More

    ಪ್ರತಿಭಟನೆಗೆ ತಮ್ಮ ಬೆಂಬಲ ಇಲ್ಲ: ರಾಜ್ಯ ಸರ್ಕಾರಿ ಪಡಿತರ ವಿತರಕ ಸಂಘ ಸ್ಪಷ್ಟನೆ

    ಬೆಂಗಳೂರು:ಅನ್ನಭಾಗ್ಯ ಯೋಜನೆಯಡಿ ಕಾರ್ಡ್‌ದಾರರಿಗೆ ಅಕ್ಕಿ ಬದಲು ಹಣ ನೀಡುವ ಯೋಜನೆ ವಿರೋಧಿಸಿ ಬೆಂಗಳೂರು ನಗರ ಸರ್ಕಾರಿ ಪಡಿತರ ವಿತರಕರ ಹಿತರಕ್ಷಣಾ ಸಂಘ ಗುರುವಾರ (ಅ.19) ಹಮ್ಮಿಕೊಂಡಿರುವ ಪ್ರತಿಭಟನೆಗೆ ತಮ್ಮ ಬೆಂಬಲ ಇಲ್ಲ ಎಂದು ರಾಜ್ಯ ಸರ್ಕಾರಿ ಪಡಿತರ ವಿತರಕ ಸಂಘ ಹೇಳಿದೆ.

    ಹಣ ಬದಲು ಕಾರ್ಡ್‌ದಾರರಿಗೆ ಅಕ್ಕಿ ವಿತರಿಸುವಂತೆ ಹಾಗೂ ಪಡಿತರ ವಿತರಣೆಗೆ ನೀಡಲಾಗುವ ಕಮಿಷನ್ ಹಣವನ್ನು ಹೆಚ್ಚಳ ಮಾಡುವಂತೆ ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಇದಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಸಹ ಅಕ್ಕಿ ವಿತರಿಸುವುದಾಗಿ ನಮಗೆ ಭರವಸೆ ಕೊಟ್ಟಿದ್ದಾರೆ. ಅವರಿಗೆ ಸ್ವಲ್ಪ ಕಾಲಾವಕಾಶ ನೀಡಬೇಕಿದೆ. ರಾಜ್ಯಾದ್ಯಂತ ಎಲ್ಲ ಕಾರ್ಡ್‌ದಾರರಿಗೆ ಈಗಾಗಲೇ ಪಡಿತರ ನೀಡಲಾಗಿದೆ. ಹೀಗಿರುವಾಗ, ನ್ಯಾಯಬೆಲೆ ಅಂಗಡಿಗಳನ್ನು ಬಂದ್ ಮಾಡುವುದಕ್ಕೆ ಈಗ ಸೂಕ್ತ ಸಮಯವಲ್ಲ. ಆದ್ದರಿಂದ, ಅವರು ನಡೆಸುವ ಬಂದ್‌ಗೆ ನಮ್ಮ ಸಂಘದ ಸದಸ್ಯರು ಯಾರು ಭಾಗಿಯಾಗುವುದಿಲ್ಲ ಎಂದು ಸರ್ಕಾರಿ ಪಡಿತರ ವಿತರಕ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಹೇಳಿದ್ದಾರೆ.

    ಇದನ್ನೂ ಓದಿ:ನಾರಿಶಕ್ತಿಯ ಚಿಕ್ಕಿಯ ಮೂಗುತಿ ; ಮಹಿಳಾ ಪ್ರಧಾನ ಚಿತ್ರಕ್ಕೆ ಅಶ್ವಿನಿ ಪುನೀತ್ ಪವರ್

    ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ನೀಡಲಾಗುತ್ತಿರುವ ಅಕ್ಕಿಯನ್ನು ಕಾರ್ಡ್‌ದಾರರಿಗೆ ಹಂಚಿಕೆ ಮಾಡಲಾಗುತ್ತಿದೆ. ಇದಕ್ಕೆ ನಮಗೆ ಕಮಿಷನ್ ಸಿಗುತ್ತಿದೆ. ಆದರೂ, ಸರ್ಕಾರ ನೀಡುತ್ತಿರುವ ಕಮಿಷನ್ ಹಣವೂ ಸಾಲುತ್ತಿಲ್ಲ. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಕಾರ್ಡ್‌ದಾರರಿಗೆ ಹಣ ನೀಡುತ್ತಿದೆ. ಹಣ ಬದಲು ಅಕ್ಕಿ ನೀಡಿದರೆ ಮಾತ್ರ ಕಮಿಷನ್ ದೊರೆಯುತ್ತದೆ. ನ್ಯಾಯಬೆಲೆ ಅಂಗಡಿ ಮಾಲೀಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಈಗಾಗಲೇ ಇಲಾಖೆ ಗಮನಕ್ಕೆ ತರಲಾಗಿದೆ. ಚುನಾವಣೆ ವೇಳೆ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ೋಷಿಸಿತ್ತು. ಆದರೆ, ಅಧಿಕಾರಕ್ಕೆ ಬಂದು ಐದೂವರೆ ತಿಂಗಳ ಕಳೆದರೂ ಅಕ್ಕಿ ನೀಡಲು ಕಾಂಗ್ರೆಸ್ ಸರ್ಕಾರ ವಿಲವಾಗಿದೆ. ಎಲ್ಲ ಸಮಸ್ಯೆಗಳನ್ನು ಈಡೇರಿಸುವಂತೆ ಮುಂದಿನ ದಿನಗಳಲ್ಲಿ ನಾವು ಪ್ರತಿಭಟನೆ ನಡೆಸಲಾಗುವುದು ಎಂದು ಕೃಷ್ಣಪ್ಪ ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts