ಯಾವ ಪವರ್ ಇಲ್ಲ, ಶೇರು ಇಲ್ಲ; ಐದು ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತದೆ: DCM ಡಿ.ಕೆ. ಶಿವಕುಮಾರ್

blank

ಬೆಂಗಳೂರು: ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಡಿಸಿಎಂ DK ಶಿವಕುಮಾರ್ ತಿಳಿಸಿದರು.

blank

ತಮ್ಮ ಸರ್ಕಾರಿ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬಳಿಕ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿರುವಾಗ ಈ ಹೇಳಿಕೆ ಬಂದಿದೆ ಎಂದು ಕೇಳಿದಾಗ, “ಯಾವ ಪವರ್ ಇಲ್ಲ, ಶೇರು ಇಲ್ಲ. ಐದು ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತದೆ” ಎಂದರು.

ಸಂಪುಟ ಸಭೆಯಲ್ಲಿ ಜಾತಿ ಗಣತಿ ಚರ್ಚೆ

ಜಾತಿ ಗಣತಿ ವಿರೋಧಿಸಿ ಒಕ್ಕಲಿಗ ಹಾಗೂ ಲಿಂಗಾಯತ ನಾಯಕರ ಸಭೆ ನಡೆಯುವುದೇ ಎಂದು ಕೇಳಿದಾಗ, “ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಈ ಬಗ್ಗೆ ಯಾವುದೇ ಸಭೆ ಇಲ್ಲ. ಅದರ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದು, ಅಲ್ಲಿ ನಾವು ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

ನಾನು, ಸಿಎಂ ಚರ್ಚಿಸಿ ಸಿಎಲ್ ಪಿ ಸಭೆ

13ರಂದು ಕರೆಯಲಾಗುವ ಸಿಎಲ್ ಪಿ ಸಭೆ ಬಗ್ಗೆ ಕೇಳಿದಾಗ, ನಾನು ಹಾಗೂ ಸಿಎಂ ಚರ್ಚೆ ಮಾಡಿಯೇ ಕರೆದಿದ್ದೇವೆ. ಅಂದು ಇಡೀ ದಿನ ಪಕ್ಷಕ್ಕೆ ಮುಡಿಪಾಗಿಡಬೇಕು ಎಂದು ಹೇಳಿ, ಅಂದಿನ ಕಾರ್ಯಕ್ರಮ ರದ್ದು ಮಾಡಿದ್ದೇವೆ. ಬೆಳಗ್ಗೆ 11 ಗಂಟೆಗೆಭಾರತ ಜೋಡೋ ಭವನದಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ಸಭೆ ಕರೆಯಲಾಗಿದೆ. ಸಂಜೆ 4 ಗಂಟೆಗೆ ಪದಾಧಿಕಾರಿಗಳ ಸಭೆ ಕರೆದಿದ್ದೇವೆ. ಸಂಜೆ 6 ಗಂಟೆಗೆ ಶಾಸಕರು, ಸಚಿವರ ಸಭೆ ಮಾಡಿ ಜವಾಬ್ದಾರಿ ನೀಡಲಾಗುವುದು. 14ರಂದು ನಾನು ಹಾಗೂ ಸಿಎಂ ದೆಹಲಿಗೆ ತೆರಳಲಿದ್ದು, 15ರಂದು ದೆಹಲಿಯಲ್ಲಿ ಕಾಂಗ್ರೆಸ್ ನೂತನ ಕಚೇರಿ ಉದ್ಘಾಟನೆ ಮಾಡಲಾಗುವುದು ಎಂದು ತಿಳಿಸಿದರು.

ತಮ್ಮ ಅನುಭವದ ಮೇಲೆ ಕುಮಾರಸ್ವಾಮಿ ಹೇಳಿಕೆ:

ಪ್ರತಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, ನಮಗೆ ಈ ವಿಚಾರ ಗೊತ್ತಿಲ್ಲ. ಅವರು ತಮ್ಮ ಅನುಭವದ ಮೇಲೆ ಮಾತನಾಡುತ್ತಿರಬೇಕು ಎಂದು ತಿಳಿಸಿದರು.

ಶತ್ರುಗಳ ನಾಶಕ್ಕೆ ಪೂಜೆ ಮಾಡಿಸಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅದು ಅವರ ಅನುಭವವಲ್ಲವೇ. ಅವರು ಕದ್ದು ಮುಚ್ಚಿ ಹೋಮ ಮಾಡುತ್ತಾರೆ. ನಾನು ಬಹಿರಂಗವಾಗಿ ಮಾಡುತ್ತೇನೆ. ದಿನ ಬೆಳಗಾದರೆ ನಾನು ದೇವರಿಗೆ ಪೂಜೆ ಮಾಡುತ್ತೇನೆ ಎಂದರು.

ದೊಡ್ಡವರ ಬಗ್ಗೆ ಮಾತನಾಡುವುದು ಬೇಡ:

blank

ನಮ್ಮ ಸಭೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನಿನಗೆ ಈ ಬಗ್ಗೆ ಗೊತ್ತಿಲ್ಲ. ನಾವು ಯಾರನ್ನೂ ತಡೆದಿಲ್ಲ. ಅದರ ಅವಶ್ಯಕತೆ ನಮಗಿಲ್ಲ. ದೊಡ್ಡವರ ಬಗ್ಗೆ ಮಾತನಾಡುವುದು ಬೇಡ ಎಂದು ತಿಳಿಸಿದರು. ಡಿನ್ನರ್ ಸಭೆ ಬಗ್ಗೆ ಕೇಳಿದಾಗ, “ಯಾವ ಡಿನ್ನರ್ ಸಭೆ ಇಲ್ಲ” ಎಂದು ತಿಳಿಸಿದರು.

 

Share This Article

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…

ಮಿದುಳಿನ ಆರೋಗ್ಯ ರಕ್ಷಣೆಗೆ ನಾವೇನು ಮಾಡಬೇಕು?

ಇಂದು ಕೃತಕ ಬುದ್ಧಿಮತ್ತೆ ಕೂಡ ನಮ್ಮ ಕೈಯಲ್ಲಿದೆ. ಆದರೆ ದುರದೃಷ್ಟವಶಾತ್ ನಮ್ಮ ಮಿದುಳಿನ ಆರೋಗ್ಯ ದಿನೇ…