾಣಿ ಅಭಿಪ್ರಾಯಪಟ್ಟರು.

    400 ರೂ. ದುಡಿಯುವ ದಿನಗೂಲಿಯ ಮನೆಗೆ ಐಟಿ ನೋಟಿಸ್; 14 ಕೋಟಿ ರೂ. ಬಾಕಿ ಇದೆ ಎಂದ ಆದಾಯ ತೆರಿಗೆ ಅಧಿಕಾರಿಗಳು!

    ಗುಟ್ಟಾಗಿ ಸೊಸೆಯ ಬೆಡ್​ರೂಮ್​ಗೆ ಹೋಗುತ್ತಿದ್ದ ಅತ್ತೆ; ಪ್ರೆಗ್ನೆನ್ಸಿ ಟೆಸ್ಟ್​ ಪಾಸಿಟಿವ್ ಪತ್ತೆ!; ನಿಜಕ್ಕೂ ಆಗಿದ್ದೇನು?

    15 ವರ್ಷ ತಲೆಮರೆಸಿಕೊಂಡಿದ್ದವ ಜಿಎಸ್​ಟಿ ನಂಬರ್​​ನಿಂದಾಗಿ ಸಿಕ್ಕಿಬಿದ್ದ; ಹೆಸರು ಬದಲಿಸಿಕೊಂಡು ಮದ್ವೆ ಆಗಿದ್ದ ದರೋಡೆಕೋರ!

    ಬಾಲಕನ ಕಣ್ಮುಂದೆಯೇ ತಾಯಿ-ಸಹೋದರಿ ಸಾವು; ಮಗಳನ್ನು ರಕ್ಷಿಸಲು ಅಮ್ಮ ಧಾವಿಸಿದ್ದಾಗ ನಡೆದ ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts