ಮನೆ ಹಾನಿಯಾದವರ ಪರಿಹಾರ ಮೊತ್ತದಲ್ಲಿ ಕಡಿತ ಬೇಡ

ಸಿದ್ದಾಪುರ: ಅತಿವೃಷ್ಟಿಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಪರಿಹಾರ ಮೊತ್ತವನ್ನು ಕಡಿಮೆ ಮಾಡಬಾರದು ಹಾಗೂ ಪರಿಹಾರ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡಬಾರದು ಎಂದು ಬಿಜೆಪಿ ತಾಲೂಕು ಮಂಡಲದಿಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಬುಧವಾರ ಮನವಿ ಸಲ್ಲಿಸಿದರು.


ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ.ಕೆ. ಮಾತನಾಡಿ, ಅತಿವೃಷ್ಠಿ ಹಾಗೂ ಬಿರುಗಾಳಿಯಿಂದಾಗಿ ತಾಲೂಕಿನಾಧ್ಯಂತ ಜನ ಜೀವನ ಅಸ್ತವ್ಯಸ್ತವಾಗಿದೆ. ಅತಿವೃಷ್ಟಿಯಿಂದ ಆಸ್ತಿ- ಪಾಸ್ತಿ ಹಾನಿಗೊಳಗಾದ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಪರಿಹಾರ ಈ ವರೆಗೂ ಸಮರ್ಪಕವಾಗಿ ದೊರೆತಿಲ್ಲ. ಪರಿಹಾರ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.


ರಾಜ್ಯ ಸರ್ಕಾರ ನೀಡಬೇಕಾದ ಹೆಚ್ಚುವರಿ ಪರಿಹಾರ ದೊರಕುತ್ತಿಲ್ಲ. ಈ ಮೊದಲು ಬಿಜೆಪಿ ಸರ್ಕಾರ ಇದ್ದಾಗ ಶೇ. 75ಕ್ಕಿಂತ ಹೆಚ್ಚು ಮನೆ ಹಾನಿಯಾದರೆ 5 ಲಕ್ಷ ರೂ, ಶೇ.25ರಿಂದ 50ರಷ್ಟುಮನೆಗಳಿಗೆ ಹಾನಿಯಾದರೆ 1.20 ಲಕ್ಷ ರೂ. ಶೇ. 15ರಿಂದ 25ರವರೆಗೆ ಮನೆ ಹಾನಿಯಾದರೆ 50 ಸಾವಿರ ರೂಪಾಯಿ, ಮನೆಗಳಿಗೆ ನೀರು ನುಗ್ಗಿದರೆ 10 ಸಾವಿರ ರೂ. ಪರಿಹಾರ ನೀಡಲಾಗುತ್ತಿತ್ತು. ಪ್ರಾಣ ಹಾನಿಯಾದರೆ 5 ಲಕ್ಷ ರೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಿದ್ದರು. ಈಗಿನ ಕಾಂಗ್ರೆಸ್ ಸರ್ಕಾರ 1.20 ಲಕ್ಷ ರೂ. ಪರಿಹಾರ ನೀಡುತ್ತಿದೆ. ಇದು ಯಾವ ಖರ್ಚಿಗೂ ಸಾಲುತ್ತಿಲ್ಲ ಎಂದು ದೂರಿದರು.


ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಕೆ. ಜಿ. ನಾಯ್ಕ ಹಣಜೀಬೈಲ್, ಎಸ್​ಸಿ ಮೋರ್ಚಾ ಜಿಲ್ಲಾಧ್ಯಕ್ಷ ನಂದನ ಬೋರ್ಕರ್ ಹಾಗೂ ಕೃಷ್ಣಮೂರ್ತಿ ಕಡಕೇರಿ ಮಾತನಾಡಿದರು.


ತಹಸೀಲ್ದಾರ್ ಎಂ.ಆರ್. ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು. ಎಸ್.ಕೆ. ಮೇಸ್ತಾ, ತೋಟಪ್ಪ ನಾಯ್ಕ, ಮಂಜುನಾಥ ಭಟ್ಟ, ಗುರುರಾಜ ಶಾನಭಾಗ, ಪ್ರವೀಣ ವಾಟಗಾರ್, ಅನಂತ ಹೆಗಡೆ, ಸುರೇಶ ಬಾಲಿಕೊಪ್ಪ, ಮಾರುತಿ ನಾಯ್ಕ ಕಾನಗೋಡ, ಸುಮನಾ ಕಾಮತ್, ಸುಜಾತಾ ಭಟ್ಟ,ಪ್ರಸನ್ನ ಹೆಗಡೆ, ಎ.ಜಿ. ನಾಯ್ಕ, ನಾರಾಯಣ ಹೆಗಡೆ ಇತರರಿದ್ದರು.

Share This Article

ಎಚ್ಚರ, ದೇಹ ದಣಿದಿದ್ರೂ ನಿದ್ದೆ ಬರ್ತಿಲ್ಲವೇ? ಸಿರ್ಕಾಡಿಯನ್ ಸಿಂಡ್ರೋಮ್​ ಇರಬಹುದು!!

ಬೆಂಗಳೂರು: ದೇಹ ದಣಿದಿರುತ್ತದೆ. ಆದರೆ ನಿದ್ರೆ ಬರುತ್ತಿಲ್ಲ. ಇದಕ್ಕೆ ದೇಹದ ಸಿರ್ಕಾಡಿಯನ್ ಲಯ ತಪ್ಪಿರುವುದು, ಅತಿಯಾದ…

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…