More

    ರಾಜ್ಯದಲ್ಲಿ ಕರೊನಾ ಆತಂಕ; ಕ್ರಿಸ್​ಮಸ್​-ಹೊಸವರ್ಷಾಚರಣೆಗಿಲ್ಲ ಯಾವುದೇ ನಿರ್ಬಂಧ

    ಬೆಂಗಳೂರು: ವರ್ಷಾಂತ್ಯದಲ್ಲಿ ಮಹಾಮಾರಿ ಕೋವಿಡ್​ ಮತ್ತೊಮ್ಮೆ ತನ್ನ ಆರ್ಭಟ ಶುರು ಮಾಡಿದ್ದು, ಕ್ರಿಸ್​ಮಸ್​ ಹಾಗೂ ಹೊಸವರ್ಷಾಚರಣೆಯ ಮೇಲೆ ಇದರ ಕರಿ ನೆರಳು ಬೀಳುವ ಸಾಧ್ಯತೆ ದಟ್ಟವಾಗಿದೆ. ನೆರೆ ರಾಜ್ಯ ಕೇರಳದಲ್ಲಿ ದಿನದಿಂದ ದಿನಕ್ಕೆ ಕೋವಿಡ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ.

    ಈ ಹಿನ್ನಲೆ ರಾಜ್ಯ ಸರ್ಕಾರ ಹೈಅಲರ್ಟ್​ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸರಣಿ ಸಭೆಗಳನ್ನು ನಡೆಸುತ್ತಿದೆ. ಮತ್ತೊಂದೆಡೆ ಜನರಲ್ಲಿ ಆತಂಕ ಹೆಚ್ಚಾಗಿದ್ದು ಬೆಂಗಳೂರಿನಲ್ಲಿ ಕ್ರಿಸ್​ಮಸ್​ ಹಾಗೂ ಹೊಸವರ್ಷಾಚರಣೆಗೆ ಪ್ರತ್ಯೇಕ ಗೈಡ್​ಲೈನ್ಸ್​ ಇರುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ತಿಳಿಸಿದ್ದಾರೆ.

    ರಾಜ್ಯದಲ್ಲಿ ಕರೊನಾ ಆತಂಕ; ಕ್ರಿಸ್​ಮಸ್​-ಹೊಸವರ್ಷಾಚರಣೆಗಿಲ್ಲ ಯಾವುದೇ ನಿರ್ಬಂಧ

    ಇದನ್ನೂ ಓದಿ: ಐಪಿಎಲ್​-17 ಆರಂಭಕ್ಕೆ ಮುಹೂರ್ತ ಫಿಕ್ಸ್​!

    ಕೋವಿಡ್​ ಸೋಂಕು ಹೆಚ್ಚುತ್ತಿರುವ ನಡುವೆಯೇ ಕ್ರಿಸ್​ಮಸ್​ ಹಾಗೂ ಹೊಸವರ್ಷಾಚರಣೆಗೆ ಬ್ರೇಕ್​ ಬೀಳುವ ಸಾಧ್ಯತೆ ಇತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ತುಷಾರ್​ ಗಿರಿನಾಥ್ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್​ ಪ್ರಕರಣ ಹೆಚ್ಚಳವಾಗಿಲ್ಲ. ಹೀಗಾಗಿ ಕ್ರಿಸ್​ಮಸ್​ ಹಾಗೂ ಹೊಸವರ್ಷಾಚರಣೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್​ನಲ್ಲಿ ಕೋವಿಡ್ ಸಿದ್ಧತೆಗಳ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಕೇಳಿದೆ. ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ SARI, ILI ಕೇಸ್ ಮೇಲೆ ನಿಗಾ ಇಡಲು ಬಿಬಿಎಂಪಿ ಮುಂದಾಗಿದೆ. ಕೋವಿಡ್ ಸಂಬಂಧ ಆರೋಗ್ಯಾಧಿಕಾರಿಗಳ ಸಭೆ ನಡೆಸಲು ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್​ ಗಿರಿನಾಥ್​ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts