ಬೆಂಗಳೂರು: ನ್ಯಾಯಾಂಗದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಸಿ.ಟಿ. ರವಿ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ವಿರುದ್ಧ ಕ್ರಮ ಜರುಗಿಸಲು ಕೋರಿ ಕೆಲವು ವಕೀಲರು ಸಲ್ಲಿಸಿರುವ ಅರ್ಜಿಗಳ ಕುರಿತು ಪ್ರತಿಕ್ರಿಯಿಸಲು ಸಮಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ನ್ಯಾಯಾಧೀಶರು ಸರ್ವಜ್ಞರಲ್ಲ ಎಂದಿದ್ದ ಸಿ.ಟಿ. ರವಿ ಹಾಗೂ ಲಸಿಕೆ ಉತ್ಪಾದನೆ ಆಗದಿದ್ದರೆ ನಾವೇನು ನೇಣು ಹಾಕಿಕೊಳ್ಳಬೇಕೇ ಎಂದು ಪ್ರಶ್ನಿಸಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವಂತೆ ಕೋರಿ ಕೆಲವು ವಕೀಲರು ಇ-ಮೇಲ್ ಮೂಲಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು.
ಇದನ್ನೂ ಓದಿ: ಹೆಂಡತಿಗೆ ಕಿರುಕುಳ ಕೊಟ್ಟು ಸಾವು ತಂದುಕೊಂಡ ಗಂಡ; ಆಕೆ ಹೊಡೆಯಿರಿ ಎಂದಳು, ಅವರಿಬ್ಬರು ಕೊಂದೇ ಬಿಟ್ಟರು…
ಈ ಕುರಿತು ಪ್ರಸ್ತಾಪಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್, ಈ ಅರ್ಜಿಗಳಿಗೆ ಪ್ರತಿಕ್ರಿಯಿಸಲು ನಮಗೆ ಸಮಯವಿಲ್ಲ. ಕೋವಿಡ್ ನಿರ್ವಹಣೆ ವಿಚಾರದಲ್ಲಿ ಸರ್ಕಾರಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡುತ್ತ ಬಂದಿದ್ದೇವೆ. ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇವೆ. ಎಲ್ಲರೂ ಸಂಯಮ ಕಾಯ್ದುಕೊಳ್ಳಬೇಕು ಎಂದಷ್ಟೇ ಹೇಳಿ, ವಿಚಾರವನ್ನು ಅಲ್ಲಿಗೇ ಮುಕ್ತಾಯಗೊಳಿಸಿದರು.
500 ರೂಪಾಯಿಗೆ ಲಸಿಕೆ ಮಾರಿ ಸಿಕ್ಕಿಬಿದ್ದ ವೈದ್ಯೆ; ಕೋವಿಡ್ ವ್ಯಾಕ್ಸಿನ್ ಅಕ್ರಮವಾಗಿ ಮಾರುತ್ತಿದ್ದ ಇಬ್ಬರ ಬಂಧನ
ಆಂಬುಲೆನ್ಸ್, ಗ್ಯಾಸ್ ಟ್ಯಾಂಕರ್ ಮಧ್ಯೆ ಭೀಕರ ಅಪಘಾತ: ರೋಗಿ ಸ್ಥಳದಲ್ಲೇ ಸಾವು, ಚಾಲಕ ಸೇರಿ ಮೂವರಿಗೆ ಗಾಯ