ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

joshi
Published on

ಹುಬ್ಬಳ್ಳಿ: ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಪಕ್ಷದ ಹೈಕಮಾಂಡ್ ಹೇಳಿದರೆ ರಾಜಿನಾಮೆ ಕೊಡುತ್ತೇನೆ ಎಂದಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೇ‌ ಪದೇ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಯಡಿಯೂರಪ್ಪನವರು ಈ ರೀತಿ‌ ಹೇಳಿರಬಹುದು ಎಂದಿದ್ದಾರೆ.

ಇಂದು ಬೆಳಿಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬಿಎಸ್​​ವೈ, 'ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿರೋ ತನಕ ಸಿಎಂ ಆಗಿರ್ತೀನಿ. ಬೇಡ ಅಂದಾಗ ರಾಜಿನಾಮೆ ಕೊಟ್ಟು ಕೆಳಗಿಳೀತೀನಿ' ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, "ಸಿಎಂ ಯಡಿಯೂರಪ್ಪ ಕೊವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ" ಎಂದರು.

ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆಯೂ ಪಕ್ಷದ ಮುಂದಿಲ್ಲ‌. ಕರೊನಾ ಸಂಕಷ್ಟ ಕಾಲದಲ್ಲಿ ಈ ವಯಸ್ಸಿನಲ್ಲೂ ಅವರು ಉತ್ತಮ‌ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ, ಕ್ರಿಯಾಶೀಲತೆಯಿಂದ ಕೆಲಸ‌ ಮಾಡುತ್ತಿದ್ದಾರೆ. ಸಧ್ಯ ಅವರನ್ನು ಬದಲಾವಣೆ ಮಾಡುವ ಯಾವುದೇ ವಿಚಾರವಿಲ್ಲ. ಹೈಕಮಾಂಡ್​​ನಿಂದಲೂ ಯಾವುದೇ ರೀತಿಯ ಸೂಚನೆ ಅವರಿಗಿಲ್ಲ ಎಂದು ಜೋಶಿ ವಿವರಣೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net