More

    ವಿದ್ಯುತ್ ಘಟಕದಿಂದ ಅಡ್ಡ ಪರಿಣಾಮವಿಲ್ಲ:ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

    ಬಿಡದಿ: ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ಸ್ಥಾಪನೆಯಿಂದ ಜನರ ಮೇಲೆ ಅಡ್ಡ ಪರಿಣಾಮ ಬೀರುವುದಿಲ್ಲ. ಏನೂ ತಿಳಿಯದವರು ಈ ಬಗ್ಗೆ ಮಾತನಾಡಿದರೆ ಅರ್ಥವಿಲ್ಲ ಎಂದು ಕಾಂಗ್ರೆಸ್ ಮುಖಂಡರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿರುಗೇಟು ನೀಡಿದರು.

    ಬಿಡದಿ ಹೋಬಳಿ ಬನ್ನಿಕುಪ್ಪೆ (ಬಿ)ಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಡದಿಯಲ್ಲಿ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲೇ ಅನುಮೋದನೆ ಸಿಕ್ಕಿದ್ದು, ಈಗ ಭೂಮಿ ಪೂಜೆಯಾಗಿದೆ ಎಂದರು.

    ಜಿಲ್ಲೆಯಲ್ಲಿ ದೊಡ್ಡ ವ್ಯಕ್ತಿಗಳು ಎಂದು ಓಡಾಡಿದರೆ ಸಾಲದು, ಕೆಲಸ ಮಾಡುವುದು ಮುಖ್ಯ. ಅವರಂತೆ ಮಾತಿನಲ್ಲಿ ಹೊಟ್ಟೆ ತುಂಬಿಸಿ ರಾಜಕಾರಣ ಮಾಡಲು ನಾನು ಬಂದಿಲ್ಲ. ಅಭಿವೃದ್ಧಿ ಕೆಲಸಗಳನ್ನು ಮಾಡಿ ತೋರಿಸಲು ಬಂದಿದ್ದೇನೆ ಎಂದು ಎಚ್​ಡಿಕೆ ಮತ್ತು ಡಿಕೆಶಿ ಹೆಸರು ಹೇಳದೆ ಕುಟುಕಿದರು.

    ವಿಧಾನ ಪರಿಷತ್ ಸದಸ್ಯರಾದ ಅ.ದೇವೇಗೌಡ, ಪುಟ್ಟಣ್ಣ, ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜು, ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಂಗಧಾಮಯ್ಯ, ಮಾಗಡಿ ಮಂಡಲ ಅಧ್ಯಕ್ಷ ಧನಂಜಯ್ಯ, ಕಾರ್ಯದರ್ಶಿ ಸಂಜೀವ್​ರೆಡ್ಡಿ, ಬಿಜೆಪಿ ಹಿಂದುಳಿದ ವರ್ಗದ ಅಧ್ಯಕ್ಷ ಬಾಳೆಮಂಡಿ ಶಿವಣ್ಣ, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ನಾರಾಯಣರೆಡ್ಡಿ, ಕಾರ್ಯದರ್ಶಿ ರೇಣುಕಯ್ಯ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts