More

    ಉತ್ತರ ಕರ್ನಾಟಕಕ್ಕೆ ಕೆಪಿಸಿಸಿ ಪಟ್ಟ ನೀಡುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ

    ವಿಜಯಪುರ: ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಈಗಾಗಲೇ ಸುಪ್ರಿಂ ಕೋರ್ಟ್ ನೋಟಿಫಿಕೇಶನ್ ಹೊರಡಿಸಲು ಸೂಚಿಸಿದೆ. ಈ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

    ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲೂ ಅವರದ್ದೇ ಸರ್ಕಾರವಿದೆ. ರಾಜ್ಯದ ಸಂಸದರು ಮತ್ತು ಸಿಎಂ ಯಡಿಯೂರಪ್ಪ ಕೇಂದ್ರದ ಮೇಲೆ ಒತ್ತಡ ಹೇರಿ ನೋಟಿಫಿಕೇಶನ್ ಜಾರಿಗೊಳಿಸಬೇಕೆಂದು ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರಿ ಪ್ರತಿಕ್ರಿಯಿಸಿದರು.

    ದೆಹಲಿಯಲ್ಲಿ ಎನ್‌ಆರ್‌ಸಿ ಪರ-ವಿರೋಧ ಪ್ರತಿಭಟನೆ ವೇಳೆ ನಡೆದ ಗಲಭೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಷಾ ಕ್ರಮ ಕೈಗೊಳ್ಳಬೇಕು. ದೆಹಲಿ ಪೊಲೀಸ್ ವ್ಯವಸ್ಥೆ ಯಾರ ಕೈಯಲ್ಲಿದೆ? ಗಲಭೆ ತಡೆಯಬೇಕಾದವರು ಅಮಿತ್ ಷಾ ಅಲ್ಲವಾ? ಈ ಹಿಂದೆ ಮಂಗಳೂರಲ್ಲಿ ಗಲಭೆಯಾಯಿತು, ಲಾಠಿ ಚಾರ್ಜ್ ಆಗಿ ಬಳಿಕ ಗೋಲಿಬಾರ್ ಆಯಿತು. ಇದಕ್ಕೆಲ್ಲಾ ಕಾರಣವೇನು? ಎಂದು ಪ್ರಶ್ನೆಗೆ ಮರು ಪ್ರಶ್ನೆ ಎಸೆಯುತ್ತಲೇ ಸಿದ್ದರಾಮಯ್ಯ ಗಲಭೆ ನಿಯಂತ್ರಣಕ್ಕೆ ಒತ್ತಾಯಿಸಿದರು.

    ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಕುರಿತು ಇನ್ನೂ ಯಾವುದೇ ನಿರ್ಣಯ ಕೈಗೊಂಡಿಲ್ಲ. ಶೀಘ್ರದಲ್ಲೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದ ಸಿದ್ದರಾಮಯ್ಯ ಅವರು, ಉತ್ತರ ಕರ್ನಾಟಕಕ್ಕೆ ಕೆಪಿಸಿಸಿ ಪಟ್ಟ ನೀಡುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಆದರೆ ಆಯ್ಕೆ ವೇಳೆ ಪ್ರಾದೇಶಿಕತೆ, ಜಾತಿ ಮತ್ತು ಅರ್ಹತೆ ಆಧರಿಸಿಯೇ ನಿರ್ಧಾರ ಕೈಗೊಳ್ಳುವುದಾಗಿ ಪ್ರತಿಕ್ರಿಯಿಸಿದರು.

    ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲ್ ಹೇಳಿಕೆಗೆ ಉದಾಸೀನದಿಂದಲೇ ಉತ್ತರಿಸಿದ ಸಿದ್ದರಾಮಯ್ಯ ಅವರು, ಕಟೀಲ್ ಅವರಿಗೆ ರಾಜಕೀಯ ಜ್ಞಾನವಿಲ್ಲ. ಅವರನ್ನು ಹೇಗೆ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೋ ಗೊತ್ತಿಲ್ಲ. ಬಿಜೆಪಿ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದ್ದು ಶೀಘ್ರದಲ್ಲೇ ರಾಜ್ಯ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲವಾಗಿಲಿದೆ ಎಂಬ ವಿಪ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿಕೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡದ ಸಿದ್ದರಾಮಯ್ಯ ಅವರು, ಬಿಜೆಪಿಯ ಯಾವ ಶಾಸಕರೂ ನನ್ನನ್ನು ಸಂಪರ್ಕಿಸಿಲ್ಲ. ಬಿಜೆಪಿಯಲ್ಲಿ ಅಸಮಾಧಾನ ಇರೋದು ನಿಜ. ಆದರೆ 32 ಬಿಜೆಪಿ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎನ್ನುವ ಹೇಳಿಕೆ ಬಗ್ಗೆ ಸಿಎಂ ಇಬ್ರಾಹಿಂ ಅವರನ್ನೇ ವಿಚಾರಿಸಿ ಎಂದರು.
    ಶಾಸಕ ಯಶವಂತರಾಯಗೌಡ ಪಾಟೀಲ, ಎಂ.ಬಿ. ಪಾಟೀಲ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts