More

    ಆಫ್​ಲೈನ್ ತರಗತಿಗೆ ವಿದ್ಯಾರ್ಥಿಗಳೇ ಇಲ್ಲ!

    ಗದಗ: ಕಾಲೇಜ್​ಗಳು ಪ್ರಾರಂಭವಾಗಿ ಮೂರು ದಿನ ಕಳೆದರೂ ಆಫ್​ಲೈನ್ ತರಗತಿಗೆ ವಿದ್ಯಾರ್ಥಿಗಳೇ ಬರುತ್ತಿಲ್ಲ. ಅಂತಿಮ ವರ್ಷದ ತರಗತಿಗಳನ್ನು ಮಾತ್ರ ಪ್ರಾರಂಭಿಸಲು ಸರ್ಕಾರ ಸೂಚನೆ ನೀಡಿದೆ. ಅದರಂತೆ ಜಿಲ್ಲೆಯ ಎಲ್ಲ ಕಾಲೇಜ್​ಗಳನ್ನು ಸ್ಯಾನಿಟೈಸ್ ಮಾಡಿ ತರಗತಿ ಪ್ರಾರಂಭಿಸಲಾಗಿದೆ. ಆದರೆ, ಕಾಲೇಜ್​ಗೆ ಆಗಮಿಸಲು ಕೋವಿಡ್ ಪರೀಕ್ಷಾ ವರದಿ ಕಡ್ಡಾಯ ಎಂದು ಸರ್ಕಾರ ಹೇಳಿದ್ದರಿಂದ ವಿದ್ಯಾರ್ಥಿಗಳು ತರಗತಿಗೆ ಬರಲು ವಿಳಂಬವಾಗಿದೆ.

    ಜಿಲ್ಲೆಯಲ್ಲಿ 10 ಅನುದಾನಿತ ಪದವಿ ಕಾಲೇಜ್​ಗಳು, 9 ಸರ್ಕಾರಿ ಪದವಿ ಕಾಲೇಜ್​ಗಳಿದ್ದು, ಒಟ್ಟು 12,333 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದರಲ್ಲಿ 3233 ವಿದ್ಯಾರ್ಥಿಗಳು ಅಂತಿಮ ವರ್ಷ ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. 350 ಸ್ನಾತಕೋತ್ತರ ವಿದ್ಯಾರ್ಥಿಗಳಿದ್ದಾರೆ. ಸಾವಿರಕ್ಕೂ ಅಧಿಕ ಇಂಜಿನಿಯರಿಂಗ್ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

    9 ಜನರಿಗೆ ಪಾಸಿಟಿವ್

    ಜಿಲ್ಲೆಯಲ್ಲಿ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಹಾಗೂ ಡಿ ದರ್ಜೆ ನೌಕರರು ಸೇರಿ 3 ಸಾವಿರಕ್ಕೂ ಅಧಿಕ ಜನರು ಕೋವಿಡ್ ತಪಾಸಣೆಗೆ ಒಳಗಾಗಿದ್ದಾರೆ. ಇದರಲ್ಲಿ 9 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಪಾಸಿಟಿವ್ ಬಂದಿರುವವರಲ್ಲಿ ಸೋಂಕಿನ ಲಕ್ಷಣ ಕಂಡುಬಂದಿಲ್ಲ. ಹೀಗಾಗಿ ಅವರೆಲ್ಲರನ್ನೂ ಹೋಮ್ ಐಸೋಲೇಷನ್​ನಲ್ಲಿ ಇರಿಸಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಪದವಿ ಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಪ್ರಥಮಾದ್ಯತೆ ಮೇರೆಗೆ ಕರೊನಾ ಸೋಂಕು ಪರೀಕ್ಷೆ ಮಾಡಬೇಕು. ಆಯಾ ತಾಲೂಕು ಆರೋಗ್ಯಾಧಿಕಾರಿಗಳು ತಾಲೂಕಿನಲ್ಲಿರುವ ಪದವಿ ಕಾಲೇಜುಗಳ ಪ್ರಾಚಾರ್ಯರೊಂದಿಗೆ ಸಮನ್ವಯ ಸಾಧಿಸಿ ಶೀಘ್ರವಾಗಿ ಸಮಯ ನಿಗದಿಪಡಿಸಿಕೊಂಡು ವಿದ್ಯಾರ್ಥಿಗಳಿಗೆ ತಪಾಸಣೆ ಮಾಡಿಸಿ ಶೀಘ್ರ ವರದಿ ನೀಡಬೇಕು. ತಪಾಸಣೆ ವೇಳೆ ಸೋಂಕು ದೃಢಪಟ್ಟಲ್ಲಿ ಸೂಕ್ತ ಚಿಕಿತ್ಸೆ ಒದಗಿಸಬೇಕು. ಕರೊನಾ ಸೋಂಕಿನ ತಪಾಸಣೆ, ಚಿಕಿತ್ಸೆಯನ್ನು ಸರ್ಕಾರ ಉಚಿತವಾಗಿ ನೀಡಲಿದೆ.

    | ಸುಂದರೇಶಬಾಬು, ಜಿಲ್ಲಾಧಿಕಾರಿ, ಗದಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts