More

    ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ : ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಕ್ರೋಶ

    ಕಡಬ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಕೊಲೆ ಪ್ರಕರಣ ಲವ್ ಜಿಹಾದ್‌ನ ಭಾಗವಾಗಿದ್ದು, ಪರಾಧಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ.

    ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೇಹಾ ಕೊಲೆ ಅಮಾನವೀಯ ಹಾಗೂ ಖಂಡನೀಯ. ರಾಜ್ಯದಲ್ಲಿ ಹಿಂದು ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟು ಮತಾಂಧರ ಅಟ್ಟಹಾಸ ಮಿತಿ ಮೀರುತ್ತಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

    ಮತಾಂಧರ ಬಗ್ಗೆ ರಾಜ್ಯ ಸರ್ಕಾರ ಮೃದು ಧೋರಣೆ ತಳೆದಿರುವುದೇ ರಾಜ್ಯದಲ್ಲಿ ಇಂತಹ ಕೃತ್ಯಗಳು ಪದೇ ಪದೆ ಮರುಕಳಿಸಲು ಕಾರಣವಾಗಿದೆ. ನೇಹಾ ಕೊಲೆ ವಿಚಾರದಲ್ಲಿ ರಾಜ್ಯ ಗೃಹ ಸಚಿವರು ಬಾಲಿಶ ಹೇಳಿಕೆ ನೀಡಿ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ. ಮುಖ್ಯಮಂತ್ರಿ ಕೂಡಾ ವ್ಯಯಕ್ತಿಕ ಕಾರಣಕ್ಕೆ ಈ ಕೊಲೆ ನಡೆದಿದೆ ಎಂದು ಹಗುರವಾಗಿ ಮಾತನಾಡಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ರಾಜ್ಯ ಜನರಲ್ಲಿ ಗೊಂದಲ ಸೃಷ್ಟಿಮಾಡುತ್ತಿದ್ದಾರೆ. ಇವರ ಮನೆಯ ಹೆಣ್ಣು ಮಕ್ಕಳಿಗೆ ಇಂತಹ ಪರಿಸ್ಥಿತಿಯಾದರೆ ಇವರು ಸುಮ್ಮನಿರುತ್ತಿದ್ದಾರಾ ಎಂದು ಪ್ರಶ್ನಿಸಿದರು.

    ಸುಳ್ಯ ಮಂಡಲ ಮಹಿಳಾ ಮೋರ್ಚಾ ಮುಖಂಡರಾದ ವಿನಯಚಂದ್ರ ಬಳಕ್ಕ, ಆಶಾ ರೈ ಕಡಬ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ಕಾರ್ಯದರ್ಶಿ ತೇಜಸ್ವಿನಿ ಶೇಖರ್ ಕಟ್ಟಪುಣಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts