More

    ಯಾವುದೇ ಕಾರಣಕ್ಕೂ ಬಿಎಸ್‌ವೈ ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಸಿದ್ಧರಾಮಯ್ಯ ಅವರಿಗೆ ಕೂಡಲೇ ಸಿಎಂ ಆಗಬೇಕೆಂಬ ತವಕ ಅದಕ್ಕಾಗಿಯೇ ನಾನು ರಾಜ್ಯಪಾಲರಿಗೆ ಬರೆದಿದ್ದ ಪತ್ರವನ್ನು ಮುಂದಿಟ್ಟುಕೊಂಡು ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಿಎಸ್‌ವೈ ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

    ಚಾಮುಂಡೇಶ್ವರಿಯಲ್ಲಿ ಚುನಾವಣೆ ಸೋತ ಸಿದ್ದರಾಮಯ್ಯ ಈಗ ಮತ್ತೊಮ್ಮೆ ಸಿಎಂ ಆಗಬೇಕೆಂಬ ಆಸೆಯಲ್ಲಿದ್ದಾರೆ. ಯಡಿಯೂರಪ್ಪ ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ. ಸಿದ್ದರಾಮಯ್ಯ ಕನಸು ನನಸಾಗಲ್ಲ ಎಂದು ತಿಳಿಸಿದರು.

    ಉಪಚುನಾವಣೆಯಲ್ಲಿ ನಿಮ್ಮ ಪತ್ರ ಪ್ರತಿಪಕ್ಷಗಳಿಗೆ ಅಸ್ತ್ರವಾಗಲಿಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿಪಕ್ಷದವರು ಇದಿಲ್ಲದಿದ್ದರೆ ಇನ್ನೊಂದು ಅಸ್ತ್ರವನ್ನು ಹುಡುಕಿಕೊಳ್ಳುತ್ತಿದ್ದರು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡರು.
    ನಾವು ಸಂಘಟನಾತ್ಮಕವಾಗಿ ಒಟ್ಟಾಗಿದ್ದೇವೆ. ಮಸ್ಕಿ, ಬೆಳಗಾವಿ, ಬಸವಕಲ್ಯಾಣದಲ್ಲಿ ನಮ್ಮ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿರುವುದರಿಂದ ಆರೋಪ ಮಾಡುವ ಅವಕಾಶ ಕಾಂಗ್ರೆಸ್‌ಗಿಲ್ಲ. ಈಗ ಅವರಿಗೆ ನಾನು ರಾಜ್ಯಪಾಲರಿಗೆ ಬರೆದಿರುವ ಪತ್ರ ಸಿಕ್ಕಿದೆ ಎಂದು ಹೇಳಿದರು.

    ಇದನ್ನೂ ಓದಿ: ಜಾರಕಿಹೊಳಿ ಇಂದೂ ಗೈರು- ಸಿಡಿ ಯುವತಿಯನ್ನು ಎದುರಿಸಲಾಗದೇ ಸಾಹುಕಾರ್​ಗೆ ಹುಷಾರ್​ ತಪ್ಪಿತಾ?

    ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುತ್ತೇವೆ
    ಕೇಂದ್ರ ಹಾಗೂ ರಾಜ್ಯದಲ್ಲಿ ಉತ್ತಮ ಸರ್ಕಾರಗಳಿವೆ ಎಂಬುದನ್ನು ಜನ ತೀರ್ಮಾನಿಸಿದ್ದಾರೆ. ಇಲ್ಲಿ ಸಣ್ಣ ಪುಟ್ಟ ಆಡಳಿತಾತ್ಮಕ ಸಮಸ್ಯೆಗಳಿವೆ. ಇದನ್ನು ಸರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ನಾವು ಪ್ರಯತ್ನ ನಡೆಸುತ್ತಿದ್ದೇವೆಯೇ ಹೊರತು ಬೇರೇನೂ ಇಲ್ಲ ಎಂದರು.
    ನನ್ನ ಇಲಾಖೆಯಲ್ಲಿ ನಾನು ನ್ಯೂನತೆಗಳನ್ನು ಗಮನಿಸಿರುವುದರಿಂದ ಮುಖ್ಯಮಂತ್ರಿಗಳು ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ರಾಷ್ಟ್ರೀಯ ಹಾಗೂ ರಾಜ್ಯಾಧ್ಯಕ್ಷರ ಗಮನಕ್ಕೂ ತಂದಿದ್ದೇನೆ. ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಎಲ್ಲವನ್ನೂ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.
    ——–
    ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಲ್ಲ
    ಮೇ.2ರಂದು ಸಿಎಂ ಬದಲಾವಣೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ಅವರಿಗೆ ನಾನು ಯಾವ ಭಾಷೆಯಲ್ಲಿ ಹೇಳಬೇಕೋ ಸ್ಪಷ್ಟವಾಗಿ ಹೇಳಿದ್ದೇನೆ. ಅವರೊಬ್ಬ ಪ್ರಖರ ಹಿಂದುತ್ವವಾದಿ. ಸೈದ್ದಾಂತಿಕವಾಗಿ ಅವರನ್ನು ಪ್ರಶ್ನಿಸುವಂತಿಲ್ಲ. ಅವರ ಕ್ಷೇತ್ರದಲ್ಲಿ ಉತ್ತಮವಾದ ಗೋಶಾಲೆ ಮಾಡಿದ್ದಾರೆ. ಅವರು ಸಿಎಂ ಬದಲಾವಣೆ ಬಗ್ಗೆ ಏಕೆ ಹೇಳುತ್ತಿದ್ದಾರೆ? ಅದು ನಿಜವೋ, ಸುಳ್ಳೋ? ಗೊತ್ತಿಲ್ಲ. ಆದರೆ ಅವರ ಹೇಳಿಕೆಯನ್ನು ರಾಷ್ಟ್ರೀಯ ನಾಯಕರು ಗಮನಿಸುತ್ತಿದ್ದಾರೆ ಎಂದು ಹೇಳಿದರು.

    ಖಾತೆ ಬದಲಾವಣೆ, ಸಹಿ ಸಂಗ್ರಹ, ರಾಜೀನಾಮೆ ಎಲ್ಲ ಚರ್ಚೆಗಳು ನಡೆದು ಹೋಗಿವೆ. ನಾನು ಯಾವುದಕ್ಕೂ ಜಗ್ಗಲ್ಲ, ಬಗ್ಗಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನಾನು ಆ ರೀತಿ ಹೇಳಿದ ಬಳಿಕ ಎಲ್ಲರೂ ಇನ್ನು ಮುಂದೆ ಈ ವಿಷಯ ಚರ್ಚೆ ಮಾಡುವುದಿಲ್ಲ ಎಂದಿದ್ದಾರೆ. ಶೀಘ್ರವೇ ಎಲ್ಲವೂ ಬಗೆಹರಿಯಲಿದೆ ಎಂದರು.

    ಕಬ್ಜ ಶೂಟಿಂಗ್​ ವೇಳೆ ನಟ ಉಪೇಂದ್ರ ತಲೆಗೆ ಬಡಿಯಿತು ಸಹ ನಟ ಬೀಸಿದ ರಾಡ್..!

    ಮೊದ್ಲು ನಿನ್ನ ಅಕ್ಕ-ತಂಗಿಯರನ್ನು ಕೇಳು ಅವ್ರು ಮಾಡಿದ್ರೆ ನಾನು ಮಾಡ್ತೀನಿ: ನೆಟ್ಟಿಗನಿಗೆ ಶಾಕ್​ ಕೊಟ್ಟ ಪ್ರಿಯಾಮಣಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts