More

    ಆಟೋಗಳಿಗೆ ಪಾರ್ಕಿಂಗ್ ಶುಲ್ಕ ಬೇಡ

    ಚಿಕ್ಕಮಗಳೂರು: ಆಟೋ ಚಾಲಕರಿಗೆ ಎಂಜಿ ರಸ್ತೆಯಲ್ಲಿ ನಿಲುಗಡೆ ಶುಲ್ಕ ವಿಧಿಸದಂತೆ ಒತ್ತಾಯಿಸಿ ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಬುಧವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

    ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ನಾಗರತ್ನಾ ಅವರಿಗೆ ಮನವಿ ಸಲ್ಲಿಸಿದ ಪದಾಧಿಕಾರಿಗಳು, ಪ್ರತಿ ಬಾಡಿಗೆಗೆ ಕನಿಷ್ಠ 40 ರೂ. ನಿಗದಿಪಡಿಸಲಾಗಿದೆ. ಈ ಹಣದಲ್ಲಿ ನಿಲುಗಡೆ 10 ರೂ. ವ್ಯಯಿಸಿದರೆ ಆಟೋ ಚಾಲಕರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಅಳಲು ತೋಡಿಕೊಂಡರು.
    ಸಂಘದ ಕಾರ್ಯದರ್ಶಿ ಜಗದೀಶ್ ಕೋಟೆ ಮಾತನಾಡಿ, ಎಂಜಿ ರಸ್ತೆಯ ಪಾರ್ಕಿಂಗ್ ಶುಲ್ಕ ಸಂಬಂಧ ಸಾರ್ವಜನಿಕವಾಗಿ ಯಾವುದೇ ಅಭಿಪ್ರಾಯ ಸಂಗ್ರಹಿಸದೆ ಬಹಿರಂಗ ಹರಾಜು ಟೆಂಡರ್ ಕರೆದು ನಾಲ್ಕು ಚಕ್ರದ ವಾಹನಗಳಿಗೆ ಪ್ರತಿ ಗಂಟೆಗೆ 10 ರೂ. ನಿಗದಿಪಡಿಸಿರುವುದು ಕಾರ್ಯರೂಪಕ್ಕೆ ಬಂದಲ್ಲಿ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಹೇಳಿದರು.
    ಎಂಜಿ ರಸ್ತೆಯಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸಬೇಕು ಎಂಬುದಾದರೆ ನಗರದಲ್ಲಿರುವ ಆಟೋ ಚಾಲಕರಿಗೆ ಯಾವುದೇ ಶುಲ್ಕ ವಿಧಿಸದೆ ಸಂಪೂರ್ಣ ಉಚಿತವಾಗಿ ಅವಕಾಶ ಕಲ್ಪಿಸಿಕೊಡಬೇಕು. ಜತೆಗೆ ನಗರಸಭೆಯಲ್ಲಿ ಸಾರ್ವಜನಿಕವಾಗಿ ಸಲಹೆ ಸಹಕಾರ ಕೋರಿ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
    ಸಂಘದ ಜಿಲ್ಲಾಧ್ಯಕ್ಷ ಉದಯ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಎಚ್.ಸಿ.ರಾಘವೇಂದ್ರ, ಸಹ ಕಾರ್ಯದರ್ಶಿ ಯಶ್ವಂತ್, ಚಾಲಕ ಜಯರಾಮ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts