More

    30ರವರೆಗೆ ಚರ್ಚ್‌ಗಳಲ್ಲಿಲ್ಲ ಸಾಮೂಹಿಕ ಪ್ರಾರ್ಥನೆ

    ಉಡುಪಿ: ಮುಚ್ಚಿರುವ ಚರ್ಚ್‌ಗಳನ್ನು ತೆರೆದು, ನಿಯಮಾವಳಿಗಳಿಗೆ ಅನುಸಾರವಾಗಿ ಪೂಜೆ, ಇನ್ನಿತರ ಧಾರ್ಮಿಕ ಕಾರ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿರುವುದಾದರೂ, ಭಕ್ತರ ಆರೋಗ್ಯ ಹಾಗೂ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿ, ಜಿಲ್ಲೆಯ ಯಾವುದೇ ಚರ್ಚ್‌ನಲ್ಲಿ ಜೂನ್ 30ರವರೆಗೆ ಸಾಮೂಹಿಕ ಪೂಜೆ, ಪ್ರಾರ್ಥನೆ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಲೋಬೊ ತಿಳಿಸಿದ್ದಾರೆ.

    ಉಡುಪಿ ಕೆಥೊಲಿಕ್ ಧರ್ಮಾಧ್ಯಕ್ಷರ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಉಡುಪಿ ಕೆಥೊಲಿಕ್ ಧರ್ಮಪ್ರಾಂತ, ಚರ್ಚ್ ಆಫ್ ಸೌತ್ ಇಂಡಿಯ (ಸಿಎಸ್‌ಐ), ಯುನೈಟೆಡ್ ಬಾಸೆಲ್ ಮಿಷನ್ ಚರ್ಚಸ್ (ಯುಬಿಎಂ), ಫುಲ್ ಗೊಸ್ಪೆಲ್ ಪಾಸ್ಟರ್ಸ್‌ ಅಸೋಸಿಯೇಶನ್ ಹಾಗೂ ಇತರ ಕ್ರೈಸ್ತ ಸಭೆಗಳ ಧಾರ್ಮಿಕ ನಾಯಕರು ಹಾಜರಿದ್ದರು.

    ಕೋವಿಡ್ 19 ಸೋಂಕಿನ ಕಾರಣದಿಂದ ಸಾಧಾರಣ 70 ದಿನಗಳಿಂದ ಸಾಮೂಹಿಕ ಧಾರ್ಮಿಕ ಚಟುವಟಿಕೆಯಿಲ್ಲದೆ ಮುಚ್ಚಲ್ಪಟ್ಟಿದ್ದ ಚರ್ಚ್‌ಗಳನ್ನು ಜೂನ್ 8ರಿಂದ ತೆರೆಯುವ ಆದೇಶವನ್ನು ಸರ್ಕಾರ ನೀಡಿದೆ. ಜನಹಿತಕ್ಕಾಗಿ ಈ ನಿರ್ಧಾರವನ್ನು ಪ್ರಕಟಿಸಿದ ರಾಜ್ಯ ಸರ್ಕಾರಕ್ಕೆ ಕೃತಜ್ಞತೆಗಳು. ಮುಂಜಾಗರೂಕತೆ ಕ್ರಮಗಳನ್ನು ಪಾಲಿಸುವ ಭಕ್ತರ ವೈಯಕ್ತಿಕ ಭೇಟಿ ಹಾಗೂ ಪ್ರಾರ್ಥನೆಗಾಗಿ ಚರ್ಚ್‌ಗಳು ತೆರೆದಿರುತ್ತವೆ ಎಂದು ಜಿಲ್ಲೆಯ ಕ್ರೈಸ್ತ ಸಮುದಾಯದ ಪರವಾಗಿ ಉಡುಪಿ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts