21.7 C
Bengaluru
Tuesday, January 21, 2020

ಬಿಯರ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಕರಾವಳಿಯಲ್ಲಿ ಬಿಯರ್ ಸ್ಟಾಕ್ ಇಲ್ಲ

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ಅವಿನ್ ಶೆಟ್ಟಿ ಉಡುಪಿ
ಬಿಯರ್ ಪ್ರಿಯರಿಗೆ ಕಹಿ ಸುದ್ದಿ. ಕರಾವಳಿಯಲ್ಲಿ ನೀರಿನಂತೆ ಬಿಯರ್ ಕೂಡ ಸಿಗುತ್ತಿಲ್ಲ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಿರುವುದರಿಂದ ಸ್ಥಳೀಯರು, ಪ್ರವಾಸಿಗರು ಮದ್ಯದಂಗಡಿಗಳಿಗೆ ತೆರಳಿದರೆ ಬಿಯರ್ ಸ್ಟಾಕ್ ಇಲ್ಲ ಎಂಬ ಉತ್ತರ ಸಿಗುತ್ತಿದೆ.

ಮಂಗಳೂರು, ಉಡುಪಿ ನಗರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್‌ಶಾಪ್, ಎಂಎಸ್‌ಐಎಲ್ ಮದ್ಯದಂಗಡಿಗಳಲ್ಲಿ ಕೆಲವು ದಿನಗಳಿಂದ ಬಿಯರ್ ಸ್ಟಾಕ್ ಇಲ್ಲ. ಬಾರ್ ಅಟ್ಯಾಚ್ ಹೊಂದಿರುವ ರೆಸ್ಟೋರೆಂಟ್ ಉದ್ಯಮಕ್ಕೆ ಬಿಯರ್ ಕೊರತೆ ಹೊಡೆತ ನೀಡಿದೆ. ಮದ್ಯದಂಗಡಿಗಳಲ್ಲಿ ಸ್ಟಾಕ್ ಬಂದ ಕೂಡಲೇ ಬಿಯರ್ ಖಾಲಿಯಾಗುತ್ತವೆ. ಒಂದು ಸಾರಿ ಐಎಂಎಲ್(ಇಂಡಿಯನ್ ಮೇಡ್ ಲಿಕ್ಕರ್) ಸ್ಟಾಕ್ ತೆಗೆದುಕೊಂಡಲ್ಲಿ, ಸ್ಟಾಕ್‌ಗೆ ಶೇ.15-20ರಷ್ಟೇ ಬಿಯರ್ ಸಿಗುತ್ತಿದೆ ಎನ್ನುತ್ತಾರೆ ಮದ್ಯದಂಗಡಿ ಮಾಲೀಕರು. ಅನೇಕ ಬಿಯರ್ ಬ್ರ್ಯಾಂಡ್‌ಗಳು ಕೆಲ ದಿನಗಳಿಂದ ಸಿಗುತ್ತಿಲ್ಲ ಎಂಬುದು ಬಿಯರ್ ಪ್ರಿಯರು ಅಳಲು. ಬೇಸಿಗೆ ರಜೆ, ಪ್ರವಾಸಿಗರು, ವಿವಾಹ ಕಾರ್ಯಕ್ರಮ(ಮೆಹೆಂದಿ, ರಿಸೆಪ್ಶನ್), ಚುನಾವಣಾ ಸಮಯ, ಎಲ್ಲಕ್ಕಿಂತ ಹೆಚ್ಚಾಗಿ ಬೇಸಿಗೆ ವಾತವರಣ ಬಿಯರ್‌ಗೆ ಬೇಡಿಕೆ ಹೆಚ್ಚಿದೆ. ಆದರೆ, ಸ್ಟಾಕಿಲ್ಲ.

ನೀತಿ ಸಂಹಿತೆಯೂ ಕಾರಣ!: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಬಿಯರ್ ಉತ್ಪಾದನೆಗೆ ಮಿತಿ ಹೇರಲಾಗಿದೆ. ಹೀಗಾಗಿ ರಾಜ್ಯದಲ್ಲಿರುವ ನಾಲ್ಕೈದು ಬಿಯರ್ ಫ್ಯಾಕ್ಟರಿಗಳು ಹಗಲು ಮಾತ್ರ ಕಾರ್ಯನಿರ್ವಹಿಸುತ್ತಿವೆ. ರಾತ್ರಿ ಪಾಳಿ ಕಾರ್ಯನಿರ್ವಹಿಸುತ್ತಿಲ್ಲ. ಬಿಯರ್ ಕೊರತೆ ಕರಾವಳಿಗಷ್ಟೇ ಅಲ್ಲ, ರಾಜ್ಯಾದ್ಯಂತ ಸಮಸ್ಯೆ ಇದೆ. ಬೇಸಿಗೆ ಆದ್ದರಿಂದ ಉತ್ತರ ಕರ್ನಾಟಕ ಮತ್ತು ಕರಾವಳಿಯಲ್ಲಿ ಬಿಯರ್‌ಗೆ ಅತ್ಯಧಿಕ ಬೇಡಿಕೆ ಇದೆ. ಹಾಟ್ ಡ್ರಿಂಕ್ಸ್ ಹೆಚ್ಚು ಮಾರಾಟ ಆಗುವುದಿಲ್ಲ ಎನ್ನುತ್ತಾರೆ ಎಂದು ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು.

ಹಂಚಿಕೆ ಮೇಲೆ ಆನ್‌ಲೈನ್ ಕಣ್ಣು: ಪೂರೈಕೆಯಾಗುವ ಪ್ರಮಾಣವೇ ಕಡಿಮೆ ಆಗಿರುವ ಕಾರಣ, ಎಲ್ಲ ಮದ್ಯದಂಗಡಿಗಳಿಗೆ ಸಮನಾಗಿ ಹಂಚಬೇಕು. ಮದ್ಯದಂಗಡಿಗೆ ಜಾಸ್ತಿ-ಕಡಿಮೆ ಹಂಚಿಕೆ ಮಾಡುವುದು, ನಿಯಮ ಮೀರಿ ಸ್ಟಾಕ್ ನೀಡಲು ಸಾಧ್ಯವಿಲ್ಲ. ಆನ್‌ಲೈನ್‌ನಲ್ಲೇ ವಹಿವಾಟು ನಡೆಯುತ್ತದೆ. ಈ ಪ್ರಕ್ರಿಯೆ ಸಂಪೂರ್ಣ ಮಾನಿಟರಿಂಗ್‌ಗೆ ಒಳಪಟ್ಟಿರುತ್ತದೆ. ಇತ್ತೀಚೆಗೆ, ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಿಯರ್ ಪೂರೈಕೆಯಾಗುತ್ತದೆ. ಮದ್ಯ ಮಾರಾಟ ಗುರಿಯಲ್ಲಿ ಕರಾವಳಿ ಹಿಂದಿರುವುದರಿಂದ, ಕಡಿಮೆ ಪ್ರಮಾಣ ಮತ್ತು ವಿಳಂಬ ಪೂರೈಕೆಗೆ ಇದೂ ಒಂದು ಕಾರಣ. ಕರಾವಳಿಗೆ ಸ್ಟಾಕ್ ಬಂದಿದೆ. ಹಂಚಿಕೆ ಮಾಡಲಾಗುತ್ತಿದೆ. ಕೆಲವು ಬ್ರಾೃಂಡ್‌ಗಳಷ್ಟೇ ಸಿಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರಾವಳಿ ಸೇರಿದಂತೆ ರಾಜ್ಯದ ಎಲ್ಲೆಡೆ ಮದ್ಯದಂಗಡಿಗಳಲ್ಲಿ ಬಿಯರ್ ಸ್ಟಾಕ್ ಇಲ್ಲ. ಪ್ರಸ್ತುತ ಬೇಡಿಕೆ ಹೆಚ್ಚಿರುವುದರಿಂದ ಕಡಿಮೆ ಪ್ರಮಾಣದಲ್ಲಿ ಪೂರೈಕೆಯಾಗುವ ಸ್ಟಾಕ್ ಸಾಕಾಗುವುದಿಲ್ಲ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಉತ್ಪಾದನೆ ಮಿತಿ ಹೇರಿಕೆ, ಏಪ್ರಿಲ್ ನಂತರ ದರ ಏರಿಕೆಯಿಂದಾಗಿ ಲೇಬಲ್‌ಗಳ ಬದಲಾವಣೆ ಪ್ರಕ್ರಿಯೆ ಕಡಿಮೆ ಸ್ಟಾಕ್ ಬರಲು ಕಾರಣವಾಗಿದೆ.
-ಗೋವಿಂದ್‌ರಾಜ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ, ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...