More

    ಯಾವ ಧರ್ಮವೂ ಹಿಂಸೆ ಪ್ರಚೋದಿಸುವುದಿಲ್ಲ

    ಅರಸೀಕೆರೆ: ಸರ್ವಧರ್ಮಗಳ ಸಮನ್ವತೆಯ ಸಂದೇಶದಂತೆ ಅರಿತು ಬದುಕು ನಡೆಸಿದರೆ ಜೀವನ ಸಾರ್ಥಕವಾಗಲಿದೆ ಎಂದು ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

    ನಗರದ ಹುಳಿಯಾರು ರಸ್ತೆಗೆ ಹೊಂದಿಕೊಂಡಂತಿರುವ ಎಂಜಿ ಶಾದಿಮಹಲ್‌ನಲ್ಲಿ ಸೋಮವಾರ ರಾತ್ರಿ ಆಯೋಜಿಸಿದ್ದ ಸರ್ವಧರ್ಮ ಸಮನ್ವಯ ಸಭೆ ಹಾಗೂ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾವ ಧರ್ಮವೂ ಹಿಂಸೆಯನ್ನು ಪ್ರಚೋದಿಸುವುದಿಲ್ಲ ಎನ್ನುವುದನ್ನು ಎಲ್ಲರೂ ಮೊದಲು ಅರ್ಥಮಾಡಿಕೊಳ್ಳಬೇಕು. ತಮಗೆ ಎದುರಾದ ಎಲ್ಲ ನೋವನ್ನು ಅನುಭವಿಸಿರುವ ಸಮಾಜದ ಹಿರಿಯರು ಹಾಕಿಕೊಟ್ಟಿರುವ ಸನ್ಮಾರ್ಗದಲ್ಲಿ ನಡೆಯವ ಮೂಲಕ ಕಿರಿಯರಿಗೆ ಮಾದರಿಯಾಗಬೇಕು. ಸಮಾನತೆ, ಬ್ರಾತೃತ್ವ ಭಾವನೆ ಎಲ್ಲರಲ್ಲೂ ಬೆಳೆದಾಗ ಮಾತ್ರ ಹಿಂಸಾ ಪ್ರವೃತ್ತಿಗೆ ಕಡಿವಾಣ ಹಾಕಲು ಸಾಧ್ಯವಿದೆ. ದೇಶದ ಸಾರ್ವಭೌಮತ್ವ ಹಾಗೂ ಸೌಹಾರ್ದಾಯುತ ವಾತಾವರಣ ನಿರ್ಮಿಸಲು ಎಲ್ಲರೂ ಒಗ್ಗೂಡಿ ಶ್ರಮಿಸೋಣ ಎಂದರು.

    ಡಿ.ಎಂ.ಕುರ್ಕೆ ವಿರಕ್ತಮಠದ ಶ್ರೀ ಶಶಿಶೇಖರ ಸಿದ್ದಬಸವ ಸ್ವಾಮೀಜಿ, ಜಮಾತ್ ಮಸೀದಿಯ ಧರ್ಮಗುರು ನೈಮುದ್ದೀನ್ ಖಾದ್ರಿ, ಶಾಸಕ ಕೆ.ಎಂ.ಶಿವಲಿಂಗೇಗೌಡ, ರಾಜ್ಯ ವಕ್ಫ್ ಬೋರ್ಡ್ ಸಮಿತಿ ಮಾಜಿ ಅಧ್ಯಕ್ಷ ಶಾಪಿಸಾದಿ, ನಗರಸಭೆ ಮಾಜಿ ಅಧ್ಯಕ್ಷ ಸಮೀವುಲ್ಲ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts