ಹೆಚ್ಚುತ್ತಿರುವ ಕರೊನಾ: ಪಶ್ಚಿಮ ಬಂಗಾಳ ಚುನಾವಣೆ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ಚುನಾವಣಾ ಆಯೋಗ

election
Published on

ಕಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಈಗಾಗಲೇ 4 ಹಂತದ ಮತದಾನ ಪೂರ್ಣಗೊಂಡಿದೆ. ಇನ್ನೂ 4 ಹಂತ ಬಾಕಿ ಇವೆ. ಇದೇ ವೇಳೆ ಕರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಳಿದ 4 ಹಂತದ ಮತದಾನವನ್ನು ಒಂದೇ ಸಾರಿ ಮುಗಿಸಲಾಗುತ್ತದೆ ಎಂಬ ಊಹಾಪೋಹಗಳು ಕಳೆದ ಎರಡು ದಿನಗಳಿಂದ ಚಾಲ್ತಿಯಲ್ಲಿದ್ದವು.

ಆದರೆ, ಈ ಊಹಾಪೋಹಗಳಿಗೆ ಕೇಂದ್ರ ಚುನಾವಣಾ ಆಯೋಗ ಇಂದು ತೆರೆ ಎಳೆದಿದೆ. ಉಳಿದ 4 ಹಂತದ ಮತದಾನಗಳು ನಿಗದಿಯಂತೆ ನಡೆಯಲಿವೆ ಯಾವುದೇ ಬದಲಾವಣೆ ಇಲ್ಲ ಎಂದಿದೆ.

ಅಲ್ಲದೇ ಕರೊನಾ ಸೋಂಕು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯುಕ್ತರು ಶುಕ್ರವಾರ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಎಲ್ಲರೂ ಕರೊನಾ ತಡೆಗಟ್ಟಲು ಆಯೋಗ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ಇನ್ನು ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ 8 ಹಂತದ ಮತದಾನ ಇಟ್ಟಿರುವುದನ್ನು ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಅವರು ತೀವ್ರವಾಗಿ ಖಂಡಿಸಿದ್ದಾರೆ. ಕರೊನಾ ಅಲೆ ಇರುವುದು ಗೊತ್ತಿದ್ದರೂ ಪಶ್ಚಿಮ ಬಂಗಾಳದಲ್ಲಿ 8 ಹಂತದ ಮತದಾನ ಇಟ್ಟಿರುವುದು ಅಪರಾಧವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net