More

    ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್​ ತೀರ್ಪು ಅಂತಿಮ: ತಮಿಳುನಾಡು ಸಚಿವ ದೊರೈ ಮುರುಗನ್

    ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ನಾವು ಕರ್ನಾಟಕ ಸರ್ಕಾರದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್​ ನೀಡಿರುವ ತೀರ್ಪು ಅಂತಿಮ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್​ ಹೇಳಿದ್ದಾರೆ.

    ಕಾವೇರಿ ನೀರು ಹಂಚಿಕೆ ಕುರಿತಾಗಿ ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ತಮಿಳುನಾಡು ಯಾವುದೇ ಕಾರಣಕ್ಕೂ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಮಾತಿಲ್ಲ ಎಂದಿದ್ದಾರೆ.

    ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪ್ರಧಾನಿ ಮಧ್ಯಸ್ಥಿಕೆಗೆ ಕರ್ನಾಟಕ ಸರ್ಕಾರ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಮಾತನಾಡುವುದರಲ್ಲಿ ಯಾವುದೇ ಪ್ರಯೋಜವಿಲ್ಲ. ಇಷ್ಟು ವರ್ಷಗಳಿಂದ ಮಾತುಕತೆ ನಡೆಸಿದ್ದರು ಯಾವುದೇ ಫಲ ಕೊಟ್ಟಿಲ್ಲ. ಆದ್ದರಿಂದ ಕರ್ನಾಟಕ ಸರ್ಕಾರ ನೀರು ಹಂಚಿಕೆ ವಿಚಾರವಾಗಿ ಕಾವೇರಿ ಜಲವಿವಾದ ನ್ಯಾಯಮಂಡಳಿಯನ್ನು ಸಂಪರ್ಕಿಸಬೇಕಾಯಿತು. ಅಂತಿಮವಾಗಿ ತೀರ್ಪು ನಮ್ಮ ಪರ ಬಂತು ಎಂದಿದ್ದಾರೆ.

    Cauvery River Basin

    ಇದನ್ನೂ ಓದಿ: ಒಬಿಸಿ ಕೋಟಾ ಇಲ್ಲದೇ ಮಹಿಳಾ ಮೀಸಲಾತಿ ಮಸುದೆ ಅಪೂರ್ಣ: ರಾಹುಲ್​ ಗಾಂಧಿ

    ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್​ ತೀರ್ಪು ಅಂತಿಮವಾಗಿದ್ದು, ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್​ ಹೇಳಿದ್ದಾರೆ.

    ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್​ ನಿರು ಹರಿಸುವಂತೆ ಆದೇಶಿಸಿರುವ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ನಿಯಂತ್ರಣ ಸಮಿತಿ ನೀಡಿರುವ ಆದೇಶದ ವಿಚಾರವಾಗಿ ಸುಪ್ರೀಂ ಕೋರ್ಟ್​ ಮದ್ಯಪ್ರವೇಶಿಸಲು ನಿರಾಕರಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts