16 C
Bangalore
Saturday, December 7, 2019

ಅಧ್ಯಕ್ಷರಿಲ್ಲದ ನಿಗಮ-ಪ್ರಾಧಿಕಾರ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

 ಭರತ್ ಶೆಟ್ಟಿಗಾರ್ ಮಂಗಳೂರು
ಕರಾವಳಿಗೆ ಸಂಬಂಧಿಸಿದ ನಿಗಮ- ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕವಾಗದೆ ಒಂದೂವರೆ ವರ್ಷ ಕಳೆದಿದೆ. ಸರ್ಕಾರಗಳು ಬದಲಾದರೂ ಆಡಳಿತ ಅಧಿಕಾರಿಗಳ ಉಸ್ತುವಾರಿಯಲ್ಲೇ ನಡೆಯುತ್ತಿದೆ.
ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಗೇರು ಅಭಿವೃದ್ಧಿ ನಿಗಮ, ಮುಡಾ ಸಹಿತ ಕರಾವಳಿಯ ಪ್ರಮುಖ ನಿಗಮ, ಪ್ರಾಧಿಕಾರಗಳ ಅಧ್ಯಕ್ಷರ ಅಧಿಕಾರ ಅವಧಿ 2018ರ ವಿಧಾನಸಭಾ ಚುನಾವಣೆಗೆ ಮುನ್ನ ಕೊನೆಗೊಂಡಿದೆ. ಚುನಾವಣೆ ಮುಗಿದು ಒಂದೂವರೆ ವರ್ಷವಾಯಿತು. ಮೈತ್ರಿ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಿದೆ. ಆದರೆ ಅಧ್ಯಕ್ಷರ ನೇಮಕ ಮಾತ್ರ ಇನ್ನೂ ನಡೆದಿಲ್ಲ.

ಗೇರು ಅಭಿವೃದ್ಧಿ ನಿಗಮ: ಕರ್ನಾಟಕ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಿಲ್ಲದೆ ಒಂದೂವರೆ ವರ್ಷವಾಯಿತು. ಬಿ.ಎಚ್.ಖಾದರ್ ನಿಗಮದ ಕೊನೇ ಅಧ್ಯಕ್ಷ. ಕಾಂಗ್ರೆಸ್ ಸರ್ಕಾರದ ಅವಧಿ ಮುಗಿಯುತ್ತಿದ್ದಂತೆ ಇವರ ಅಧಿಕಾರವೂ ಕೊನೆಗೊಂಡಿದೆ. ಕಾಂಗ್ರೆಸ್- ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಡಳಿತ ನಡೆಸಿದ್ದರೂ ನಿಗಮಕ್ಕೆ ಅಧ್ಯಕ್ಷರ ಆಯ್ಕೆ ಮಾಡಿಲ್ಲ. ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ಮೂರು ತಿಂಗಳಾಗಿದ್ದು ಅಧ್ಯಕ್ಷರ ಆಯ್ಕೆ ನಡೆಸಿಲ್ಲ. ಸರ್ಕಾರದ ಮುಖ್ಯ ಕಾರ್ಯದರ್ಶಿಯವರೇ ಪ್ರಸ್ತುತ ನಿಗಮದ ಅಧ್ಯಕ್ಷರಾಗಿ ಪ್ರಭಾರ ವಹಿಸಿಕೊಂಡಿದ್ದಾರೆ.

 ಮುಡಾಕ್ಕೆ ಡಿ.ಸಿ ಪ್ರಭಾರ: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅಧ್ಯಕ್ಷೆಯಾಗಿ ಪ್ರಭಾರ ಅಧಿಕಾರ ವಹಿಸಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಸುರೇಶ್ ಬಲ್ಲಾಳ್ ಸುಮಾರು ಒಂದು ವರ್ಷ ಅಧಿಕಾರ ವಹಿಸಿದ್ದರು. ಅಧ್ಯಕ್ಷರು ಪ್ರತಿದಿನ ಲಭ್ಯವಿದ್ದರೆ ಜನರಿಗೂ ಹೆಚ್ಚು ಅನುಕೂಲವಾಗುತ್ತದೆ. ಕೆಲವೊಮ್ಮೆ ಅವರೇ ಜನರ ಬಳಿಗೆ ಹೋಗಿ ಕೆಲವು ಸಮಸ್ಯೆಗಳಿಗೆ ಪರಿಹಾರ ತಿಳಿಸುತ್ತಾರೆ. ಜತೆಗೆ ನಿರಂತರ ಸಭೆಗಳನ್ನು ನಡೆಸಿ ಅಧಿಕಾರಿಗಳಿಗೂ ಸಲಹೆ ಸೂಚನೆ ನೀಡುತ್ತಾರೆ. ಆದರೆ ಜಿಲ್ಲಾಧಿಕಾರಿಗಳು ತಮಗೆ ಬಿಡುವಾದಾಗ ಒಂದು ಸಭೆ ನಡೆಸುತ್ತಾರೆ. ಜನರಿಗೂ ಸುಲಭವಾಗಿ ಸಿಗದೆ ಕೆಲಸಗಳು ನಿಧಾನವಾಗುತ್ತಿದೆ ಎನ್ನುವುದು ಜನತೆಯ ಅಳಲು.

 ಕರಾವಳಿ ಅಭಿವೃದ್ಧಿ ಪ್ರಾಧಿಕಾರ: ದ.ಕ, ಉಡುಪಿ ಮತ್ತು ಉತ್ತರ ಕನ್ನಡದ ಸಮಗ್ರ ಅಭಿವೃದ್ಧಿ ಉದ್ದೇಶದಿಂದ ಹತ್ತು ವರ್ಷದ ಹಿಂದೆ ರಚನೆಯಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಲ್ಲಿಯೂ ಪ್ರಸ್ತುತ ಅಧ್ಯಕ್ಷರಿಲ್ಲ. ಕುಮಟಾ ಶಾಸಕಿ ಶಾರದಾ ಮೋಹನ್ ಶೆಟ್ಟಿ 2018ರ ಏಪ್ರಿಲ್‌ನಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಬಳಿಕ ಪ್ರಾಧಿಕಾರಕ್ಕೆ ಅಧ್ಯಕ್ಷರಿಲ್ಲ. ಪ್ರಸ್ತುತ ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರಭಾರವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಾಧಿಕಾರ ರಚನೆಯಿಂದ ಕರಾವಳಿ ಜಿಲ್ಲೆಗಳು ಯಾವುದೇ ಗಮನಾರ್ಹ ಅಭಿವೃದ್ಧಿ ಕಂಡಿಲ್ಲ. ಆರಂಭದಲ್ಲಿ ಪ್ರಾಧಿಕಾರಕ್ಕೆ ಅಧ್ಯಕ್ಷರು ಹಾಗೂ ಐವರು ಸದಸ್ಯರನ್ನು ನೇಮಕ ಮಾಡುವ ಕ್ರಮವಿತ್ತು. ಕಾಂಗ್ರೆಸ್ ಅಧಿಕಾರ ಇರುವಾಗ ಜಿಲ್ಲೆಯ ಸಚಿವರ, ಶಾಸಕರ ಬೆಂಬಲಿಗರನ್ನು ಸಮಾಧಾನಪಡಿಸಲು ಸದಸ್ಯರ ಸಂಖ್ಯೆ ಏರತೊಡಗಿತು. ಪ್ರಸ್ತುತ ಅಧ್ಯಕ್ಷರೂ ಇಲ್ಲ ಸದಸ್ಯರೂ ಇಲ್ಲ.

ಸಚಿವ ಕೋಟ-ಕೆಎಫ್‌ಡಿಸಿ ಅಧ್ಯಕ್ಷ: ಕರಾವಳಿಗೆ ಸಂಬಂಧಿಸಿದ ಪ್ರಮುಖ ನಿಗಮಗಳಲ್ಲಿ ಒಂದು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ (ಕೆಎಫ್‌ಡಿಸಿ)ಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ವೆಂಕಟ್ರಾವ್ ನಾಡಗೌಡ ಅಧ್ಯಕ್ಷರಾಗಿದ್ದರು. ನೂತನ ಸಚಿವರು ಆಯ್ಕೆಯಾಗುವ ವರೆಗೆ ಇಲಾಖೆಯ ಮುಖ್ಯ ಕಾರ್ಯದರ್ಶಿಯವರೇ ಅಧ್ಯಕ್ಷರಾಗಿ ಪ್ರಭಾರ ಅಧಿಕಾರ ವಹಿಸಿಕೊಂಡಿದ್ದರು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...